ಮೈಸೂರು

ಸಾವಯವ ಕೃಷಿಗೆ ಆದ್ಯತೆ ನೀಡಿ: ಚಂದನ್ ಗೌಡ

ನಂಜನಗೂಡು: ರಾಸಾಯನಿಕ ಗೊಬ್ಬರ ಬಳಕೆಯಿಂದಾಗಿ ಅನ್ನ‌ ನೀಡುವ ಮಣ್ಣು ವಿಷಯುಕ್ತವಾಗುತ್ತಿದ್ದು, ದಯಮಾಡಿ ಅನ್ನದಾತರು ಇನ್ನಾದರೂ ರಾಸಾಯನಿಕ ತ್ಯಜಿಸಿ, ಸಾವಯವ ಕೃಷಿಗೆ ಆದ್ಯತೆ ನೀಡಬೇಕೆಂದು ಕರ್ನಾಟಕ ರಾಜ್ಯ ರೈತ ಕಲ್ಯಾಣ ಸಂಘದ ಅಧ್ಯಕ್ಷ ಚಂದನ್ ಗೌಡ  ಮನವಿ ಮಾಡಿದರು.

ನಂಜನಗೂಡಿನ ಶ್ರೀಕಂಠೇಶ್ವರ ದೇವಸ್ಥಾನದಲ್ಲಿ ಆಯೋಜಿಸಲಾಗಿದ್ದ ರೈತ ಕಲ್ಯಾಣ ಸಂಘದ ನೂತನ ಪದಾಧಿಕಾರಿಗಳ ಸೇರ್ಪಡೆ ಮತ್ತು‌ ಪದಗ್ರಹಣ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಹೆತ್ತ ತಾಯಿಯಷ್ಟೇ ಪ್ರಾಮುಖ್ಯತೆಯನ್ನು ಹೊತ್ತ ತಾಯಿ ಭೂಮಿಗೂ ನೀಡಬೇಕಿದೆ ಎಂದ ಅವರು, ಯಥೇಚ್ಛವಾದ ರಾಸಾಯನಿಕ ಬಳಕೆಯಿಂದಾಗಿ ಇಂದು ನಾವು ಸೇವಿಸುವ ಆಹಾರ ಪದಾರ್ಥಗಳೂ ವಿಷಯುಕ್ತವಾಗುತ್ತಿದೆ.‌ಆದರೆ ಸಾವಯವ ಕೃಷಿ ಪದ್ದತಿಗೆ ರೈತರು ಮುಂದಾದರೇ, ಕಡಿಮೆ ಖರ್ಚಿನಲ್ಲಿ‌ ಅಧಿಕ ಇಳುವರಿ ಪಡೆಯಬಹುದು ಹಾಗೂ ಮಣ್ಣಿನ ರಕ್ಷಣೆಯೂ ಮಾಡಬಹುದು ಎಂದರು.

ನಾವು ಸತ್ತರೆ ಮಣ್ಣಿಗೆ ಆದರೆ ಮಣ್ಣೇ ಸತ್ತರೇ ಎಲ್ಲಿಗೆ ಎಂದು ಪ್ರಶ್ನಿಸಿದ ಅವರು, ಇಡೀ ದೇಶಾದ್ಯಂತ ರಾಸಾಯನಿಕ ಮುಕ್ತ ಅಭಿಯಾನಕ್ಕೆ ಮುಂದಾಗಬೇಕು.ಮಣ್ಣಿನ ಸಂರಕ್ಷಣೆ ನಮ್ಮೆಲ್ಲರ ಹೊಣೆ ಎಂಬ‌ ಜವಾಬ್ದಾರಿಯನ್ನು  ಎಲ್ಲರಿಗೂ ಅರ್ಥೈಸುವಂತೆ ಮಾಡಬೇಕಿದೆ ಎಂದರು.

ರಾಜ್ಯ ರೈತ ಕಲ್ಯಾಣ ಸಂಘದ ವತಿಯಿಂದ, ಹಳೇ ಮೈಸೂರು ಪ್ರಾಂತ್ಯದಿಂದಲೇ ರಾಸಾಯನಿಕ ಮುಕ್ತ ಅಭಿಯಾನಕ್ಕೆ ಚಾಲನೆ ನೀಡುತ್ತಿದ್ದು, ರಾಜ್ಯದ ಪ್ರತಿ ಹಳ್ಳಿ,ಹಳ್ಳಿಗೂ ತೆರಳಿ ಈ ಬಗ್ಗೆ ಜಾಗೃತಿ ಮೂಡಿಸಲಾಗುವುದು ಎಂದು ಹೇಳಿದ ಅವರು, ರೈತರ ಸಮಸ್ಯೆಗಳನ್ನು ಸರ್ಕಾರದ ಮುಂದಿಟ್ಟು ಪರಿಹಾರ ದೊರಕಿಸಿಕೊಡುವ ನಿಟ್ಟಿನಲ್ಲಿ ಸಹ ಶ್ರಮಿಸುವುದಾಗಿ ಭರವಸೆ ನೀಡಿದರು.

