ಮೈಸೂರು

ಸಾಧಕ ಶಿಕ್ಷಕರಿಗೆ ‘ಜೀವನದಿ ಕಾವೇರಿ ಪ್ರಶಸ್ತಿ’

ಮೈಸೂರು: ಶಿಕ್ಷಣ ಮತ್ತು ಸಾಹಿತ್ಯ ಹಾಗೂ ಸಾಂಸ್ಕೃತಿಕ ಸೇವಾ ಸಂಸ್ಥೆಗಳಾದ ಮೈಸೂರು ನಗರದ ಕಾವೇರಿ ಬಳಗ ಮತ್ತು ಹಿರಣ್ಮಯಿ ಪ್ರತಿಷ್ಠಾನ ಸಂಯುಕ್ತವಾಗಿ ಪ್ರತಿವರ್ಷ ಸಾಧಕ ಶಿಕ್ಷಕ-ಶಿಕ್ಷಕಿಯರಿಗೆ ‘ಜೀವನದಿ ಕಾವೇರಿ ಪ್ರಶಸ್ತಿ’ ಯನ್ನು ನೀಡಿ ಗೌರವಿಸುತ್ತಾ ಬಂದಿದ್ದು, ಪ್ರಸ್ತುತ ವರ್ಷದ ಪ್ರಶಸ್ತಿಗೆ ಎಂಟು ಮಂದಿ ಪ್ರಾಥಮಿಕ ಶಾಲಾ ಶಿಕ್ಷಕ – ಶಿಕ್ಷಕಿಯರನ್ನು ಆಯ್ಕೆ ಮಾಡಿ ಪ್ರಕಟಿಸಿದೆ.

ಹೆಚ್.ಡಿ. ಕೋಟೆ ತಾಲ್ಲೂಕಿನ ಜೆ.ಬಿ. ಸರಗೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಸಿ.ಪಿ. ಸುಧಾಮಣಿ, ಬಾಚೇಗೌಡನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಮರಿಕಾಳಯ್ಯ, ಮೈಸೂರು ತಾಲ್ಲೂಕಿನ ದೇವಯ್ಯನಹುಂಡಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಎಂ.ಕೆ. ಪೂವಮ್ಮ, ಹುಣಸೂರು ತಾಲ್ಲೂಕಿನ ಹಳ್ಳದಕೊಪ್ಪಲು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಎಂ.ಎಂ.ಲತಾ, ಅರಸು ಕಲ್ಲಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕಿ ಎಂ.ಕೆ. ಕಾವೇರಿಯಮ್ಮ, ನಂಜನಗೂಡು ತಾಲ್ಲೂಕಿನ ತಾಯೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕಿ ಎಂ. ಕಲ್ಪನಾ, ಮೈಸೂರು ನಗರದ ತೊಣಚಿಕೊಪ್ಪಲಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕಿ ಸಬಿತಾಬಾಯಿ, ಹಳೆಕೆಸರೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಸಿ. ಸೋಮಶೇಖರ್ ಅವರುಗಳು ಪ್ರತಿಷ್ಠಿತ ‘ಜೀವನದಿ ಕಾವೇರಿ ಪ್ರಶಸ್ತಿ’ಗೆ ಭಾಜನರಾಗಿದ್ದಾರೆ.

ಪ್ರಶಸ್ತಿ ಪ್ರದಾನ ಸಮಾರಂಭವು ಇದೇ ಮೇ 28ರಂದು ಸಂಜೆ 4 ಗಂಟೆಗೆ ಮೈಸೂರು ನಗರದ ಕೃಷ್ಣಮೂರ್ತಿಪುರಂನಲ್ಲಿರುವ ನಮನ ಕಲಾ ಮಂಟಪದ ಸಭಾಂಗಣದಲ್ಲಿ ಜರುಗಲಿದೆ. ಖ್ಯಾತ ಸಾಹಿತಿ ಬನ್ನೂರು ಕೆ. ರಾಜು ಸಮಾರಂಭವನ್ನು ಉದ್ಘಾಟಿಸಲಿದ್ದು, ಪ್ರಸಿದ್ಧ ಕಲಾವಿದೆ ಡಾ. ಜಮನಾರಾಣಿ ಮಿರ್ಲೆ ಅಧ್ಯಕ್ಷತೆ ವಹಿಸುವರು. ಸಾರ್ವಜನಿಕ ಶಿಕ್ಷಣ ಇಲಾಖೆಯ ವಿಶ್ರಾಂತ ಉಪ ನಿರ್ದೇಶಕಿ ಮಂಜುಳಾ ಅವರು ಪ್ರಶಸ್ತಿ ಪ್ರದಾನ ಮಾಡಿ ಪ್ರಶಸ್ತಿ ಪುರಸ್ಕೃತರನ್ನು ಗೌರವಿಸಲಿದ್ದಾರೆಂದು ಕಾವೇರಿ ಬಳಗದ ಅಧ್ಯಕ್ಷೆ ಎನ್.ಕೆ. ಕಾವೇರಿಯಮ್ಮ ಹಾಗೂ ಹಿರಣ್ಮಯಿ ಪ್ರತಿಷ್ಠಾನದ ಅಧ್ಯಕ್ಷ ಎ. ಸಂಗಪ್ಪ ತಿಳಿಸಿದ್ದಾರೆ.

Gayathri SG

Recent Posts

40 ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಇಂಡಿಯಾ ಮೈತ್ರಿಕೂಟ ಗೆಲ್ಲಲಿದೆ: ಡಿ.ಕೆ.ಶಿವಕುಮಾರ್

ಉತ್ತರ ಪ್ರದೇಶದಲ್ಲಿ 40 ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಇಂಡಿಯಾ ಮೈತ್ರಿಕೂಟ ಗೆಲ್ಲಲಿದೆ. ದೇಶದೆಲ್ಲೆಡೆ ಕಾಂಗ್ರೆಸ್ ಪಕ್ಷ ಹಾಗೂ ಇಂಡಿಯಾ ಮೈತ್ರಿಕೂಟದ…

3 mins ago

ಕೇಜ್ರಿವಾಲ್ ನಿವಾಸದಲ್ಲಿ ಸ್ವಾತಿ ಮಲಿವಾಲ್ ಜಗಳದ ವಿಡಿಯೊ ತುಣುಕು ವೈರಲ್

ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರ ಸಹಾಯಕ ಬಿಭವ್ ಕುಮಾರ್ ಅವರು ನಗರದ ಸಿವಿಲ್ ಲೈನ್ಸ್‌ನಲ್ಲಿರುವ ದೆಹಲಿ…

13 mins ago

ಕೇಜ್ರಿವಾಲ್‌ ನಾಚಿಕೆಯಿಲ್ಲದೇ ಆರೋಪಿ ಬಿಭವ್‌ ಕುಮಾರ್‌ ಜೊತೆ ತಿರುಗಾಟ: ನಿರ್ಮಲಾ ಸೀತಾರಾಮನ್‌

ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್‌ ಮೇಲಿನ ಹಲ್ಲೆಯನ್ನು ಖಂಡಿಸಿ ಮಾತನಾಡದ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ವಿರುದ್ಧ ಕೇಂದ್ರ ಹಣಕಾಸು ಸಚಿವೆ…

14 mins ago

ಈಜಲು ಹೋಗಿ‌ದ್ದ ಮೂವರು ನೀರುಪಾಲು: 5 ಜನ ಪ್ರಾಣಾಪಾಯದಿಂದ ಪಾರು

ಈಜಲು ಹೋಗಿ‌ದ್ದ ಮೂವರು ನೀರುಪಾಲಾಗಿರುವ ಘಟನೆ ರಾಮನಗರ ತಾಲೂಕಿನ ಅಚ್ಚಲು ಗ್ರಾಮದ ಬಳಿ ನಡೆದಿದೆ.

37 mins ago

“ಪಟ್ಲ ಸಂಭ್ರಮ” ಯಶಸ್ವಿಗೊಳಿಸಲು ಪಟ್ಲ ಸತೀಶ್ ಶೆಟ್ಟಿ ಕರೆ

ಮೇ 26 ರಂದು ಅಡ್ಯಾರ್ ಗಾರ್ಡನ್ ನಲ್ಲಿ ನಡೆಯುವ "ಪಟ್ಲ ಸಂಭ್ರಮ" ನಮ್ಮೆಲ್ಲರ ಮನೆಯ ಕಾರ್ಯಕ್ರಮ. ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಪಟ್ಲ…

47 mins ago

ಮಂಗಳೂರು: ಕರ್ತವ್ಯದಲ್ಲಿದ್ದ ವಾಹನದ ಬಗ್ಗೆ ಸುಳ್ಳು ಸಂದೇಶ ರವಾನಿಸಿದ ಸಾರ್ವಜನಿಕ

ಕಳೆದ ದಿನ (ಮೇ 16) ಸಂಜೆ ಮಂಗಳೂರು ನಗರದ ಕುಂಟಿಕಾನ ಬಳಿ ಕರ್ತವ್ಯದಲ್ಲಿದ್ದ ಕೆಎ-19-ಜಿ-1023 ನೊಂದಣೆ ಸಂಖ್ಯೆಯ ಹೆದ್ದಾರಿ ಗಸ್ತು…

52 mins ago