Categories: ಮೈಸೂರು

ಸರ್ಕಾರಿ ಶಾಲೆಗೆ ಚಿತ್ರಕಲೆಯ ಮೆರಗು ತಂದ ಉಪ್ಕ್ರತಿ

ಮೈಸೂರು: ಎಚ್‌.ಡಿ ಕೋಟೆ ತಾಲ್ಲೂಕಿನ ಜಿ.ಜಿ ಕಾಲೋನಿ ಗ್ರಾಮದ ಸರ್ಕಾರಿ ಶಾಲೆ ಈಗ ಆಕರ್ಷಣೆಯ ಕೇಂದ್ರ ಬಿಂದುವಾಗಿದ್ದು, ಜನ ಅಚ್ಚರಿಯ ನೋಟ ಬೀರುತ್ತಿದ್ದಾರೆ. ಇದಕ್ಕೆ ಕಾರಣವಾಗಿರುವುದು ಉಪ್ಕ್ರತಿ ಎನ್.ಜಿ.ಓ ಎಂದರೆ ತಪ್ಪಾಗಲಾರದು.

ಇವತ್ತು ಈ ಸರ್ಕಾರಿ ಶಾಲೆ ಸುಂದರವಾಗಿ ಕಂಗೊಳಿಸುತ್ತಿದ್ದರೆ ಅದಕ್ಕೆ ಕಾರಣವಾಗಿರುವುದು ಉಪ್ಕ್ರತಿ ಎನ್.ಜಿ.ಓ ಗಳು. ಎಲ್ಲರೂ ಸೇರಿ ಶಾಲೆಗೊಂದು ರಂಗು ತಂದಿದ್ದಾರೆ. ಇದೀಗ ಸ್ವಯಂಸೇವಕರು ಶಾಲೆಯ ಬಣ್ಣ ಬಳಿದು ಗೋಡೆಯ ಮೇಲೆ ಚಿತ್ರಕಲೆಗಳನ್ನು ರಚಿಸಿ  ಮೆರಗು ನೀಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಮೈಸೂರಿನ ಎಚ್‌ಡಿ ಕೋಟೆ ತಾಲೂಕಿನ  ಗೆಂಡೇಗೌಡರ ಕಾಲೋನಿಯ ಸರ್ಕಾರಿ ಹಿರಿಯ ಪ್ರಾರ್ಥಮಿಕ ಶಾಲೆಯಲ್ಲಿ  ಎರಡು ದಿನಗಳ ಕಾಲ ಶ್ರಮದಾನದ ಕಾಯಕ್ರಮವನ್ನು ಹಮ್ಮಿಕೊಂಡು ಶಾಲಾ ಗೋಡೆಗಳ ಮೇಲೆ ವಾಟರ್ ಪ್ರೂಫ್ ಪೇಂಟಿಂಗ್, ನಲಿಕಲಿ ತರಗತಿಗೆ ಬಣ್ಣ ಹಚ್ಚುವುದು, ಬಾಲ್ಯ ವಿವಾಹ, ಬಾಲ ಕಾರ್ಮಿಕ ಮತ್ತು ಮಕ್ಕಳ ಹಕ್ಕುಗಳ ಜಾಗೃತಿ ಸಂದೇಶಗಳು ಮತ್ತು ಕಾರ್ಟೂನ್ ಚಿತ್ರಕಲೆಗಳನ್ನು  ನಲಿಕಲಿ  ತರಗತಿಯ  ಕೊಠಡಿಗಳ ಗೋಡೆಗಳ ಮೇಲೆ ರಚಿಸುವ ಮೂಲಕ ಸುಂದರಗೊಳಿಸಿದ್ದಾರೆ ಅಷ್ಟೇ ಅಲ್ಲದೆ,. ಈ ಭಾಗದಲ್ಲಿ ಹೆಚ್ಚು ಬಾಲ್ಯ ವಿವಾಹಗಳು ನಡೆಯುತ್ತಿರುವುದರಿಂದ ಈ ಕುರಿತಂತೆ ಜಾಗೃತಿ ಮೂಡಿಸುವ ಚಿತ್ರಕಲೆಗಳನ್ನು ಬಿಡಿಸಿ ಶಾಲಾ ಮಕ್ಕಳು ಮತ್ತು ಪೋಷಕರಲ್ಲಿ ಅರಿವು ಮೂಡಿಸುವ ಕೆಲಸವನ್ನು ಮಾಡಲಾಗಿದೆ.

