Categories: ಮೈಸೂರು

ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಮಾಜಿ ಮುಖ್ಯಮಂತ್ರಿ ಎಸ್​.ಎಂ. ಕೃಷ್ಣ ಅವರ ಆಯ್ಕೆ

ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಮಾಜಿ ಮುಖ್ಯಮಂತ್ರಿ ಎಸ್​.ಎಂ. ಕೃಷ್ಣ ಅವರನ್ನು ಆಯ್ಕೆ ಮಾಡಲಾಗಿದೆ. ಈ ಸಂಭ್ರಮದ ವಿಚಾರಕ್ಕೆ ಎಸ್​.ಎಂ. ಕೃಷ್ಣ ಪತ್ರದ ಮುಖೇನ ಪ್ರತಿಕ್ರಿಯೆ ನೀಡಿದ್ದಾರೆ. ಬಸವರಾಜ ಬೊಮ್ಮಾಯಿ, ಮಂತ್ರಿಮಂಡಲಕ್ಕೆ ಧನ್ಯವಾದಗಳನ್ನು ತಿಳಿಸಿದ್ದಾರೆ. ಹಾಗೂ ನಾಡಿಗೆ ಒಳಿತಾಗಲಿ ಎಂದು ಶುಭಕೋರಿದ್ದಾರೆ.

ಈ ವರ್ಷದ ವಿಶ್ವವಿಖ್ಯಾತ ಮೈಸೂರಿನ ದಸರಾ ಉದ್ಘಾಟನೆಗೆ ನನ್ನನ್ನು ಆಮಂತ್ರಿಸಿರುವ ನಿಮ್ಮ ಹಾಗೂ ನಿಮ್ಮ ಮಂತ್ರಿ ಮಂಡಲದ ಎಲ್ಲರಿಗೂ ನನ್ನ ಧನ್ಯವಾದಗಳು. ಯದುವಂಶದ ಮಹಾರಾಜರುಗಳು ನಾಡಿನ ಸಾಂಸ್ಕೃತಿಕ ಹಿರಿಮೆಯನ್ನು ವಿಶ್ವಕ್ಕೆ ಪಸರಿಸಲು ಆ ಮೂಲಕ ನಾಡಿನ ಹಿರಿಮೆಯನ್ನು ಎತ್ತಿ ಹಿಡಿಯಲು ಪ್ರಾರಂಭಿಸಿದ ದಸರಾ ಸರಿಸುಮಾರು 400 ವರ್ಷಗಳನ್ನು ಕಳೆದರೂ ತನ್ನ ವೈಭವವನ್ನು ಕಳೆದುಕೊಂಡಿಲ್ಲ ಎಂದು ಅವರು ಪತ್ರದಲ್ಲಿ ಬರೆದಿದ್ದಾರೆ.

ಪ್ರಥಮವಾಗಿ ವಿಜಯನಗರ ಸಾಮ್ರಾಟ ಶ್ರೀ ಕೃಷ್ಣದೇವರಾಯರ ಕಾಲದಲ್ಲಿ ಪ್ರಾರಂಭಗೊಂಡ ದಸರಾ ಶ್ರೀ ರಾಜ ಒಡೆಯರ್ ಅವರ ಕಾಲದಲ್ಲಿ ಮೈಸೂರು ಸಾಮ್ರಾಜ್ಯಕ್ಕೆ ವಿಸ್ತರಿಸಿ ಇಂದಿಗೂ ನಾಡಿನ ಸಾಂಸ್ಕೃತಿಕ ಪರಂಪರೆಯನ್ನು ಅನಾವರಣಗೊಳಿಸುತ್ತಿದೆ. ರಾಜಪ್ರಭುತ್ವದ ನಂತರ ಬಂದ ಪ್ರಜಾ ಸರ್ಕಾರಗಳು ದಸರಾ ಆಚರಣೆಗೆ ಕಿಂಚಿತ್ತೂ ಚ್ಯುತಿ ಬರದ ಹಾಗೆ ಆಚರಿಸುತ್ತ ಬಂದಿರುವುದು ನಾಡಿನ ಹಿರಿಮೆಯನ್ನು ಎತ್ತಿ ಹಿಡಿದಿದೆ ಎಂಬ ವಿಚಾರವನ್ನು ಕೃಷ್ಣ ತಮ್ಮ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ದೂರ ದೃಷ್ಟಿಯಿಂದ ಪ್ರತಿಷ್ಠಾನಗೊಂಡ ರೈತಾಪಿ ವರ್ಗವೆ ಅಧಿಕವಾಗಿರುವ ಮಂಡ್ಯ ಜಿಲ್ಲೆಯಿಂದ ಬಂದ ನಾನು ಈ ಬಾರಿ ದಸರಾ ಉದ್ಘಾಟಿಸುತ್ತಿರುವುದು ನನ್ನ ಬಾಳಿನ ಸುದೈವ. ತಾಯಿ ಚಾಮುಂಡೇಶ್ವರಿ ಮನುಕುಲಕ್ಕೆ ಬಂದಿರುವ ಕೊರೋನಾ ಮಹಾಮಾರಿಯಿಂದ ಮುಕ್ತಿಗೊಳಿಸಿ ನಾಡು ತಮ್ಮ ನೇತೃತ್ವದಲ್ಲಿ ಮತ್ತೆ ಅಭಿವೃದ್ಧಿಯೆಡೆಗೆ ಮುನ್ನಡೆಯಲಿ ಎಂದು ಆಶಿಸುತ್ತೇನೆ ಎಂದು ಶುಭಹಾರೈಸಿದ್ದಾರೆ.

Sneha Gowda

Recent Posts

ತೃತೀಯ ಲಿಂಗಿಯ ಹತ್ಯೆ ಪ್ರಕರಣ: ಮಹಿಳೆಯ ಬಂಧನ

ತೃತೀಯ ಲಿಂಗಿಯನ್ನು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಕೊಲೆ ಆರೋಪಿಯನ್ನು ಬಂಧಿಸಿದ್ದಾರೆ.

11 mins ago

ಬಿಗ್‌ಬಾಸ್‌ 16 ಸ್ಪರ್ಧಿ ʼಅಬ್ದು ರೋಝಿಕ್‌ʼಗೆ ಮದುವೆಯಂತೆ

ಬಿಗ್‌ಬಾಸ್‌ 16ನಲ್ಲಿ ಸ್ಪರ್ಧಿಸಿದ್ದ ಅಬ್ದು ರೋಝಿಕ್‌ ವಿಡಿಯೋವೊಂದನ್ನು ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ತಾನೀಗ ಪ್ರೀತಿಗೆ ಬಿದ್ದಿದ್ದು, ಜುಲೈ 7ರಂದು ಮನಮೆಚ್ಚಿದ…

21 mins ago

ಕೆ.ಆರ್.ಪೇಟೆಯಲ್ಲಿ ಜೆಡಿಎಸ್ ನಿಂದ ಬೃಹತ್ ಪ್ರತಿಭಟನೆ

ಹಾಸನದ ಸಿ.ಡಿ.ಹಗರಣವನ್ನು ಸಿ.ಬಿ.ಐ ತನಿಖೆಗೆ ಒಪ್ಪಿಸುವಂತೆ ಆಗ್ರಹಿಸಿ ಪಟ್ಟಣದಲ್ಲಿಂದು ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

36 mins ago

ಸೊಳ್ಳೆ ‘ಟ್ವೀಟ್ ಕಳುಹಿಸುವ’ ಫೋಟೋ ವೈರಲ್‌

ನಾವು ಪ್ರತಿದಿನ ಸೋಶಿಯಲ್‌ ಮಿಡಿಯಾಗಳಲ್ಲಿ ಹಲವಾರು ಟ್ವೀಟ್‌ಗಳು ಮತ್ತು ಪೋಸ್ಟ್ ಗಳನ್ನು ನೋಡುತ್ತೇವೆ.ಅದರಲ್ಲೂ ಕೆಲ ಪೋಸ್ಟ್‌ ಗಳು ನಮ್ಮನ್ನು ನಗುವಂತೆ…

51 mins ago

ಪಾಕಿಸ್ತಾನವನ್ನು ನಾವು ಗೌರವಿಸಬೇಕು ಎಂದ ಮಾಜಿ ಸಚಿವ ಮಣಿಶಂಕರ್ ಅಯ್ಯರ್‌

ಈ ಹಿಂದೆಯೂ ಪಾಕಿಸ್ತಾನವನ್ನು ಹಾಡಿಹೊಗಳಿ ವ್ಯಾಪಕ ಟೀಕೆಗೆ ಗುರಿಯಾಗಿದ್ದ ಕಾಂಗ್ರೆಸ್‌ ಮಾಜಿ ಸಚಿವ ಮಣಿಶಂಕರ್ ಅಯ್ಯರ್‌ ಈಗ ಮತ್ತೊಂದು ವಿವಾದಾತ್ಮಕ…

52 mins ago

ಅವರೆಕಾಳು ಕಚೋರಿ ಮನೆಯಲ್ಲೇ ಮಾಡುವುದು ಹೇಗೆ?

ಬಿಸಿ, ಬಿಸಿ ಅವರೆ ಕಚೋರಿಯನ್ನು ಮನೆಯಲ್ಲಿಯೇ ಮಾಡಿ ಸವಿಯುವುದು ಹೇಗೆ ಎಂಬ ಪ್ರಶ್ನೆಗೆ ಇಲ್ಲಿದೆ ತಯಾರಿಯ ಬಗೆಗಿನ ಮಾಹಿತಿ.

1 hour ago