ಮೈಸೂರು: ಶಾಲೆಗೆ ಹಿಜಾಬ್ ಧರಿಸಿ ಬರುವ ವಿದ್ಯಾರ್ಥಿಗಳಿಗೆ ಯಾವುದೇ ಕಾರಣಕ್ಕೂ ಪ್ರವೇಶವಿಲ್ಲ ಪಾಲನೆ ಮಾಡದಿದ್ದರೆ ಸರ್ಕಾರಿ ನಿಯಮದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದರು.
ಸಮವಸ್ತ್ರ ಆದೇಶವನ್ನು ಎಲ್ಲಾ ಶಾಲೆಗಳು ಕಡ್ಡಾಯವಾಗಿ ಪಾಲನೆ ಮಾಡಬೇಕು. ಪಾಲನೆ ಮಾಡದಿದ್ದರೆ ಸರ್ಕಾರಿ ನಿಯಮದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವುದೇ ಹೆಣ್ಣುಮಕ್ಕಳಿಗೆ ಶಿಕ್ಷಣದಿಂದ ವಂಚಿತ ಮಾಡುವ ದುರುದ್ದೇಶವಿಲ್ಲ. ಎಜುಕೇಷನ್ ಅಯಕ್ಟ್ ರೂಲ್ 11 ಅನ್ವಯ ನಿಯಮ ಜಾರಿ ಮಾಡಿದ್ದೇವೆ.
ಎಜುಕೇಶನ್ ಪಾಲಿಸಿಯನ್ನು ಬಿಜೆಪಿ ಸರ್ಕಾರ ಮಾಡಿದ್ದಲ್ಲ. ಕಾಂಗ್ರೆಸ್ ಸರ್ಕಾರ ಇದ್ದಾಗಿನಿಂದಲೂ ಇದೆ. ಇದರಲ್ಲಿ ಅನಾವಶ್ಯಕ ರಾಜಕಾರಣ ಮಾಡಬಾರದು ಎಂದರು.