ಮೈಸೂರು : ಹಾಲಿನ ದರ ಹೆಚ್ಚಳ ಮಾಡುವ ಪ್ರಸ್ತಾಪ ಇಲ್ಲ, ಆಯಾ ಹಾಲು ಒಕ್ಕೂಟದವರು ಲಾಭಾಂಶದಲ್ಲಿ ರೈತರಿಗೆ ಕೊಡಬಹುದು. ಇದರಲ್ಲಿ ಸರ್ಕಾರ ಮಧ್ಯ ಪ್ರವೇಶಿಸುವುದಿಲ್ಲ ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಹೇಳಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿ, ಸರ್ಕಾರ ಹಾಲಿನ ದರವನ್ನು ಹೆಚ್ಚಳ ಮಾಡುವುದಿಲ್ಲ ಎಂದರು. ಚಂದ್ರು ಕೊಲೆ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಲಾಗಿದೆ. ಗೃಹ ಮಂತ್ರಿಗಳು ಸಮರ್ಥರಿದ್ದಾರೆ. ತಪ್ಪಿತಸ್ಥರು ಯಾರೇ ಆದರೂ ಶಿಕ್ಷೆ ಆಗಬೇಕೆಂದು ಹೇಳಿದ್ದಾರೆ. ಪ್ರಕರಣವನ್ನು ಸಮರ್ಥವಾಗಿ ನಿಭಾಯಿಸಲಿದ್ದಾರೆ ಎಂದರು.
ಬೆಲೆ ಏರಿಕೆ ವಿಚಾರವಾಗಿ ಕಾಂಗ್ರೆಸ್ ಪ್ರತಿಭಟನೆ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿ, ಅಸ್ತಿತ್ವ ಉಳಿಸಿಕೊಳ್ಳಲು ಕಾಂಗ್ರೆಸ್ ಯಾವುದಾದರೊಂದು ಕಾರ್ಯಕ್ರಮ ಮಾಡುತ್ತಿದೆ. ನಾವೂ ಇದ್ದೇವೆ ಎಂದು ತೋರಿಸಿಕೊಳ್ಳಲು ಕಾರ್ಯಕ್ರಮಗಳನ್ನು ಮಾಡುತ್ತಿದ್ದಾರೆ ಅಷ್ಟೇ ಎಂದರು.
ಬಿಜೆಪಿ ಸಂಘಟನೆ ಯಾತ್ರೆ ಕುರಿತು ಮೈಸೂರು ಜಿಲ್ಲಾಧ್ಯಕ್ಷರು ಈಗಾಗಲೇ ಸಭೆ ಮಾಡಿದ್ದಾರೆ. ಮಂಗಳವಾರದಿಂದ ಕೋರ್ ಕಮಿಟಿ ಸಭೆ ನಡೆಯಲಿದೆ. ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ರಚನೆಯಾಗಿರುವ ಸಮಿತಿ ಸದಸ್ಯರು ಆಗಮಿಸಲಿದ್ದಾರೆ. ಏ.12,13ರಂದು ಪಕ್ಷದ ಆದೇಶದಂತೆ ಕಾರ್ಯಕ್ರಮ ನಡೆಯಲಿದೆ. ಅವಧಿಗೆ ಮುನ್ನ ಚುನಾವಣೆ ನಡೆಯುವುದಿಲ್ಲ ಎಂದರು.
ಯೋಗ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಸಂಸದರಾದ ಪ್ರತಾಪ್ ಸಿಂಹ ಅವರು ಆಹ್ವಾನಿಸಿದ್ದಾರೆ. ಮೈಸೂರಿನಲ್ಲಿ ಹೆಚ್ಚು ಯೋಗ ಕಾರ್ಯಕ್ರಮಗಳು ನಡೆಯುವುದರಿಂದ ಪ್ರಧಾನಿಗಳ ಮೈಸೂರು ಆಗಮನ ಸಂತೋಷದ ವಿಚಾರ. ಮೈಸೂರು ಜನತೆ ಪರವಾಗಿ ಅದ್ಧೂರಿಯಾಗಿ ಸ್ವಾಗತ ಕೋರಲಾಗುವುದು ಎಂದರು.
ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…
ಜಿಲ್ಲೆಯ 5ನೇ ಸಿವಿಲ್ ಕೋರ್ಟ್ನಲ್ಲಿ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ನ್ಯಾಯಾಧೀಶರು,…
ಮುಂಗಾರು ಪ್ರವೇಶಕ್ಕೆ ಕ್ಷಣಗಣನೆ ಆರಂಭವಾಗಿರುವಂತೆಯೇ ದೇವರನಾಡು ಕೇರಳದಲ್ಲಿ ಭಾರಿ ಮಳೆಯಾಗುತ್ತಿದ್ದು, ಶನಿವಾರ ಭಾರತೀಯ ಹವಾಮಾನ ಇಲಾಖೆ (IMD) ರೆಡ್ ಅಲರ್ಟ್…
ರಾಜ್ಯ ವಿಧಾನ ಪರಿಷತ್ಗೆ ನೈಋತ್ಯ, ಈಶಾನ್ಯ, ಬೆಂಗಳೂರು ಪದವೀಧರ ಕ್ಷೇತ್ರಗಳು ಹಾಗೂ ಆಗ್ನೇಯ, ನೈಋತ್ಯ ಶಿಕ್ಷಕರ ಕ್ಷೇತ್ರ, ದಕ್ಷಿಣ ಶಿಕ್ಷಕರ…
ಪ್ಲೇ ಆಫ್ ಪ್ರವೇಶಕ್ಕೆ ಮಹತ್ವವಾದ ಶನಿವಾರದ ಐಪಿಎಲ್(IPL 2024) ಪಂದ್ಯದಲ್ಲಿ ಆರ್ಸಿಬಿ ವಿರುದ್ಧ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್…
ಕಳೆದ ವಿಧಾನಸಭಾ ಹಾಗೂ ಲೋಕಸಭಾ ಚುನಾವಣೆ ಮಾದರಿಯಂ ತೆ, ವಿಧಾನ ಪರಿಷತ್ ಚುನಾವಣೆಯಲ್ಲೂ ಕಾರ್ಯಕರ್ತರುಗಳು ಅಭ್ಯರ್ಥಿಗಳ ಪರವಾಗಿ ಬೂತ್ಮಟ್ಟ ದಿಂದ…