Categories: ಮೈಸೂರು

ಮೊಸಂಬಾಯನಹಳ್ಳಿಯಲ್ಲಿ ಕೆರೆ ನೀರು ಜಾನುವಾರುಗಳಿಗೆ ಮಾತ್ರ!

ಮೈಸೂರು: ಸಾಮಾನ್ಯವಾಗಿ ಗ್ರಾಮದಲ್ಲೊಂದು ಕೆರೆಯಿದ್ದರೆ ಅದು ಎಲ್ಲದಕ್ಕೂ ಬಳಕೆಯಾಗುತ್ತದೆ. ಆದರೆ ತಾಲೂಕಿನ ಮೊಸಂಬಾಯನಹಳ್ಳಿ ಜನ ಮಾತ್ರ ತಮ್ಮೂರಿನ ಕೆರೆಯ ನೀರನ್ನು ಜಾನುವಾರುಗಳಿಗೆ ಮೀಸಲಿಟ್ಟು ಅನ್ಯ ಚಟುವಟಿಕೆಗಳಿಗೆ ಬಳಕೆ ಮಾಡದಂತೆ ತೀರ್ಮಾನ ಕೈಗೊಂಡಿದ್ದಾರೆ.

ಬಹಳಷ್ಟು ವರ್ಷಗಳ ನಂತರ ಕೆರೆಗಳಲ್ಲಿ ನೀರು ಕಾಣಿಸುತ್ತಿದೆ. ಈ ನೀರನ್ನು ಅನ್ಯಬಳಕೆಗೆ ಉಪಯೋಗಿಸಿದರೆ ಬೇಸಿಗೆಯ ದಿನಗಳಲ್ಲಿ ನೀರಿಗೆ ಹಾಹಾಕಾರ ಬರಬಹುದು. ಇದರಿಂದ ಜಾನುವಾರುಗಳಿಗೆ ತೊಂದರೆಯಾಗುತ್ತದೆ ಎಂಬ ಮುಂಜಾಗ್ರತೆಯಿಂದ ಈ ನಿರ್ಧಾರಕ್ಕೆ ಬಂದಿರುವುದು ಕಾಣಿಸುತ್ತಿದೆ. ಗ್ರಾಮದ ಹೆಚ್ಚಿನ ಜನರು ಹೈನುಗಾರಿಕೆಯಿಂದ ಜೀವನ ಸಾಗಿಸುತ್ತಿದ್ದಾರೆ. ಹೀಗಾಗಿ ಗ್ರಾಮದಲ್ಲಿರುವ ಜಾನುವಾರುಗಳಿಗೆ ನೀರಿನ ಅಗತ್ಯವಿದ್ದು ಆದ್ದರಿಂದ ನೀರನ್ನು ಅನ್ಯ ಉದ್ದೇಶಗಳಿಗೆ ಬಳಕೆ ಮಾಡಿದರೆ ಅದರ ಪರಿಣಾಮವನ್ನು ನಾವೇ ಎದುರಿಸಬೇಕಾಗುತ್ತದೆ ಎಂಬುದನ್ನು ಅರಿತು ಇಂತಹದೊಂದು ಕ್ರಮ ಕೈಗೊಂಡಿದ್ದಾರೆ.

ಈ ಹಿಂದೆ ಬರಗಾಲ ಕಾಡಿದಾಗ ಗ್ರಾಮದ ಕೆರೆಯಲ್ಲಿ ನೀರು ಇಲ್ಲದೆ ಜಾನುವಾರುಗಳನ್ನು ಸಾಕಲಾಗದೆ ಜನರು ಸಂಕಷ್ಟ ಅನುಭವಿಸಿದ್ದರು. ಹೀಗಾಗಿ ಮತ್ತೆ ಇಂತಹ ಪರಿಸ್ಥಿತಿ ಮರುಕಳಿಸಬಾರದು ಎಂಬುದು ಗ್ರಾಮಸ್ಥರ ಅಭಿಪ್ರಾಯವಾಗಿದೆ. ಹೀಗಾಗಿ ಇವತ್ತು ಗ್ರಾಮಸ್ಥರೆಲ್ಲರೂ ಒಂದೊಳ್ಳೆಯ ತೀರ್ಮಾನಕ್ಕೆ ಬಂದಿದ್ದರಿಂದ ಯಾರೂ ಕೆರೆಯ ನೀರನ್ನು ಅನ್ಯ ಉದ್ಧೇಶಕ್ಕೆ ಬಳಸದ ಕಾರಣ ಇವತ್ತು ಕೆರೆಯಲ್ಲಿ ಸಾಕಷ್ಟು ನೀರಿದೆ. ಇದರಿಂದ  ಜಾನುವಾರುಗಳಿಗೆ ಸಹಾಯವಾಗಿದೆ.  ಕೆರೆಯ ಸುತ್ತಲೂ ಪ್ರಾಣಿಪಕ್ಷಿಗಳು ಬೀಡು ಬಿಟ್ಟು ಬದುಕು ಕಟ್ಟಿಕೊಂಡಿವೆ. ಇನ್ನು ಸಾರ್ವಜನಿಕರ ತಿಳುವಳಿಕೆಗಾಗಿ ಕೆರೆಯ ಮುಂಭಾಗದ ದಡದಲ್ಲಿ ನಾಮಫಲಕ ಅಳವಡಿಸಿ ಅದರಲ್ಲಿ ಕೆರೆಯ ನೀರನ್ನು ಜಾನುವಾರಗಳ ಉಪಯೋಗಕ್ಕೆ ಬಿಟ್ಟು ಅನ್ಯ ಕಾರಣಗಳಿಗೆ ಬಳಸಿದರೆ ಪೊಲೀಸ್ ಮೊಕದ್ದಮೆ ಹೂಡಲಾಗುವುದು ಎಂಬ ಸೂಚನಾ ಫಲಕವನ್ನು ಹಾಕಲಾಗಿದೆ.

ಒಟ್ಟಾರೆಯಾಗಿ ಹೇಳಬೇಕೆಂದರೆ ಗ್ರಾಮಸ್ಥರ ಸಮಯಪ್ರಜ್ಞೆ ನೀರಿನ ಸಂರಕ್ಷಣೆಗೆ ಒತ್ತು ನೀಡಿದ್ದು, ಎಲ್ಲರೂ ತಮ್ಮ ಗ್ರಾಮಗಳಲ್ಲಿರುವ ಕೆರೆಗಳ ನೀರನ್ನು ಸಂರಕ್ಷಣೆ ಮಾಡಿದರೆ ಕೆರೆಗಳ ಉಳಿವು ಜತೆಗೆ ನೀರಿನ ಸಂರಕ್ಷಣೆಯೂ ಸಾಧ್ಯವಾಗಿ ಅಂತರ್ಜಲ ಹೆಚ್ಚಾಗಲಿದೆ ಎಂಬುದಂತು ಸತ್ಯ.

Swathi MG

Recent Posts

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

7 hours ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

7 hours ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

7 hours ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

8 hours ago

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

9 hours ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

9 hours ago