Categories: ಮೈಸೂರು

ಶಾಂತಿ ಕದಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ: ಶಾಸಕ ಎ.ಎಚ್.ವಿಶ್ವನಾಥ್

ಮೈಸೂರು: ಶಾಂತಿ ಕದಡುವವರ ವಿರುದ್ಧ ಕಠಿಣ ಕ್ರಮ ಕೈಗೊಂಡು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸಂವಿಧಾನದ ಕರ್ತವ್ಯವನ್ನು ಸೂಕ್ತ ರೀತಿಯಲ್ಲಿ ಪಾಲನೆ ಮಾಡಬೇಕೆಂದು ಎಂದು ಮಾಜಿ ಸಚಿವ ಹಾಗೂ ಬಿಜೆಪಿ ಶಾಸಕ ಎ.ಎಚ್.ವಿಶ್ವನಾಥ್ ಅವರು ಸೋಮವಾರ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಡಿದ ಅವರು, ಒಂದಲ್ಲ ಒಂದು ವಿಚಾರಕ್ಕೆ ರಾಜ್ಯ ಸರಕಾರ ಮೂಲೆಗುಂಪಾಗುತ್ತಿದೆ. ಪಿಎಸ್‌ಐ ಹಗರಣ ಮತ್ತು ಇತರ ವಿವಾದಗಳು ಸರ್ಕಾರದ ವರ್ಚಸ್ಸಿಗೆ ಧಕ್ಕೆ ತಂದಿವೆ. ಬೊಮ್ಮಾಯಿ ಇದಕ್ಕೆ ಕಡಿವಾಣ ಹಾಕಿ ಸರಕಾರಕ್ಕೆ ಹೊಸ ಛಾಪು ಮೂಡಿಸಬೇಕು ಎಂದು ಹೇಳಿದ್ದಾರೆ.

ಇದೇ ವೇಳೆ ಪಕ್ಷವು ಹೊಸ ಮುಖಗಳಿಗೆ ಮತ್ತು ಯುವಕರಿಗೆ ಆದ್ಯತೆ ನೀಡಲಿದೆ ಎಂಬ ಬಿಜೆಪಿ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಹೇಳಿಕೆಯನ್ನು ಉಲ್ಲೇಖಿಸಿದ ವಿಶ್ವನಾಥ್ ಅವರು, ಅವರ ಹೇಳಿಕೆಯನ್ನು ನಾನು ಒಪ್ಪುತ್ತೇನೆ. ವಂಶಾಡಳಿತ ರಾಜಕಾರಣವನ್ನು ಕೊನೆಗಾಣಿಸಲು ನಾನೂ ಬಯಸುತ್ತೇನೆಂದು ತಿಳಿಸಿದ್ದಾರೆ.

Gayathri SG

Recent Posts

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

5 hours ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

6 hours ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

6 hours ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

6 hours ago

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

8 hours ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

8 hours ago