News Karnataka Kannada
Monday, April 29 2024
ಮೈಸೂರು

ಶಾಸಕ ರಾಮದಾಸ್ ಕಾರ್ಯ ಶ್ಲಾಘಿಸಿದ ಅರುಣ್ ಸಿಂಗ್

Arun Singh
Photo Credit :

ಮೈಸೂರು : ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಯೋಜನೆಯನ್ನು ತಮ್ಮ ಕ್ಷೇತ್ರದಲ್ಲಿ ಸಮರ್ಪಕವಾಗಿ ಅನುಷ್ಟಾನಗೊಳಿಸುವಲ್ಲಿ ಕೆ.ಆರ್.ಕ್ಷೇತ್ರದ ಶಾಸಕ ಎಸ್.ಎ.ರಾಮದಾಸ್ ಅವರು ಯಶಸ್ವಿಯಾಗಿದ್ದಾರೆ ಎಂದು ಕರ್ನಾಟಕ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಶ್ಲಾಘಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ನಡೆದ ಬಿಜೆಪಿ ರಾಜ್ಯ ಕಾರ್ಯಕಾರಣಿಯಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಯೋಜನೆಗಳ ಅನುಷ್ಠಾನ ಕಾರ್ಯಗಳ ಬಗ್ಗೆ ಶಾಸಕರನ್ನು, ಸಚಿವರನ್ನು ಕುರಿತು ಮಾತನಾಡುವಾಗ ಶಾಸಕ ರಾಮದಾಸ್ ಅವರ ಕಾರ್ಯದ ಬಗ್ಗೆ ಹೇಳಿ ಅವರ ತಮ್ಮ ಕ್ಷೇತ್ರದಲ್ಲಿ ಕ್ಯಾಂಪ್ ಗಳನ್ನು ಮಾಡಿ ಸರ್ಕಾರದ ಯೋಜನೆಗಳನ್ನು ಜನಸಾಮಾನ್ಯರಿಗೆ ತಲುಪಿಸುವ ಕೆಲಸವನ್ನು ಅಚ್ಚುಕಟ್ಟಾಗಿ ಮಾಡಿರುವುದಾಗಿ ಹೇಳಿದರು.

ಸೆಪ್ಟೆಂಬರ್ ನಲ್ಲಿ ಪ್ರಧಾನಿ ನರೇಂದ್ರ ಮೋದಿಯವರ 71 ನೆಯ ಜನ್ಮದಿನದ ಸಂದರ್ಭದಲ್ಲಿ ಶಾಸಕರಾದ ಎಸ್.ಎ.ರಾಮದಾಸ್ ಅವರು ಕೃಷ್ಣರಾಜ ಕ್ಷೇತ್ರದಲ್ಲಿ 20 ದಿನಗಳ ಮೋದಿ ಯುಗ್ ಉತ್ಸವ ಎನ್ನುವ ಕಾರ್ಯಕ್ರಮ ಮಾಡಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಯೋಜನೆಗಳ ಅನುಷ್ಠಾನ ಕಾರ್ಯಕ್ಕೆ ಚಾಲನೆ ನೀಡಿದ್ದರು, ಇದಲ್ಲದೇ ಸುಮಾರು 13 ಕ್ಕೂ ಅಧಿಕ ಕೇಂದ್ರ, ರಾಜ್ಯದ ಸಚಿವರುಗಳು ಆಗಮಿಸಿ ಸೂರ್ಯ ಪಥ್, ಸಂಗೀತ ಮನೆಗೆ ಸರ್ಕಾರಿ ಶಾಲೆಯ ಮಕ್ಕಳು, ನಗರ ಅಂಚಿನ ಗ್ರಾಮಗಳ ಅಭಿವೃದ್ಧಿ ಕಾರ್ಯ, ಸಮಗ್ರ ಆರೋಗ್ಯ, ಹೀಗೆ ಹತ್ತಾರು ಹಲವಾರು ಯೋಜನೆಗಳ ಅನುಷ್ಠಾನ ಕಾರ್ಯಕ್ಕೆ ಚಾಲನೆ ನೀಡಿದ್ದರು. ಈ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಆಗಮಿಸಿ 20 ದಿನಗಳ ಕಾರ್ಯಕ್ರಮದ ಒಂದು ಪುಸ್ತಕವನ್ನು ಸಹ ಬಿಡುಗಡೆ ಮಾಡಿದ್ದನ್ನು ಸ್ಮರಿಸಿದರು.

ಅವರು ಶಾಸಕರಾಗಿ ಆದಿವಾಸಿಗಳಿಗೆ, ಬಡವರಿಗೆ ಯೋಜನೆಗಳ ಅನುಷ್ಠಾನವನ್ನು ಮಾಡಿದ್ದಾರೆ. ನೀವು ನಿಮ್ಮ ಕ್ಷೇತ್ರದಲ್ಲಿ ಕ್ಯಾಂಪ್ ಹಾಕಿಕೊಂಡು ಈ ರೀತಿ ಯೋಜನೆಗಳ ಅನುಷ್ಠಾನ ಮಾಡಿಸಿ ಮನೆ ಮನೆಗೆ ತೆರಳಿ ಸರ್ಕಾರದ ಯೋಜನೆಯನ್ನು ತಿಳಿಸುವ ಕೆಲಸ ಮಾಡುವಂತೆ ಹೇಳಿದರು.

ಈ ಕುರಿತಂತೆ ಮಾತನಾಡಿರುವ ಶಾಸಕ ರಾಮದಾಸ್ ಅವರು, ಕ್ಷೇತ್ರದಲ್ಲಿ ಯೋಜನೆ ಅನುಷ್ಠಾನ ಆಗುತ್ತಿದೆ ಎಂದರೆ ಅದರ ಹಿಂದೆ ನಮ್ಮ ಕಾರ್ಯಕರ್ತರ ಹಾಗೂ ಅಧಿಕಾರಿಗಳ ಶ್ರಮವಿದೆ ಅವರಿಗೆ ಧನ್ಯವಾದಗಳನ್ನು ತಿಳಿಸುವುದಾಗಿ ಹೇಳಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು