Categories: ಮೈಸೂರು

ಲಾಕ್‌ ಡೌನ್, ವೀಕೆಂಡ್ ಕರ್ಫ್ಯೂ ಮುಖ್ಯಮಂತ್ರಿಗಳ ತೀರ್ಮಾನವಲ್ಲ: ಸಚಿವ ಸೋಮಶೇಖರ್

ಮೈಸೂರು:ಮೂರನೇ ಅಲೆ ಗಂಭೀರವಲ್ಲದಿದ್ದರೂ ಸ್ವಲ್ಪಮಟ್ಟಿಗೆ ಮುಂಜಾಗ್ರತೆ ತೆಗೆದುಕೊಳ್ಳಬೇಕು,ಲಾಕ್‌ಡೌನ್, ವೀಕೆಂಡ್ ಕರ್ಫ್ಯೂ ಗಳು ಮುಖ್ಯಮಂತ್ರಿಗಳ ತೀರ್ಮಾನವಲ್ಲ. ತಜ್ಞರ ಸಲಹೆ ಮೇರೆಗೆ ಸಚಿವ ಸಂಪುಟದ ತೀರ್ಮಾನ ಮಾಡುವುದು ಎಂದು ಸಚಿವ ಎಸ್.ಟಿ.ಸೋಮಶೇಖರ್ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಸದ ಪ್ರತಾಪ್‌ ಸಿಂಹ ಜನಾಭಿಪ್ರಾಯವನ್ನು ಹೇಳಿದ್ದಾರೆ.ಶುಕ್ರವಾರ ಸಿಎಂ ಮತ್ತೆ ಸಭೆ ಕರೆದಿದ್ದಾರೆ. ಸಭೆಯಲ್ಲಿ ಎಲ್ಲರ ಅಭಿಪ್ರಾಯದ ಬಗ್ಗೆ ಚರ್ಚೆ ಮಾಡಿ ತೀರ್ಮಾನ ಮಾಡುತ್ತಾರೆ. ಸಿಎಂಗೂ ಜನಾಭಿಪ್ರಾಯದ ಬಗ್ಗೆ ಮಾಹಿತಿಯಿದೆ ಎಂದರು.

ವಾರಕ್ಕೆ ಒಮ್ಮೆಯಾದರೂ ಕೆಲ ಕ್ರಮ ಕೈಗೊಳ್ಳುವುದು ಸೂಕ್ತವೆಂದು ತಜ್ಞರು ಹೇಳಿದ್ದಾರೆ. ಮೈಸೂರಿನಲ್ಲಿ ವೀಕೆಂಡ್ ಕರ್ಫ್ಯೂ ಸಂಬಂಧ ಇಂದು ಸಂಜೆ ಸಭೆ ಕರೆದಿದ್ದೇನೆ ಎಂದರು.

 

ಫೆಬ್ರವರಿ ಮೊದಲ ವಾರದಿಂದ ಮೈಸೂರಿನಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ನಾಲ್ಕು ಸಾವಿರ ಗಡಿ ದಾಟಲಿದೆ. ಫೆಬ್ರವರಿ ನಂತರದಲ್ಲಿ ಆ ಕೇಸ್‌ ಗಳು ಇಳಿಕೆಯಾಗುತ್ತವೆ. ಮೈಸೂರಿನಲ್ಲಿ ಪೊಲೀಸರು, ವಿದ್ಯಾರ್ಥಿಗಳು, ಶಿಕ್ಷಕರು ಎಲ್ಲರಲ್ಲೂ ಸೋಂಕು ಬಂದಿದೆ. ಸೋಂಕಿನ ಗುಣಲಕ್ಷಣ ಇರುವವರನ್ನು ಮಾತ್ರ ನಾವು ಟೆಸ್ಟ್ ಮಾಡುತ್ತಿದ್ದೇವೆ. ಬೇರೆ ಕಡೆಗಳಲ್ಲಿ ಎಲ್ಲಾ ಜನರನ್ನು ಟೆಸ್ಟ್ ಮಾಡುತ್ತಿದ್ದಾರೆ.

ಹೀಗಾಗಿ ನಮ್ಮಲ್ಲಿ ಪಾಸಿಟಿವ್ ಸಂಖ್ಯೆ ಹೆಚ್ಚಿದೆ. ಸಂಜೆ ಈ ಸಂಬಂಧ ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸುತ್ತಿದ್ದೇನೆ. ಸಭೆಯಲ್ಲಿ ಜಿಲ್ಲೆಯ ಸ್ಥಿತಿಗತಿ ಬಗ್ಗೆ ಮಾಹಿತಿ ಪಡೆದು ಮುಂದಿನ ಕ್ರಮದ ಬಗ್ಗೆ ನಿರ್ಧಾರ ಮಾಡುತ್ತೇವೆ ಎಂದು ಸಚಿವ ಎಸ್.ಟಿ ಸೋಮಶೇಖರ್ ಹೇಳಿದರು.

Swathi MG

Recent Posts

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

1 hour ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

2 hours ago

ನಂಜನಗೂಡು ತಾಲ್ಲೂಕಿಗೆ ಶೇ.86.74 ರಷ್ಟು ಫಲಿತಾಂಶ: ವಿದ್ಯಾರ್ಥಿನಿ ಬಾಂಧವ್ಯ ತಾಲೂಕಿಗೆ ಪ್ರಥಮ ‌

ತಾಲ್ಲೂಕಿಗೆ ಶೇ.86.74 ರಷ್ಟು ಫಲಿತಾಂಶ ಬಂದಿದ್ದು, ನಂಜನಗೂಡಿನ ಸರ್ಕಾರಿ ಆದರ್ಶ ಶಾಲೆಯ ವಿದ್ಯಾರ್ಥಿನಿ ಬಾಂಧವ್ಯ ತಾಲ್ಲೂಕಿಗೆ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾರೆ…

2 hours ago

ಲೋಕಸಭೆ ಚುನಾವಣೆ: ಭಾಲ್ಕಿ ಕ್ಷೇತ್ರದಲ್ಲಿ ಅತ್ಯಧಿಕ ಮತದಾನ

ಬೀದರ್‌ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು ಶೇ 65.45ರಷ್ಟು ಮತದಾನ ದಾಖಲಾಗಿದ್ದು, ಎಂಟು ವಿಧಾನಸಭಾ ಕ್ಷೇತ್ರಗಳ ಪೈಕಿ ಭಾಲ್ಕಿಯಲ್ಲಿ ಅತಿ ಹೆಚ್ಚು…

2 hours ago

ಕುಡಿಯುವ ನೀರಿನ ಸಮಸ್ಯೆ ನಿವಾರಣೆ: ಮಲಪ್ರಭಾ ಕಾಲುವೆಗೆ ಮೇ 14 ರಿಂದ 23 ರವರೆಗೆ ನೀರು

ಮೇ 14 ರಿಂದ 23 ರವರೆಗೆ ನವಿಲುತೀರ್ಥ ಜಲಾಶಯದಿಂದ ಮಲಪ್ರಭಾ ಹಾಗೂ ನರಗುಂದ ಶಾಖಾ ಕಾಲುವೆ ಮೂಲಕ ನವಲಗುಂದ ಅಣ್ಣಿಗೇರಿ,…

3 hours ago

ಬಿಜೆಪಿ ಸಾಮಾಜಿಕ ಜಾಲತಾಣ ಸಂಚಾಲಕ ಪ್ರಶಾಂತ್‌ ಮಾಕನೂರು ಬಂಧನ

ಎಸ್‌ಸಿ, ಎಸ್‌ಟಿ ಅನುದಾನ ಮುಸ್ಲಿಂ ಪಾಲಾಗುತ್ತಿದೆ ಎಂದು ಬಿಜೆಪಿ ತನ್ನ ಎಕ್ಸ್‌ ಖಾತೆಯನ್ನು ವಿಡಿಯೋ ಜಾಹೀರಾತು ಪ್ರಕಟಿಸಿತ್ತು. ಈ ವಿಡಿಯೋ…

3 hours ago