ಮೈಸೂರು: ಮಾನಸಿ ನಗರದ ರಸ್ತೆ ಡಿವೈಡರ್ನ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮೈಸೂರಿನ ಇಎಸ್ಐ ಆಸ್ಪತ್ರೆ ವೈದ್ಯ ಡಾ.ಶಿವಕುಮಾರ್(35) ಸ್ಥಳದಲ್ಲೇ ಮೃತಪಟ್ಟ ಘಟನೆ ನಗರದಲ್ಲಿ ಸಂಭವಿಸಿದೆ.
ಡಾ.ಶಿವಕುಮಾರ್ ಪ್ರಯಾಣಿಸುತ್ತಿದ್ದ ಕಾರು ಮಾನಸಿ ನಗರದ ರಿಂಗ್ ರಸ್ತೆ ಬಳಿ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿದೆ.
ಡಿಕ್ಕಿ ಹೊಡೆದ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ತೀವ್ರ ಗಾಯಗೊಂಡಿದ್ದ ಡಾ.ಶಿವಕುಮಾರ್ ಸ್ಥಳದಲ್ಲೇ ಕೊನೆಯುಸಿರೆಳೆದರು. ಸ್ಥಳಕ್ಕೆ ಬಂದ ಸಿದ್ಧಾರ್ಥ ನಗರ ಸಂಚಾರ ಠಾಣೆ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.