News Karnataka Kannada
Saturday, May 04 2024
ಮೈಸೂರು

ಸಿಡಿಲಿನಿಂದ ತಪ್ಪಿಸಿಕೊಳ್ಳುವ ಕೆಲ ಮುನ್ನೆಚ್ಚರಿಕಾ ಕ್ರಮ

Gudugu Minchu Sidilu
Photo Credit :

ಮೈಸೂರು: ಮುಂಗಾರು ಆರಂಭಕ್ಕೆ ಮುನ್ನ ಗುಡುಗು ಸಿಡಿಲಿನೊಂದಿಗೆ ಮಳೆ ಸುರಿಯುವುದು ಮಾಮೂಲಿ. ಇಂತಹ ಸಂದರ್ಭ ಸಿಡಿಲು ಬಡಿದು ಸಾವನ್ನಪ್ಪುವವರ ಸಂಖ್ಯೆಯೂ ಹೆಚ್ಚಿರುತ್ತದೆ.

ಸಿಡಿಲಿನಿಂದ ಸಂಭವಿಸುವ ಸಾವನ್ನು ತಪ್ಪಿಸುವುದು ಹೇಗೆ ಎಂಬುದರ ಬಗ್ಗೆ ರಾಜ್ಯ ವಿಪತ್ತು ನಿರ್ವಹಣಾ ಕೇಂದ್ರ ಕೆಲ ಮುನ್ನೆಚ್ಚರಿಕಾ ಕ್ರಮಗಳನ್ನು ತಿಳಿಸಿದೆ.

ಗುಡುಗು-ಮಿಂಚು ಬರಲಿದೆ ಎಂದು ಗೊತ್ತಾದಾಗ ನೀವು ಬಯಲಿನಲ್ಲಿದ್ದರೆ. ತಕ್ಷಣವೇ ಇರುವುದರಲ್ಲಿ ತಗ್ಗು ಪ್ರದೇಶಕ್ಕೆ ಹೋಗಿ ಕುಳಿತುಕೊಳ್ಳಿ. ನಿಲ್ಲ ಬೇಡಿ.

ತಗ್ಗು ಪ್ರದೇಶ ಇಲ್ಲದೆ ಬಯಲಿನಲ್ಲೆ ಇರಬೇಕಾದರೆ. ನಿಮ್ಮ ತಲೆಯನ್ನು ಮೊಣಕಾಲುಗಳ ನಡುವೆ ಹುದುಗಿಸಿಕೊಳ್ಳಿ, ಇದು ಮಿಂಚಿನಿಂದ ಮೆದುಳಿಗೂ, ಹೃದಯಕ್ಕೂ ಆಗುವ ಹಾನಿಯನ್ನು ತಪ್ಪಿಸುತ್ತದೆ. ಮರಗಳಿದ್ದ ಪ್ರದೇಶದಲ್ಲಿ ನೀವು ಇದ್ದರೆ, ಅಲ್ಲಿಂದ ಬೇಗನೆ ಹೊರಬರುವುದು ಒಳ್ಳೆಯದು.(ಏಕೆಂದರೆ ಸಿಡಿಲು ಮೋಡದಿಂದ ಭೂಮಿಗೆ ಹರಿಯಲು ವಿದ್ಯುತ್ ಮರದಂತಹ ಹಸಿ, ಒದ್ದೆ ವಸ್ತುವನ್ನೇ ಆರಿಸಿಕೊಳ್ಳುತ್ತದೆ.) ಎತ್ತರದ ಗುಡ್ಡದ ಮೇಲಿದ್ದರೆ ತಗ್ಗಿಗೆ ಇಳಿಯಿರಿ. ಕುರಿ ಮಂದೆ ಅಥವಾ ಜಾನುವಾರುಗಳ ಮಧ್ಯ ನಿಂತಿದ್ದರೆ, ಅವುಗಳ ಮಧ್ಯದಲ್ಲಿ ಬಗ್ಗಿ ಕುಳಿತುಕೊಳ್ಳಿ, (ಏಕೆಂದರೆ ಮಿಂಚು ಪ್ರಾಣಿಗಳಿಗಿಂತ ಎತ್ತರವಿರುವ ಮನುಷನನ್ನೇ ಆರಿಸಿಕೊಳ್ಳುತ್ತದೆ)

ಕೆರೆಯಲ್ಲಿ ಈಜುವುದು, ಸ್ನಾನ ಮಾಡುವುದು ಮಾಡಲೇಬೇಡಿ. ನೀರಿನಲ್ಲಿದ್ದರೆ ತಕ್ಷಣ ಹೊರಬನ್ನಿ. ವಿದ್ಯುತ್ ಕಂಬ, ಎಲೆಕ್ಟ್ರಿಕಲ್ ಟವರ್, ಮೊಬೈಲ್ ಟವರ್, ಟ್ರಾನ್ಸ್ ಫಾರ್ಮರ್ ಮುಂತಾದವುಗಳ ಹತ್ತಿರವೂ ಇರಬೇಡಿ. ತಂತಿಬೇಲಿ, ಬಟ್ಟೆ ಒಣಹಾಕುವ ತಂತಿ, ಇವುಗಳಿಂದ ದೊರವಿರಿ. ಮಳೆ ಬರುವ ಸಮಯದಲ್ಲಿ ಮನೆಯ ಟೆರೇಸನ್ನು ಸ್ವಚ್ಛ ಮಾಡುವ ಸಾಹಸ ಬೇಡ. ಮನೆಯ ಕಿಟಕಿಯ ಬಳಿ ನಿಲ್ಲುವುದಕ್ಕಿಂತಲೂ ಮನೆಯ ಮಧ್ಯದಲ್ಲಿರುವುದು ಸುರಕ್ಷಿತ. ಗುಡುಗು-ಸಿಡಿಲಿನ ಸಂದರ್ಭದಲ್ಲಿ ಫೋನ್ ಮಾಡಬೇಡಿ. ಚಾರ್ಜ್ ಮಾಡಬೇಡಿ.

ಕಾರಿನಲ್ಲಿ ಪ್ರಯಾಣಿಸುತ್ತಿದ್ದರೆ ಗಾಜನ್ನು ಮುಚ್ಚಿಕೊಳ್ಳಿ. ಕಾರಿನ ಬಾಡಿಯನ್ನು ಸಾಧ್ಯವಾದಷ್ಟು ಸ್ಪರ್ಶಿಸದೆ ಮಧ್ಯದಲ್ಲಿ ಕುಳಿತುಕೊಳ್ಳಿ. ಕಂಪ್ಯೂಟರ್ ಗಳಿಂದ ದೂರ ಇರಿ. ಮನೆಯ ಕಾಂಕ್ರಿಟ್ ಗೋಡೆಗಳನ್ನು ಸ್ಪರ್ಶಿಸದೆ ಕೋಣೆಯ ಮಧ್ಯದಲ್ಲಿದ್ದರೆ ಹೆಚ್ಚು ಸುರಕ್ಷಿತ. ಈ ಮುಂಜಾಗ್ರತಾ ಕ್ರಮಗಳನ್ನು ಪಾಲಿಸಿದರೆ ಸಿಡಿಲಿನಿಂದ ತಪ್ಪಿಸಿಕೊಳ್ಳಬಹುದು ಎಂಬುದು ಇಲಾಖೆಯ ಸಲಹೆ ಆಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು