ಮೈಸೂರು

ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿಗೆ ಗೆಲುವು ಖಚಿತ: ಗಣೀಶ್ ಕಾರ್ಣಿಕ್

ಮೈಸೂರು: ದಕ್ಷಿಣ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮೈ.ವಿ.ರವಿಶಂಕರ್ ಗುರುವಾರ ನಾಮಪತ್ರ ಸಲ್ಲಿಸಲಿದ್ದಾರೆ. ರಾಜ್ಯಾಧ್ಯಕ್ಷ ನಳಿನ್‌ಕುಮಾರ್ ಕಟೀಲ್ ಅಧ್ಯಕ್ಷತೆಯಲ್ಲಿ ನಡೆಯುವ ಸಭೆ ಬಳಿಕ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ.

ಈ ನಡುವೆ ಮೈಸೂರಿನಲ್ಲಿ ಮಾತನಾಡಿದ ಬಿಜೆಪಿ ರಾಜ್ಯ ಮಾಧ್ಯಮ ವಕ್ತಾರ ಗಣೀಶ್ ಕಾರ್ಣಿಕ್, ಕೇಂದ್ರ ಹಾಗೂ ರಾಜ್ಯದಲ್ಲಿ ಬಿಜೆಪಿ ಸರ್ಕಾರವಿದೆ. ಡಬಲ್ ಇಂಜಿನ್ ಸರ್ಕಾರವಿದ್ದರೆ ಅಭಿವೃದ್ಧಿ ಸಾಧ್ಯ ಎಂಬ ಅರಿವು ಮತದಾರರಿಗೆ ಇದೆ. ಅಲ್ಲದೆ ಬಿಜೆಪಿ ಕಾರ್ಯ ವೈಖರಿ ಮೆಚ್ಚುಗೆ ಪಡೆದುಕೊಂಡಿರುವುದರಿಂದ ಪರಿಷತ್ ಚುನಾವಣೆಯಲ್ಲಿ ಗೆಲ್ಲಲಿದ್ದೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ರೈತರ ಮಕ್ಕಳ ವಿದ್ಯಾಭ್ಯಾಸಕ್ಕೆ ರಾಜ್ಯ ಸರ್ಕಾರ ಒಂದು ವರ್ಷದಲ್ಲಿ 7.19ಲಕ್ಷ ವಿದ್ಯಾರ್ಥಿಗಳಿಗೆ 263 ಕೋಟಿ ವಿದ್ಯಾರ್ಥಿವೇತನ ನೀಡಿದೆ. ಸಂಧ್ಯಾ ಸುರಕ್ಷಾ, ವಿಧವೆಯರ ಮಾಸಾಶನವನ್ನು 200ರೂ. ಹೆಚ್ಚಿಸಿದೆ. ಜನಸಾಮಾನ್ಯರಿಗೆ ಮುಟ್ಟುವ ಕೆಲಸವನ್ನು, ರೈತರ ಪರವಾದ ನಿರ್ಣಯಗಳನ್ನು ಮುಖ್ಯಮಂತ್ರಿಗಳು ಮಾಡುತ್ತಿದ್ದಾರೆ ಎಂದರು.

ಭಾರತಕ್ಕೆ ಶ್ರೀಲಂಕಾ ಪರಿಸ್ಥಿತಿ ಬರಲಿದೆ ಎಂಬ ಸಿದ್ದರಾಮಯ್ಯ ಅವರ ಹೇಳಿಕೆಗೆ ತಿರುಗೇಟು ನೀಡಿದ ಕಾರ್ಣಿಕ್, 13 ಬಾರಿ ಬಜೆಟ್ ಮಂಡಿಸಿ, ತಾವೊಬ್ಬ ಆರ್ಥಿಕ ತಜ್ಞ ಎಂದು ಬಿಂಬಿಸಿಕೊಳ್ಳುವ ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಏನು ಮಾಡಿದ್ದಾರೆ ಎಂದು ಪ್ರಶ್ನಿಸಿದ್ದಾರೆ.

ಬಿಜೆಪಿಗೆ ಸ್ವತಂತ್ರವಾಗಿ ಅಧಿಕಾರ ಹಿಡಿಯುವ ವಿಶ್ವಾಸ ಇಲ್ಲ ಎಂಬ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಹೇಳಿಕೆಗೆ ತಿರುಗೇಟು ನೀಡಿದ ಅವರು, ದೇಶದಲ್ಲಿ 8 ವರ್ಷದಿಂದ ಬಿಜೆಪಿ ಅಧಿಕಾರ ಸ್ವತಂತ್ರವಾಗಿ ಅಧಿಕಾರ ನಡೆಸುತ್ತಿದೆ. ಸರಳ ಬಹುಮತದಿಂದ ಅಧಿಕಾರ ಹಿಡಿದಿದೆ. ಜತೆಗೆ ದೇಶದ ಹೆಚ್ಚು ರಾಜ್ಯಗಳಲ್ಲಿ ಬಿಜೆಪಿ ಅಧಿಕಾರ ಹಿಡಿದಿದೆ. ಹೆಚ್.ಡಿ.ಕುಮಾರಸ್ವಾಮಿಯವರು ಎರಡು ಬಾರಿ ಸಿಎಂ ಆಗಿದ್ದಾಗ ಸ್ವತಂತ್ರವಾಗಿ ಅಧಿಕಾರ ಹಿಡಿದಿದ್ರಾ? ಅವಕಾಶವಾದಿ ರಾಜಕಾರಣ ಮಾಡುತ್ತಿರುವ ಕುಮಾರಸ್ವಾಮಿ ಹೇಳಿಕೆಗೆ ಪ್ರಾಮುಖ್ಯತೆ ಇಲ್ಲ. ಇದು ಅವರ ಅಪ್ರಬುದ್ಧತೆ ತೋರಿಸುತ್ತದೆ. ಬಿಜೆಪಿಗೆ ರಾಜ್ಯದ ಜನತೆಯ ಆಶೀರ್ವಾದ ಇದೆ. ಚುನಾವಣೆಗೆ 11 ತಿಂಗಳಷ್ಟೇ ಬಾಕಿ ಇದೆ. ಯಾರಿಗೆ ಬಹುಮತ ಬರುತ್ತದೆ ಎನ್ನುವುದನ್ನು ಜನತೆ ನಿರ್ಧರಿಸುತ್ತಾರೆ ಎಂದರು.

Gayathri SG

Recent Posts

ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಮಹಿಳೆಯ ತಲೆ ಸಿಕ್ಕಿಕೊಂಡು ಪರದಾಟ

ಕೆಎಸ್‌ಆರ್‌ಟಿಸಿ ಬಸ್‌ ನ ಕಿಟಕಿಯಿಂದ ಉಗುಳಲು ಹೋಗಿ ಮಹಿಳೆಯೊಬ್ಬರ ತಲೆ ಸಿಕ್ಕಿಕೊಂಡಿರುವ ಘಟನೆ ನಡೆದಿದೆ.

1 min ago

92ನೇ ಜನ್ಮದಿನ ಆಚರಿಸಿಕೊಳ್ಳದಿರಲು ಎಚ್‌.ಡಿ. ದೇವೇಗೌಡರ ನಿರ್ಧಾರ!

ಇದೇ ತಿಂಗಳ 18 ರಂದು 92ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವ ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರು ಈ ಬಾರಿ ಹುಟ್ಟುಹಬ್ಬ…

4 mins ago

ಬಂಡೀಪುರ ರಸ್ತೆಯಲ್ಲಿ ಜೋಡಿ ಜಿಂಕೆಗಳ ಕುಸ್ತಿ

ವಾಹನಗಳ ಸಂಚಾರವಿದ್ದರೂ ರಸ್ತೆಬದಿಯಲ್ಲಿ ಜೋಡಿ ಜಿಂಕೆಗಳು ನಾನಾ-ನೀನಾ ಎಂದು ಕುಸ್ತಿ ಮಾಡಿದ ಘಟನೆ ಮೈಸೂರು-ಉಟಿ ರಾಷ್ಟ್ರೀಯ ಹೆದ್ದಾರಿ ಹಾದುಹೋಗುವ ಬಂಡೀಪುರದ…

21 mins ago

‘ಜೀವನಕ್ಕೆ ಹೊಸಬರು ಬರಲಿದ್ದಾರೆ’: ಕುತೂಹಲ ಮೂಡಿಸಿದ ಪ್ರಭಾಸ್ ಪೋಸ್ಟ್ ವೈರಲ್‌

ಪ್ರಭಾಸ್ ಮದುವೆ ಬಗ್ಗೆ ಆಗಾಗ್ಗೆ ಸುದ್ದಿ ಹರಡುತ್ತಲೇ ಇರುತ್ತದೆ. ದರಲ್ಲಿಯೂ ನಟಿ ಅನುಷ್ಕಾ ಶೆಟ್ಟಿ ಜೊತೆಗಂತೂ ಪ್ರಭಾಸ್ ಮದುವೆಯೇ ಆಗಬಿಟ್ಟಿದ್ದಾರೆ…

26 mins ago

ಎಂಜಿನಿಯರಿಂಗ್‌ ವಿದ್ಯಾರ್ಥಿನಿ ಹಾಸ್ಟೆಲ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ

ಅನುಮಾನಾಸ್ಪದ ರೀತಿಯಲ್ಲಿ ಎಂಜಿನಿಯರಿಂಗ್‌ ಕಾಲೇಜಿನ ವಿದ್ಯಾರ್ಥಿನಿ ಹಾಸ್ಟೆಲ್‌ನಲ್ಲಿ ಮೃತಪಟ್ಟ ಘಟನೆ ಆನೇಕಲ್ ತಾಲೂಕಿನ ಚಂದಾಪುರ ಸಮೀಪ ನಡೆದಿದೆ.

34 mins ago

ಮಂತ್ರಿಮಾಲ್​ನ ಬೀಗ ತೆರೆಯಲು ಬಿಬಿಎಂಪಿಗೆ ಹೈಕೋರ್ಟ್ ಆದೇಶ

ಆಸ್ತಿ ತೆರಿಗೆ ಕಟ್ಟದ ಹಿನ್ನೆಲೆ ಕಳೆದ ಶುಕ್ರವಾರ ಪ್ರತಿಷ್ಠಿತ ಮಂತ್ರಿಮಾಲ್ ನನ್ನು ಬಂದ್ ಮಾಡಲಾಗಿತ್ತು, ಮಾಲ್‌ ನ ಬೀಗ ತೆರೆಯುವಂತೆ ಬಿಬಿಎಂಪಿಗೆ…

51 mins ago