ಮಕ್ಕಳು  ಶಾಲೆಯಲ್ಲಿ ತಮ್ಮ ಸಮಯವನ್ನು ಆನಂದಿಸಲಿ ಎನ್ನುವ ಉದ್ದೇಶದಿಂದ  ಯಾವುದೇ ಫಲಾಪೇಕ್ಷೆ ಇಲ್ಲದೆ ಸ್ವಯಂಸೇವಕರು ಪ್ರತಿ ವಾರಾಂತ್ಯದಲ್ಲಿ ತಮ್ಮ ಅಮೂಲ್ಯವಾದ ಸಮಯವನ್ನು ಮೀಸಲಿಡುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಡಿಜಿಟಲ್ ಕ್ಲಾಸ್ ರೂಮ್ ಲ್ಯಾಬ್ ಸೆಟಪ್ ನ್ನು ಒದಗಿಸುವುದಾಗಿ ಉಪ್ಕ್ರತಿ ಶಾಲೆಗೆ ಭರವಸೆ ನೀಡಿದೆ.

ಶ್ರಮದಾನದಲ್ಲಿ ಎಸ್‌ಡಿಎಂ ಸಮಿತಿ ಮತ್ತು ಬಾಲಸುಬ್ರಹ್ಮಣ್ಯನ್ ಕುಟುಂಬದವರು ಪಾಲ್ಗೊಂಡಿದ್ದರಲ್ಲದೆ, ಸ್ವಯಂ ಸೇವಕರ  ತಂಡದಲ್ಲಿ ವೃತ್ತಿಪರ ಕಲಾವಿದರು, ಎಂಜಿನಿಯರಿಂಗ್ ವಿದ್ಯಾರ್ಥಿಗಳು, ಆರ್‌ಜೆ, ಸಾಫ್ಟ್‌ವೇರ್ ಉದ್ಯೋಗಿಗಳು ಇದ್ದದ್ದು ವಿಶೇಷವಾಗಿತ್ತು.

ಎನ್‌ಜಿಒ ಮುಖ್ಯಸ್ಥ ಚಂದನ್, ಸ್ವಯಂಸೇವಕರಾದ ಮಾನಸ, ದರ್ಶನ್, ವಿಕೇಶ್, ಪ್ರಕೃತಿ, ಕಿರಣ್, ಅಮೃತ, ಶಶಾಂಕ್, ವರ್ಷ, ಶರಣ್ಯ, ಅನು, ಪ್ರಾರ್ಥನಾ, ಪ್ರತೀಕ್ಷಾ, ಶಿವಂ, ಮಧುರಾ, ಹರಿಪ್ರಿಯಾ, ಅನನ್ಯಾ, ದೀಪ್ತಿ, ತಸ್ಮಿಯಾ, ಧನುಷಾ, ಸುಹಾಸ್, ಸಿದ್ದೇಶ್, ಸಯೀಮಾ, ಆಶಿಶ್ ಮೊದಲಾದವರು ಇದ್ದರು. ಮಾಹಿತಿಗೆ  ಚಂದನ್ ಎನ್, ಸ್ಥಾಪಕ, ಅಧ್ಯಕ್ಷ, ಉಪ್ಕ್ರತಿ ಎನ್.ಜಿ.ಓ

ಮೊ: 9742662664 ಅವರನ್ನು ಸಂಪರ್ಕಿಸಬಹುದಾಗಿದೆ.

Sneha Gowda

Recent Posts

ಡ್ರಾಪ್​ ಕೊಡುವ ನೆಪದಲ್ಲಿ ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರಕ್ಕೆ ಯತ್ನ

ಚಿಕ್ಕಬಳ್ಳಾಪುರ ತಾಲೂಕಿನ ಪೆರೇಸಂದ್ರ ಠಾಣಾ ವ್ಯಾಪ್ತಿಯಲ್ಲಿ ಯುವಕನೋರ್ವ ಡ್ರಾಪ್​ ಕೊಡುವ ನೆಪದಲ್ಲಿ  ತಡರಾತ್ರಿ ಇಬ್ಬರು ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರಕ್ಕೆ ಯತ್ನಿಸಿರುವ…

2 mins ago

ಇಬ್ರಾಹಿಂ ರೈಸಿ ನಿಧನ: ನಾಳೆ ಭಾರತದಲ್ಲಿ ಒಂದು ದಿನದ ‘ಶೋಕಾಚರಣೆ’

ಹೆಲಿಕಾಪ್ಟರ್ ದುರಂತದಲ್ಲಿ ನಿಧನರಾದ ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ನಿಧನಕ್ಕೆ ನಾಳೆ (ಮೇ 21) ಭಾರತದಲ್ಲಿ ಒಂದು ದಿನದ ರಾಜ್ಯ…

9 mins ago

ಪ್ರಕಟಣೆಯಾದ ಸಂಶೋಧನಾ ಬರಹಗಳಿಗೆ ಹೆಚ್ಚಿನ ಪ್ರಾಮುಖ್ಯತೆ ಇದೆ: ಡಾ. ಸುಧಾಕರ್ ವೈ.ಎನ್

ವಿದ್ಯಾರ್ಥಿಗಳು ಪ್ರಕಟಿಸುವ ಸಂಶೋಧನಾ ಬರಹಗಳು ಉನ್ನತ ವೇತನ ಶ್ರೇಣಿಯ ವೃತ್ತಿ ಅವಕಾಶಗಳನ್ನು ಪಡೆದುಕೊಳ್ಳುವಲ್ಲಿ ಉಪಯುಕ್ತವಾಗುತ್ತವೆ ಎಂದು ಮಣಿಪಾಲ್ ಇನ್ಸ್ಟಿಟ್ಯೂಟ್ ಆಫ್…

13 mins ago

ದ್ವಿತೀಯ ಪಿಯುಸಿ 2ನೇ ಪರೀಕ್ಷೆ ಬಳಿಕವೇ ಸಿಇಟಿ ಫಲಿತಾಂಶ

ದ್ವಿತೀಯ ಪಿಯುಸಿಯ ಎರಡನೇ ಪರೀಕ್ಷೆ ಮತ್ತು ಕೃಷಿ ಪ್ರಾಯೋಗಿಕ ಪರೀಕ್ಷೆಗಳ ಪಲಿತಾಂಶ ನಂತರವೇ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಫಲಿತಾಂಶವನ್ನು…

24 mins ago

ಮಲ್ಲಮ್ಮ ಜಯಂತಿ ಆಚರಣೆಯ ದಿನ ಅಗೌರವ ತೋರಿದ ಪಿಡಿಒ ವಿರುದ್ಧ ಕ್ರಮಕ್ಕೆ ಆಗ್ರಹ

ಚಿಟಗುಪ್ಪ ತಾಲ್ಲೂಕಿನ ನಿರ್ಣಾ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆಯ ದಿನದಂದು ಬೇಜವಾಬ್ದಾರಿತನದಿಂದ ವರ್ತಿಸಿ…

28 mins ago

ಕೆರೆಯಲ್ಲಿ ಈಜಲು ಹೋದ ಇಬ್ಬರು ಬಾಲಕರು ನೀರಲ್ಲಿ ಮುಳುಗಿ ಸಾವು

ಬನಹಟ್ಟಿ ಪಟ್ಟಣದಲ್ಲಿ ಕೆರೆಯಲ್ಲಿ ಈಜಲು ಹೋದ ಇಬ್ಬರು ಬಾಲಕರು ನೀರಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ನಡೆದಿದೆ.

1 hour ago