News Karnataka Kannada
Wednesday, May 01 2024
ಮೈಸೂರು

ವಾರ್ಡ್ ನಂಬರ್ 36ರ ಉಪಚುನಾವಣೆ ಹಿನ್ನೆಲೆ : ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ

Mysore Corporation Mcc
Photo Credit :

ಮೈಸೂರು ; ಮುಂದಿನ ಸೆಪ್ಟೆಂಬರ್‌ 3 ರಂದು ಮೈಸೂರು ಮಹಾನಗರ ಪಾಲಿಕೆಯ ವಾರ್ಡ್ ನಂಬರ್ 36ರ ಉಪಚುನಾವಣೆ ನಡೆಯಲಿದ್ದು, ಮತದಾನ ನಡೆಯುವ 11ಮತಗಟ್ಟೆಗಳ ಸುತ್ತ 144 ಸೆಕ್ಷನ್ ನ್ನು ಜಾರಿಗೊಳಿಸಿ ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ ಆದೇಶ ಹೊರಡಿಸಿದ್ದಾರೆ.
ಮೈಸೂರು ನಗರದ ಆಲನಹಳ್ಳಿ ಪೊಲೀಸ್ ಠಾಣಾ ಸರಹದ್ದಿನ ಮೈಸೂರು ಮಹಾನಗರ ಪಾಲಿಕೆಯ ವಾರ್ಡ್ ನಂಬರ್36ರ ಉಪಚುನಾವಣೆ ಮತದಾನ ನಡೆಯುವ 11ಮತಗಟ್ಟೆಗಳ 100ಮೀಟರ್ ವ್ಯಾಪ್ತಿ ಪ್ರದೇಶದ ಸುತ್ತಲೂ ಸೆ.3ರಂದು ಬೆಳಿಗ್ಗೆ 6ರಿಂದ ರಾತ್ರಿ 8ಗಂಟೆಯವರೆಗೆ ಸಿಆರ್ ಪಿಸಿ ಕಲಂ 144ರನ್ವಯ ನಿಷೇಧಾಜ್ಞೆ ಘೋಷಿಸಿದ್ದಾರೆ. ಈ ದಿನದಂದು ಚುನಾವಣೆ ನಡೆಯುವ ಪ್ರದೇಶ/ವಾರ್ಡ್ ವ್ಯಾಪ್ತಿಯಲ್ಲಿ ಯಾವುದೇ ಸಂತೆ/ಜಾತ್ರೆ ನಡೆಯದಂತೆ ನಿಷೇಧಾಜ್ಞೆ ಘೋಷಿಸಿದ್ದಾರೆ. ನಿಷೇಧಾಜ್ಞೆ ಉಲ್ಲಂಘಿಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು