News Karnataka Kannada
Sunday, May 05 2024
ಮೈಸೂರು

ಹಿಜಾಬ್ ನಿರ್ಧಾರದಿಂದ ಸರ್ಕಾರ ಹಿಂದೆ ಸರಿಯುವುದಿಲ್ಲ: ಸಚಿವ ಜೆ ಸಿ ಮಾಧುಸ್ವಾಮಿ

Maadhu Swamy
Photo Credit : News Kannada

ಮೈಸೂರು: ಹಿಜಾಬ್ ವಿಚಾರದಲ್ಲಿ ಸರ್ಕಾರ ತನ್ನ ನಿರ್ಧಾರದಿಂದ ಹಿಂದೆ ಸರಿಯುವುದಿಲ್ಲ ಎಂದು ಪುನರುಚ್ಚರಿಸಿದ ಕಾನೂನು ಸಚಿವ ಜೆ ಸಿ ಮಾಧುಸ್ವಾಮಿ ಭಾನುವಾರ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನ್ಯಾಯಾಲಯದ ಆದೇಶವನ್ನು ಯಾರೂ ಧಿಕ್ಕರಿಸಲು ಸಾಧ್ಯವಿಲ್ಲ ಮತ್ತು ತೀರ್ಪನ್ನು ಮರು ಪರಿಶೀಲಿಸುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಹೈಕೋರ್ಟ್ ಆದೇಶದ ವಿರುದ್ಧ ಪ್ರತಿಭಟನೆ ನಡೆಸಿದ ಮುಸ್ಲಿಂ ಸಂಘಟನೆಗಳಿಗೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನೀಡಿರುವ ಬೆಂಬಲ ಕುರಿತು ಪ್ರತಿಕ್ರಿಯಿಸಿದ ಸಚಿವರು, ‘ಸರ್ಕಾರದ ವಿರುದ್ಧ ಎರಡು ಬಾರಿ ನ್ಯಾಯಾಂಗ ನಿಂದನೆ ಆರೋಪ ಹೊರಿಸಲಾದ ಬಗ್ಗೆ ವಿಧಾನಸಭೆಯಲ್ಲೂ ವಿರೋಧ ಪಕ್ಷದ ನಾಯಕರಿಗೆ ವಿವರಿಸಿದ್ದೇನೆ.

ಕಾವೇರಿ ವಿಚಾರ ಮತ್ತು ಡಾ ರಾಜ್‌ಕುಮಾರ್ ಅಪಹರಣ ಪ್ರಕರಣದಲ್ಲಿ ನ್ಯಾಯಾಲಯದ ನಿಂದನೆಯನ್ನು ಎದುರಿಸಲಾಗಿದೆ. ಇದೀಗ ಮತ್ತೆ ಅಂತಹದ್ದೇ ಪರಿಸ್ಥಿತಿ ಎದುರಿಸಲು ಸರ್ಕಾರ ಸಿದ್ಧವಿಲ್ಲ. ನ್ಯಾಯಾಲಯದ ಆದೇಶವನ್ನು ಧಿಕ್ಕರಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ವಿದ್ಯಾರ್ಥಿಗಳು ಪರೀಕ್ಷೆ ಬರೆಯುವುದಿಲ್ಲ ಎಂದು ಹೇಳುತ್ತಿದ್ದಾರೆಂಬ ಪ್ರಶ್ನೆಗೆ ಉತ್ತರಿಸಿ, ನ್ಯಾಯಾಲಯದ ಆದೇಶಕ್ಕೆ ಬದ್ಧರಾಗಿರುವ ಕಾರಣ ಸರ್ಕಾರವು ಈ ಬಗ್ಗೆ ಏನೂ ಮಾಡಲು ಸಾಧ್ಯವಿಲ್ಲ ಎಂದು ತಿಳಿಸಿದರು.

ಶಿಕ್ಷಣ ಸಚಿವ ಬಿ ಸಿ ನಾಗೇಶ್ ಅವರು ಈಗಾಗಲೇ ಈ ಬಗ್ಗೆ ಸ್ಪಷ್ಟಪಡಿಸಿದ್ದಾರೆ. ಶಾಲಾ ಪಠ್ಯಕ್ರಮದಲ್ಲಿ ಭಗವದ್ಗೀತೆಯನ್ನು ಸೇರಿಸುವ ಯಾವುದೇ ಪ್ರಸ್ತಾಪವಿಲ್ಲ ಎಂದು ಹೇಳಿದರು.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು