News Karnataka Kannada
Sunday, May 12 2024
ಮೈಸೂರು

ಶೀಘ್ರದಲ್ಲೇ ಲೋಕಾಯುಕ್ತರ ನೇಮಕ: ಸಿಎಂ ಬೊಮ್ಮಾಯಿ

Mandya: Steps will be taken to modernize Maddur branch canal: CM Bommai
Photo Credit :

ಮೈಸೂರು: ಲೋಕಾಯುಕ್ತರ ನೇಮಕಾತಿಗೆ ಸಂಬಂಧಿಸಿದ ಪ್ರಕ್ರಿಯೆಗಳು ಪೂರ್ಣಗೊಂಡಿದ್ದು, ಶೀಘ್ರದಲ್ಲೇ ಲೋಕಾಯುಕ್ತರ ನೇಮಕ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬುಧವಾರ ಹೇಳಿದ್ದಾರೆ.

ವಿಮಾನ ನಿಲ್ದಾಣದಲ್ಲಿಂದು ಮಾಧ್ಯಮದರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಿಎಂ ಬೊಮ್ಮಾಯಿ, ಲೋಕಾಯುಕ್ತ ನೇಮಕಕ್ಕೆ ಸಂಬಂಧಿಸಿ ಹೈಕೋರ್ಟ್ ‌ನೀಡಿರುವ ಸೂಚನೆಯಂತೆ ಕ್ರಮ ವಹಿಸಲಾಗಿದೆ ಎಂದು ಹೇಳಿದರು.

ಇದೇ ವೇಳೆ ರಾಜ್ಯಸಭೆ ಚುನಾವಣೆ ಕುರಿತು ಮಾತನಾಡಿ, ಬಿಜೆಪಿ ಯಾರಿಗೂ ಆಫರ್ ಕೊಟ್ಟಿಲ್ಲ. ಅಭ್ಯರ್ಥಿಗಳ ಗೆಲುವಿಗೆ ಬೇಕಾದಷ್ಟು ಮತಗಳು ನಮ್ಮ ಬಳಿ ಇವೆ. ಕಾಂಗ್ರೆಸ್ ಅಥವಾ ಜೆಡಿಎಸ್‌ ನಡುವೆ ಏನೂ ಆಫರ್ ಇದೆಯೋ ಅದಕ್ಕೂ ನಮಗೂ ಸಂಬಂಧವಿಲ್ಲ ಎಂದು ತಿಳಿಸಿದರು.

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ಕಾವೇರಿ ನೀರಾವರಿ ಪ್ರಾಧಿಕಾರದ ತೀರ್ಪು ಅಂತಿಮವಾಗಿದೆ.‌ ಸುಪ್ರೀಂಕೋರ್ಟ್ ನಿರ್ದೇಶನದ ಮೇರೆಗೆ ಪ್ರಾಧಿಕಾರ ರಚನೆ ಆಗಿರುವುದರಿಂದ ಮಧ್ಯಪ್ರವೇಶ ಮಾಡಲಾಗದು. ಏನೇ ನಿರ್ಧಾರವಿದ್ದರೂ ಪ್ರಾಧಿಕಾರವೇ ಮಾಡುತ್ತದೆ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು