ಮೈಸೂರು

ಮೈಸೂರು ನಗರದಲ್ಲಿಂದು 144 ಸೆಕ್ಷನ್ ಜಾರಿ : ಡಾ.ಚಂದ್ರಗುಪ್ತ

ಮೈಸೂರು: ಮೈಸೂರು ನಗರದಾದ್ಯಂತ ಸಿಆರ್‌ಪಿಸಿ ಸೆಕ್ಷನ್ 144 ರನ್ವಯ ನಿಷೇಧಾಜ್ಞೆ ಜಾರಿ ಮಾಡಿ ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ ಅವರು ಆದೇಶ ನೀಡಿದ್ದಾರೆ.

ನಿಷೇಧಾಜ್ಞೆಯು ಫೆ.11ರ ಶುಕ್ರವಾರ ಬೆಳಿಗ್ಗೆ 6 ಗಂಟೆಯಿಂದ ರಾತ್ರಿ  10 ಗಂಟೆವರೆಗೆ ಜಾರಿಯಲ್ಲಿರಲಿದೆ. ಕೆಲವರು ಸಾಮಾಜಿಕ ಜಾಲತಾಣದ ಮೂಲಕ ಅನಾಮಧೇಯವಾಗಿ ಪ್ರತಿಭಟನೆಗೆ ಕರೆಕೊಟ್ಟು ಸಾರ್ವಜನಿಕರಲ್ಲಿ ಗೊಂದಲ ಮೂಡಿಸಿ ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ಉಂಟು ಮಾಡಲು ಪ್ರಯತ್ನ ನಡೆಸುತ್ತಿರುವ ಹಿನ್ನಲೆಯಲ್ಲಿ ಮೈಸೂರು ನಗರದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ನಗರ ಪೊಲೀಸ್ ಆಯುಕ್ತರು ನಿಷೇಧಾಜ್ಞೆ ಜಾರಿ ಮಾಡಿದ್ದಾರೆ.

ಯಾವುದೇ ಸಂಘಟನೆ ಅಥವಾ ಸಾರ್ವಜನಿಕರು ಈ ಆದೇಶವನ್ನು ಉಲ್ಲಂಘಿಸಿ ಪ್ರತಿಭಟನೆ, ಮೆರವಣಿಗೆಯನ್ನು ನಡೆಸಲು ಪ್ರಯತ್ನಿಸಿದಲ್ಲಿ, ಅಲ್ಲಿ ಸೇರಿರುವ ಜನರ ಕೂಟವನ್ನು ಅಕ್ರಮ ಕೂಟವೆಂದು ಪರಿಗಣಿಸಿ, ಆದೇಶ ಉಲ್ಲಂಘನೆ ಕುರಿತಂತೆ ಕಾನೂನಿನ್ವಯ ಸೂಕ್ತ ಕ್ರಮಕೈಗೊಳ್ಳಲಾಗುವುದಾಗಿ ಎಚ್ಚರಿಕೆ ನೀಡಿದ್ದಾರೆ.

Swathi MG

Recent Posts

ಉಳುಮೆ ಮಾಡುತ್ತಿದ್ದ ವೇಳೆ ಟ್ರ್ಯಾಕ್ಟರ್ ರೋಟರಿಗೆ ಸಿಲುಕಿ ಬಾಲಕ ಸಾವು

ಉಳುಮೆ ಮಾಡುತ್ತಿದ್ದ ವೇಳೆ ಟ್ರ್ಯಾಕ್ಟರ್ ರೋಟರಿಗೆ ಬಾಲಕ ಸಿಲುಕಿ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಂಜನಗೂಡು ತಾಲ್ಲೂಕಿನ ದೇವರಸನಹಳ್ಳಿ ಗ್ರಾಮದಲ್ಲಿ ನಡೆದಿದೆ.

5 mins ago

ಹುಬ್ಬಳ್ಳಿ-ಧಾರವಾಡ ಕಮಿಷನರೇಟ್‌ಗೆ ಎನ್‌ ಶಶಿಕುಮಾ‌ರ್ ನೇಮಕ ಸಾಧ್ಯತೆ

ಅವಳಿ ನಗರದಲ್ಲಿ ಹೆಚ್ಚುತ್ತಿರುವ ಕ್ರೈಂ ರೇಟ್ ಕಡಿವಾಣ ಹಾಕುವಲ್ಲಿ ಹುಬ್ಬಳ್ಳಿ-ಧಾರವಾಡ ಪೊಲೀಸ್‌ ಕಮಿಷನ‌ರ್ ರೇಣುಕಾಸುಕುಮಾರ ಅವರನ್ನು ಬದಲಾವಣೆ ಮಾಡಬೇಕು ಅಂತ…

22 mins ago

ಜರ್ಮಿನಿಯಿಂದ ಲಂಡನ್‌ಗೆ ಹಾರಿದ ಪ್ರಜ್ವಲ್​ ರೇವಣ್ಣ

ಅಶ್ಲೀಲ ವಿಡಿಯೋ, ಲೈಂಗಿಕ ದೌರ್ಜನ್ಯ ಆರೋಪ ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ದೇಶಕ್ಕೆ ಹೋಗಿದ್ದು, ಇಲ್ಲಿಯವರೆಗು ಜರ್ಮನಿಯಲ್ಲಿದ್ದಾರೆ ಎಂದು…

43 mins ago

ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ ನಿಧನ

ಮುಂಬಯಿಯ ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ (75) ಅಲ್ಪಕಾಲದ ಅಸೌಖ್ಯದಿಂದ ಶುಕ್ರವಾರ ರಾತ್ರಿ ನಿಧನರಾದರು.

1 hour ago

ಚಲಿಸುತ್ತಿದ್ದ ಬಸ್‌ನಲ್ಲಿ ಬೆಂಕಿ: 10 ಮಂದಿ ಸಜೀವ ದಹನ

ಬಸ್‌ಗೆ ಬೆಂಕಿ ಹತ್ತಿಕೊಂಡು 10 ಮಂದಿ ಮೃತಪಟ್ಟು, 10ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ  ಹರಿಯಾಣದ ಕುಂಡಲಿ-ಮನೇಸರ್-ಪಲ್ವಾಲ್ ಎಕ್ಸ್‌ಪ್ರೆಸ್‌ ವೇಯಲ್ಲಿ…

1 hour ago

11 ತಿಂಗಳಿನಲ್ಲಿ ಬರೋಬ್ಬರಿ 5.38 ಕೋಟಿ ದಂಡ ವಸೂಲಿ ಮಾಡಿದ ಬಿಎಂಆರ್‌ಸಿಎಲ್‌

ನಮ್ಮ ಮೆಟ್ರೋದಲ್ಲಿ ಸುರಕ್ಷತೆ, ಭದ್ರತೆ ದೃಷ್ಟಿಯಿಂದ ಹಲವಾರು ನೀತಿ ನಿಯಮಗಳನ್ನು ಬಿಎಂಆರ್‌ಸಿಎಲ್‌ ಜಾರಿ ಮಾಡಿದೆ. ಬರೀ ನಿಯಮ ಮಾಡಿದ್ದು ಮಾತ್ರವಲ್ಲದೇ…

2 hours ago