ರೈತ ಕಲ್ಯಾಣ ಸಂಘ ಹಾಗೂ ಭೂಮಿಪುತ್ರ ರೈತಮಿತ್ತ ಸಂಸ್ಥೆ ವತಿಯಿಂದ  ಬೆಳೆನಾಶ ಸೇರಿದಂತೆ ಈಗಾಗಲೇ ಹಲವು ಸಮಸ್ಯೆಗಳಿಂದ  ನೊಂದಿರುವ ಸಾಕಷ್ಟು ರೈತರ ಮನೆಗೆ ತೆರಳಿ ಸಾಂತ್ವನ ಹೇಳಿ, ವೈಯಕ್ತಿಕ‌ ಪರಿಹಾರದ ಜೊತೆ, ಸರ್ಕಾರದಿಂದ ಸಿಗಬೇಕಾದ ಪರಿಹಾರವನ್ನೂ ಮಂಜೂರು ಮಾಡಿಸಲಾಗಿದೆ..ರೈತರ ಯಾವುದೇ ಸಮಸ್ಯೆಗಳಿದ್ದರೂ ನೇರವಾಗಿ ನಮ್ಮ ಸಂಘವನ್ನು ಸಂಪರ್ಕಿಸಬಹುದು ಎಂದರಲ್ಲದೇ, ಭೂ ತಾಯಿಯ ಸೇವೆ ಮಾಡಲು ಸಿಕ್ಕಿರುವ ಅವಕಾಶ ನನ್ನ ಸೌಭಾಗ್ಯ ಎಂದರು.

ಇದೇ ಸಂದರ್ಭದಲ್ಲಿ ನಂಜನಗೂಡು, ಹುಲ್ಲಹಳ್ಳಿ ಸೇರಿದಂತೆ ಸುತ್ತಮುತ್ತಲಿನ ಸಾಕಷ್ಟು ರೈತರು ಸಂಘಕ್ಕೆ ಸೇರ್ಪಡೆಯಾದರು.

Sneha Gowda

Recent Posts

ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ: ಆರೋಪಿ ಬಿಭವ್‌ ಕುಮಾರ್‌ ವಶಕ್ಕೆ

ಆಮ್‌ ಆದ್ಮಿ ಪಕ್ಷದ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ನಡೆಸಿದ ಆರೋಪಿ, ಅರವಿಂದ್‌ ಕೇಜ್ರಿವಾಲ್‌ ಆಪ್ತ ಕಾರ್ಯದರ್ಶಿ…

21 mins ago

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಹುಸಿ ಬಾಂಬ್ ಬೆದರಿಕೆ: ಪ್ರಯಾಣಿಕನ ಮೇಲೆ ಪ್ರಕರಣ ದಾಖಲು

ಬೆಂಗಳೂರಿನಿಂದ ಪುಣೆಗೆ ಹೊರಟಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದ ಚೆಕ್-ಇನ್ ಬ್ಯಾಗ್‌ನಲ್ಲಿ ಬಾಂಬ್ ಅಡಗಿಸಿಟ್ಟಿರುವುದಾಗಿ ಸುಳ್ಳು ಬೆದರಿಕೆ ಹಾಕಿ ಭೀತಿ…

30 mins ago

ಸಂವಿಧಾನವನ್ನು ಯಾವುದೇ ಸರ್ಕಾರ ಬದಲಾಯಿಸಲು ಸಾಧ್ಯವಿಲ್ಲ : ನಿತಿನ್‌ ಗಡ್ಕರಿ

ಬಿಜೆಪಿ ಅಧಿಕಾರಕ್ಕೆ ಬಂದರೆ ಸಂವಿಧಾನ ಬದಲಿಸಲಿದೆ ಎನ್ನುವ ಕಾಂಗ್ರೆಸ್‌ ಆರೋಪಕ್ಕೆ ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿಗಳ ಖಾತೆ ಸಚಿವ…

42 mins ago

ತೀರ್ಥಯಾತ್ರೆಗೆ ಬಂದ ನಾಲ್ವರು ನದಿಯಲ್ಲಿ ಮುಳುಗಿ ದಾರುಣ ಸಾವು

ತೀರ್ಥಯಾತ್ರೆಗೆಂದು ಅತಿಥಿ ಗೃಹಕ್ಕೆ ಬಂದಿದ್ದವರು ನದಿಯಲ್ಲಿ ಬಟ್ಟೆ ತೊಳೆಯಲು ಹೋಗಿ ನಾಲ್ವರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಕೊಲ್ಲಾಪುರದ ಕಾಗಲ್ ತಾಲೂಕಿನ…

1 hour ago

ಪ್ರಾಚೀನರ ಕಲಾ ಕೊಡುಗೆಗಳ ಸಂರಕ್ಷಣೆ ಅಗತ್ಯ: ನೇಮಿರಾಜ ಶೆಟ್ಟಿ

ಇತಿಹಾಸವನ್ನು ಚಿತ್ರಗಳ ಮೂಲಕ ಜೋಪಾಸನೆ ಮಾಡುವ ಕಾಯಕವೂ ಅತ್ಯಂತ ಶ್ರೇಷ್ಠ. ಮುಂದಿನ ಪೀಳಿಗೆಗೆ ಪ್ರಾಚೀನರ ಕಲಾ ಕೊಡುಗೆಯನ್ನು ಸಂರಕ್ಷಣೆ ಮಾಡುವುದು…

1 hour ago

ಮತ್ತೆ ವಿವಾದಕ್ಕೆ ಸಿಲುಕಿದ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ

ಒಂದು ವರ್ಷದ ಸಾಧನೆಯ ರಿಪೋರ್ಟ್ ಕಾರ್ಡ್ ಹಿಡಿದು ಹಿರಿಯ ಬಿಜೆಪಿ ಮುಖಂಡರ ಬಳಿ ಶಾಸಕ ಅಶೋಕ್ ಕುಮಾರ್ ರೈ ತೆರಳಿದ್ದು, ಶಾಸಕ…

1 hour ago