Categories: ಮೈಸೂರು

ಶಾಲೆಗೆ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಧೈರ್ಯ ತುಂಬಿದ ಶಾಸಕ ಎಸ್.ಎ. ರಾಮದಾಸ್

ಮೈಸೂರು, ; ಇಂದು 9 ರಿಂದ 12 ನೇ ತರಗತಿ ವರೆಗಿನ ಭೌತಿಕ ತರಗತಿಗಳು ಪ್ರಾರಂಭವಾಗುತ್ತಿದ್ದು, ನಗರದ ಸೇಂಟ್ ಮೆರೀಸ್ ಶಾಲೆಗೆ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಧೈರ್ಯ ತುಂಬಿ ಶಾಲೆಯ ವ್ಯವಸ್ಥೆಯನ್ನು ಪರಿಶೀಲನೆಯನ್ನು ಶಾಸಕ ಎಸ್.ಎ. ರಾಮದಾಸ್ ಅವರು ನಡೆಸಿದರು.
ಶಾಲಾ ವಿದ್ಯಾರ್ಥಿಗಳಿಗೆ ಮಾಸ್ಕ್, ಪೆನ್ನು ಹಾಗೂ ಚಾಕಲೇಟ್ ನ್ನು ನೀಡುವ ಮೂಲಕ ಶಾಸಕರು ಶುಭ ಕೋರಿ ಧೈರ್ಯ ತುಂಬಿದರು. ಕೋವಿಡ್ ಕರಾಳ ಛಾಯೆಯ 2 ವರ್ಷಗಳ ನಂತರದಲ್ಲಿ ಶಾಲೆ ಮತ್ತೆ ಪ್ರಾರಂಭವಾಗುತ್ತಿದೆ. ಭಾರತ ದೇಶದ ಮುಂದಿನ ಭವಿಷ್ಯವನ್ನು ಬರೆಯುವಂತಹ ಮಕ್ಕಳಿಗೆ ವಂದನೆಗಳು. ಈಗಾಗಲೇ ಸಾಂಕ್ರಾಮಿಕ ರೋಗಕ್ಕೆ ತುತ್ತಾಗಿ ಲಕ್ಷಾಂತರ ಜನರು ಪ್ರಾಣ ಬಿಟ್ಟಿರುವುದು ನೋವಿನ ಸಂಗತಿ.ಪರೀಕ್ಷೆಯ ಪದ್ಧತಿಯ ವ್ಯವಸ್ಥೆಯಲ್ಲಿ 10 ನೆ ತರಗತಿಯ ಪರೀಕ್ಷೆ ಮಾಡಲಾಯಿತು. ಮಕ್ಕಳ ಮಾನಸಿಕ ಹಾಗೂ ಬೌದ್ಧಿಕ ಶಕ್ತಿಯನ್ನು ಅವಲೋಕನ ಮಾಡಿ ಪರೀಕ್ಷೆ ಮಾಡಿದೆವು. ಈ ಕೋವಿಡ್ ಸಂದರ್ಭದಲ್ಲಿಯೂ ಸಹ ಮಕ್ಕಳು ಕಲಿಕೆಯಲ್ಲಿ ಹಿಂದೆ ಬೀಳಲಿಲ್ಲ, ಕೊರೊನಾ ಸಂದರ್ಭದಲ್ಲಿಯೂ ಸಹ ನೀವು ನಿರಂತರ ಕಲಿಕೆಯಲ್ಲಿ ತೊಡಗಿದ್ದೀರಿ. 625 ಕ್ಕೆ 625 ಅಂಕಗಳನ್ನು ಮೈಸೂರಿನಲ್ಲಿ 9 ಜನ ಪಡೆದುಕೊಂಡಿದ್ದಾರೆ. ಅದರಲ್ಲಿ 5 ಜನರು ಕೆ.ಆರ್ ಕ್ಷೇತ್ರದವರು ಎನ್ನಲು ಸಂತೋಷವಾಗುತ್ತಿದೆ. ನಾನು ಬಂದಾಗ ಮಕ್ಕಳ ಮುಖದಲ್ಲಿ ಸಂತೋಷವನ್ನು ನೋಡಿ ನನಗೆ ತೃಪ್ತಿ ಆಯಿತು. ನಮ್ಮ ಕ್ಷೇತ್ರದಲ್ಲಿ 18 ವರ್ಷ ಮೇಲ್ಪಟ್ಟವರಿಗೆ 270 ಬೂತ್ ಗಳಲ್ಲೂ ಕೂಡಾ ವ್ಯಾಕ್ಸಿನೇಷನ್ ಮಾಡಿಸಿದ್ದೇವೆ. 2.19 ಲಕ್ಷ ಜನಕ್ಕೆ ಈಗಾಗಲೇ ಕೋವಿಡ್ ಲಸಿಕೆಯನ್ನು ಕೆ.ಆರ್ ಕ್ಷೇತ್ರದಲ್ಲಿ ನೀಡಲಾಗಿದೆ. ನೀವು ಧೈರ್ಯದಿಂದ ಶಾಲೆಗೆ ಬಂದಿದ್ದೀರಿ ನಿಮಗೆಲ್ಲರಿಗೂ ಸ್ವಾಗತ ಎಂದರು. ಸಾಮಾಜಿಕ ಅಂತರ, ಮಾಸ್ಕ್ ಹಾಗೂ ಸ್ಯಾನಿಟೈಸರ್ ಅನ್ನು ಬಳಸಿ ಇದು ಕೊರೊನಾ ವಿರುದ್ಧದ ಮೊದಲ ಅಸ್ತ್ರವಾಗಿದೆ. ಪ್ರತಿ ತಿಂಗಳು ಒಂದು ದಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿರುವ ವೈದ್ಯರು ಶಾಲೆಗೆ ಬಂದು ನಿಮ್ಮ ಆರೋಗ್ಯ ತಪಾಸಣೆ ಮಾಡಲಿದ್ದಾರೆ, ನೀವು ಭಯ ಪಡಬೇಕಾಗಿಲ್ಲ. ನೀವೆಲ್ಲರೂ ಶೈಕ್ಷಣಿಕ ವರ್ಷದಲ್ಲಿ ಒಳ್ಳೆಯ ಸಾಧನೆ ಮಾಡಿ ಎಂದು ಹಾರೈಸಿದರು. ನಿಮ್ಮ ರಕ್ಷಣೆ ನಮ್ಮೆಲ್ಲರ ಮೊದಲ ಆದ್ಯತೆ ಆಗಿದೆ ಎಂದರು.

Indresh KC

Recent Posts

ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಅಪಘಾತ

ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪೂರ್ವ ಅಜೆರ್ಬೈಜಾನ್ ಪ್ರಾಂತ್ಯದಲ್ಲಿ‌ಭಾನುವಾರ ಮುಂಜಾನೆ ಅಪಘಾತಕ್ಕೀಡಾಗಿದೆ.

2 mins ago

ಚಾಕುವಿನಿಂದ ಇರಿದು ಯುವಕನ ಬರ್ಬರ ಹತ್ಯೆ : ಪರಿಚಯಸ್ಥರಿಂದಲೇ ಕೊಲೆ ಶಂಕೆ

ತಡರಾತ್ರಿ ದುಷ್ಕರ್ಮಿಗಳು ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಹತ್ಯೆಗೈದಿರುವ ಘಟನೆ ನಗರದ…

21 mins ago

ಬಿಜೆಪಿ ಈಗ ಬೆಳೆದು ನಿಂತಿದೆ ಅದಕ್ಕೆ ಆರ್ ಎಸ್ ಎಸ್ ಬೆಂಬಲ ಬೇಕಾಗಿಲ್ಲ: ಉದ್ಧವ್ ಠಾಕ್ರೆ

ಬಿಜೆಪಿ ಮತ್ತು ಆರೆಸ್ಸೆಸ್ ಸಂಬಂಧದ ಬಗ್ಗೆ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ನೀಡಿದ ಹೇಳಿಕೆಯನ್ನು ಉಲ್ಲೇಖಿಸಿ ಶಿವಸೇನಾ ಯುಬಿಟಿ ಬಣದ…

26 mins ago

ನೇಹಾ, ಅಂಜಲಿ ಕೊಲೆ ಕೇಸ್​​ : ಎಡಿಜಿಪಿ ಆರ್.ಹಿತೇಂದ್ರ ಅಧಿಕಾರಿಗಳಿಗೆ ಕ್ಲಾಸ್​

ನೇಹಾ ಮತ್ತು ಅಂಜಲಿ ಅಂಬಿಗೇರ ಹತ್ಯೆ ಪ್ರಕರಣಗಳು ಬಾರಿ ಸಂಚಲನ ಮೂಡಿಸಿದ್ದವು ಈ ಹಿನ್ನೆಲೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ…

35 mins ago

ಕಲಬುರಗಿ: ಅಂಧ ಮಕ್ಕಳ ಶಾಲೆಗೆ 100% ಫಲಿತಾಂಶ

ನಗರದ ದಕ್ಷಿಣ ಭಾರತ ದಲಿತ ವಿದ್ಯಾ ಸಂಸ್ಥೆಯ ಸಿದ್ದಾರ್ಥ ಕಿವುಡ ಮತ್ತು ಮೂಕ ಮಕ್ಕಳ ವಸತಿಯುತ ಪ್ರೌಢಶಾಲೆಗೆ ಪ್ರಸ್ತುತ ಸಾಲಿನ…

45 mins ago

ಐಪಿಎಲ್ ಪ್ರಸಾರಕರ ಹಿಟ್​ಮ್ಯಾನ್​ ರೋಹಿತ್​ ಕಿಡಿ

ಟೀಮ್​ ಇಂಡಿಯಾದ ನಾಯಕ ರೋಹಿತ್ ಶರ್ಮಾ ಅವರು ಐಪಿಎಲ್ ಬ್ರಾಡ್‌ಕಾಸ್ಟರ್ ಸ್ಟಾರ್ ಸ್ಪೋರ್ಟ್ಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೆಲ ದಿನಗಳ…

59 mins ago