News Karnataka Kannada
Saturday, May 11 2024
ಮೈಸೂರು

ಸುಳ್ಯದ ದಂಪತಿ ಮೈಸೂರಿನಲ್ಲಿ ಆತ್ಮಹತ್ಯೆ

Mother dead wherever she was, come home early: Son in tears with mother's body for sister
Photo Credit :

ಮೈಸೂರು :  ಮೈಸೂರಿನಲ್ಲಿ ನೆಲೆಸಿದ್ದ ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶನಿವಾರ ವರದಿಯಾಗಿದೆ.

ಸುಳ್ಯ ಕುಕ್ಕಾಜೆಕಾನದ ಮಾಧವ ನಾಯ್ಕ್ (56) ಮತ್ತು ಅವರ ಪತ್ನಿ ಉಷಾ (47) ಆತ್ಮಹತ್ಯೆ ಮಾಡಿಕೊಂಡ ದಂಪತಿ. ಸೋಣಂಗೇರಿ ಮಂಗಳೂರು ಮೊದಲಾದೆಡೆ ಪೋಸ್ಟ್ ಮ್ಯಾನ್ ಆಗಿ ಕಾರ್ಯನಿರ್ವಹಿಸಿದ್ದ ಸುಳ್ಯ ಕುಕ್ಕಾಜೆಕಾನ ಮಾಧವ ನಾಯ್ಕ್ ಅವರು 3 ವರ್ಷಗಳ ಹಿಂದೆ ಪತ್ನಿ, ಪುತ್ರಿ ಸಮೇತ ಮೈಸೂರಿಗೆ ಹೋಗಿ ನೆಲೆಸಿದ್ದರು. ಕಳೆದ ವರ್ಷ ಪುತ್ರಿಯ ಮದುವೆ ಕೂಡ ಮಾಡಿಸಿದ್ದರು.

ಅತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮೈಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ಮಹಜರು ನಡೆದು ಮೃತದೇಹಗಳನ್ನು ರವಿವಾರ ರಾತ್ರಿ ಸುಳ್ಯ ಕುಕ್ಕಾಜೆಕಾನಕ್ಕೆ ತಂದು ಅಂತ್ಯಸಂಸ್ಕಾರ ನೆರವೇರಿಸಲಾಯಿತು.

ಮಾಧವ ನಾಯ್ಕ್ ಮೂರ್ನಾಲ್ಕು ವರ್ಷಗಳ ಹಿಂದೆ ಪೋಸ್ಟ್ ಮ್ಯಾನ್ ವೃತ್ತಿಯಿಂದ ಸ್ವಯಂ ನಿವೃತ್ತಿ ಪಡೆದು ಮೈಸೂರಿಗೆ ಹೋಗಿದ್ದರು. ಮೃತರು ಪುತ್ರಿ ಹಾಗೂ ಬಂಧುಗಳನ್ನು ಅಗಲಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು