ಮೈಸೂರು

ಮೈಸೂರು ಡಿಸಿ ಡಾ.ಬಗಾದಿ ಗೌತಮ್ ಕೊರೊನಾ ದೃಢ

ಮೈಸೂರು: ಜಿಲ್ಲೆಯಲ್ಲಿ ಕೊರೊನಾ ಆರ್ಭಟ ಮುಂದುವರಿದಿದ್ದು, ಜಿಲ್ಲಾಧಿಕಾರಿ ಸೇರಿದಂತೆ ಅವರ ಕುಟುಂಬದ ಮೂವರಿಗೆ ಕೊರೊನಾ ಕಾಣಿಸಿಕೊಳ್ಳುವುದರೊಂದಿಗೆ ಸಕ್ರಿಯ ಪ್ರಕರಣ ಸಂಖ್ಯೆ 7,141ಕ್ಕೇರಿದಂತಾಗಿದೆ.

ಸದ್ಯ ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಅವರ ತಂದೆ, ಐದು ವರ್ಷದ ಮಗನಿಗೆ ಕೊರೊನಾ ಸೋಂಕು ತಗುಲಿದೆ. ಕಳೆದ ಕೆಲವು ದಿನಗಳಿಂದ ಡಾ.ಬಗಾದಿ ಗೌತಮ್ ಅವರು ಕರ್ತವ್ಯ ನಿಮಿತ್ತ ಮೈಸೂರಿನ ಹಲವು ಆಸ್ಪತ್ರೆಗಳಿಗೆ ಭೇಟಿ ನೀಡಿದ್ದರು. ಈ ವೇಳೆ ಅವರಿಗೆ ಕೊರೊನಾ ಸೋಂಕು ತಗುಲಿದೆ. ಭಾನುವಾರ ಸೋಂಕಿನ ಲಕ್ಷಣ ಕಂಡು ಬಂದ ಹಿನ್ನೆಲೆ ಕುಟುಂಬಸ್ಥರನ್ನು ತಪಾಸಣೆಗೊಳಪಡಿಸಿದ್ದರು. ಡಾ.ಬಗಾದಿ ಗೌತಮ್ ಸೇರಿ ಮೂವರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಡಾ.ಬಗಾದಿ ಗೌತಮ್ ಅವರ ಪತ್ನಿ ಅಶ್ವಥಿ ಅವರು ಮಂಡ್ಯ ಜಿಲ್ಲಾಧಿಕಾರಿಯಾಗಿದ್ದು, ಅವರು ಮಂಡ್ಯದಲ್ಲೆ ಉಳಿದಿದ್ದ ಕಾರಣ ಅವರಿಗೆ ಸೋಂಕು ತಗುಲಿಲ್ಲ ಇನ್ನೊಂದೆಡೆ ಜಿಲ್ಲಾ ಪಂಚಾಯಿತಿ ಕಚೇರಿಯ 19 ಸಿಬ್ಬಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರ ನಿಯಂತ್ರಣಕ್ಕೆ ಹಲವು ಕಾರ್ಯಗಳನ್ನು ಆನ್‌ಲೈನ್ ಸೇವೆ ಮೂಲಕ ಒದಗಿಸುತ್ತಿದ್ದರೂ ಜಿಪಂನ ವಿವಿಧ ಶಾಖೆಗಳ 19 ಮಂದಿಗೆ ಸೋಂಕು ದೃಢಪಟ್ಟಿದೆ. ಕಚೇರಿಗೆ ಸ್ಯಾನಿಟೈಸ್ ಮಾಡಿ ಉಳಿದ ಸಿಬ್ಬಂದಿಗೆ ಒಂದು ದಿನದ ಮಟ್ಟಿಗೆ ಮನೆಯಲ್ಲೇ ಇರುವಂತೆ ಕಳುಹಿಸಲಾಗಿದೆ. ಕಚೇರಿಯ ಪ್ರವೇಶ ದ್ವಾರದ ಗೇಟಿಗೆ ಬೀಗ ಹಾಕಿ ಸಾರ್ವಜನಿಕರನ್ನು ವಾಪಸ್ ಕಳುಹಿಸಲಾಗಿದೆ. ಮುಖ್ಯ ಕಾರ್ಯ ನಿರ್ವಹಣಾಧಿಕಾರಿ, ಉಪ ಕಾರ್ಯದರ್ಶಿ, ಮುಖ್ಯ ಯೋಜನಾಧಿಕಾರಿ, ಮುಖಲೆಕ್ಕಾಧಿಕಾರಿ ಕೊಠಡಿ ಸೇರಿ ಇಡೀ ಜಿಪಂ ಕಚೇರಿಯನ್ನು ಸ್ಯಾನಿಟೈಸ್ ಮಾಡಲಾಯಿತು.

ಮೈಸೂರಲ್ಲಿ ಸೋಮವಾರ 1,770 ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, ಇಂದು ಇನ್ನಷ್ಟು ಹೆಚ್ಚುವ ಸಾಧ್ಯತೆ ಇದೆ. ಇದುವರೆಗಿನ ಕೊರೊನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ 1,88,614 ಕ್ಕೇರಿದ್ದು ಸೋಮವಾರ  232  ಕೊರೊ‌ನಾ ವೈರಸ್ ಸೋಂಕಿತರು ಗುಣಮುಖರಾಗಿದ್ದಾರೆ. ಸದ್ಯ ಸಾವಿನ ಸಂಖ್ಯೆ ಕಡಿಮೆ ಇರುವುದರಿಂದ ಜನ ನೆಮ್ಮದಿಯುಸಿರು ಬಿಡುವಂತಾಗಿದೆ.

Swathi MG

Recent Posts

ಸಾಕು ನಾಯಿ ವಿಚಾರಕ್ಕೆ ಮಾಲೀಕನಿಗೆ ಐವರಿಂದ ಹಲ್ಲೆ: ಆರೋಪಿಗಳು ಅರೆಸ್ಟ್‌

ಸಾಕು ನಾಯಿ ವಿಚಾರಕ್ಕೆ ಏಕಾಏಕಿ ಐವರು ನಾಯಿ ಮತ್ತು ಮಾಲೀಕನ ಮೇಲೆ ಹಲ್ಲೆ ನಡೆಸಿದ್ದು ಇಬ್ಬರ ಸ್ಥಿತಿ ಗಂಭೀರವಾಗಿದೆ. ಈ…

24 mins ago

ನಿವೃತ್ತಿ ಬಗ್ಗೆ ವಿರಾಟ್ ಕೊಹ್ಲಿ ಬಿಚ್ಚುಮಾತು: ಫ್ಯಾನ್ಸ್​ ಶಾಕ್!

ಉತ್ತಮ ನಿರೀಕ್ಷೆಯೊಂದಿಗೆ ಐಪಿಎಲ್-2024 ಅಭಿಯಾನ ಆರಂಭಿಸಿದ ರಾಯಲ್ ಚಾಲೆಂಜರ್ಸ್​ ಬೆಂಗಳೂರು (ಆರ್‌ಸಿಬಿ) ತನ್ನ ಮೊದಲ ಪಂದ್ಯದಲ್ಲೇ ಸೋಲಿನಿಂದ ಲೀಗ್ ಪ್ರಾರಂಭಿಸಿತು.…

30 mins ago

ಬಾತ್​ ರೂಂನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ವಿದ್ಯಾರ್ಥಿನಿಯ ಮೃತದೇಹ ಪತ್ತೆ !

ನಗರದಲ್ಲಿ​ ಯುವತಿಯೊಬ್ಬಳ ಅನುಮಾನಾಸ್ಪದ ಸಾವು ಎಲ್ಲರನ್ನು ಬೆಚ್ಚಿ ಬೀಳಿಸಿದೆ. 21 ವರ್ಷ ವಯಸ್ಸಿನ ಪ್ರಭುದ್ಧ ಎಂಬ ಯುವತಿ ಸಾವನ್ನಪ್ಪಿದ್ದಾಳೆ.

58 mins ago

ಅಂಜಲಿ‌ ಕೊಲೆ‌ ಕೇಸ್‌ ನಲ್ಲಿ ಕರ್ತವ್ಯ ಲೋಪ : ಇನ್ಸ್‌ಪೆಕ್ಟರ್, ಮಹಿಳಾ ಪೇದೆ ಅಮಾನತು

ಅಂಜಲಿ ಕೊಲೆ ಪ್ರಕರಣದ ಹಿನ್ನೆಲೆಯಲ್ಲಿ, ಬೆಂಡಿಗೇರಿ ಪೊಲೀಸ್‌ ಇನ್ಸ್‌ಪೆಕ್ಟರ್ ಸೇರಿ ಓರ್ವ ಸಿಬ್ಬಂದಿಯನ್ನು ಪೊಲೀಸ್ ಕಮೀಷನ‌ರ್ ಅಮಾನತು ಮಾಡಿ ಆದೇಶ…

1 hour ago

ಮಹತ್ವದ ತೀರ್ಪಿನಲ್ಲಿ ಇಡಿ ಕಾರ್ಯಗಳಿಗೆ ಕಡಿವಾಣ ಹೇರಿದ ಸುಪ್ರೀಂ ಕೋರ್ಟ್‌ !

ಅತ್ಯಂತ ಮಹತ್ವದ ತೀರ್ಪಿನಲ್ಲಿ ಸುಪ್ರೀಂ ಕೋರ್ಟ್‌, ಜಾರಿ ನಿರ್ದೇಶನಾಲಯದ ಕಾರ್ಯಗಳಿಗೆ ಕಡಿವಾಣ ಹೇರಿದೆ. ಯಾವುದೇ ವ್ಯಕ್ತಿ ವಿರುದ್ಧ ದಾಖಲಾದ ಅಕ್ರಮ…

1 hour ago

ಅಪರೇಷನ್‌ ವೇಳೆ ವೈದ್ಯೆಯ ಎಡವಟ್ಟು : ಹೊಟ್ಟೆಯಲ್ಲಿತ್ತು 3 ಅಡಿ ಉದ್ದದ ಬಟ್ಟೆ

ಹೆರಿಗೆ ನಂತರ ಅಪರೇಷನ್‌ ವೇಳೆ ವೈದ್ಯರ ಎಡವಟ್ಟಿನಿಂದ 3 ಅಡಿ ಉದ್ದದ ಬಟ್ಟೆಯನ್ನು ಹೊಟ್ಟೆಯಲ್ಲೇ ಬಿಟ್ಟು ಶಸ್ತ್ರಚಿಕಿತ್ಸೆ ಮಾಡಿರುವ ಘಟನೆ…

1 hour ago