Categories: ಮೈಸೂರು

ಹಿಜಾಬ್ ವಿವಾದ: ಕಲಬುರಗಿ ಶಾಸಕಿ ಹೇಳಿಕೆಗೆ ಖಾರವಾಗಿ ಪ್ರತಿಕ್ರಿಯಿಸಿದ ಕೆ.ಎಸ್. ಈಶ್ವರಪ್ಪ

ಮೈಸೂರು, ಫೆ. 8 : ಹಿಜಾಬ್ ಧರಿಸಿಯೇ ವಿಧಾನಸಭೆ ಅಧಿವೇಶನಕ್ಕೆ ಬರುತ್ತೇನೆ, ಯಾರಿಗಾದರೂ ಧೈರ್ಯವಿದ್ದರೆ ತಡೆಯಲಿ ಎಂದು ಕಲಬುರಗಿ ಶಾಸಕಿ ಖನೀಜ್ ಫಾತೀಮಾ ಹೇಳಿಕೆ ವಿಚಾರವಾಗಿ ಸಚಿವ ಕೆ.ಎಸ್. ಈಶ್ವರಪ್ಪ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.

ಮೈಸೂರು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಹಿಜಾಬ್ ಹಾಕಿಕೊಂಡು ಅಧಿವೇಶನಕ್ಕೆ ಬರುವುದಲ್ಲ. ನೀವು ಮೊದಲು ಮಸೀದಿಗೆ ಹೋಗಿ. ಎಷ್ಟು ಜನ ಮಹಿಳೆಯರು ಮಸೀದಿಗೆ ಹೋಗಲು ಅವಕಾಶ ಇದೆ ಎಂದು ಪ್ರಶ್ನಿಸಿದರು.

ನಾವು ಶಾಲೆಗೆ ಮಾತ್ರ ಹಿಜಾಬ್ ನಿಷೇಧಿಸಿದ್ದೇವೆ. ಹೊರಗಡೆಗೆ ನಿಷೇಧ ಮಾಡಿಲ್ಲ ಎಲ್ಲಾ ಕಡೆ ಹಾಕಿಕೊಂಡು ಹೋಗಬಹುದು. ಹಿಜಾಬ್ ವಿಚಾರದಲ್ಲಿ ಎಂಎಲ್‌ಸಿ ಸಿಎಂ ಇಬ್ರಾಹಿಂ ಹೇಳಿಕೆಗೆ ಪ್ರತಿಕ್ರಿಯಿಸಿ, ಇದು ವಿಕೃತಿಯಿಂದ ಕೂಡಿದ ಹೇಳಿಕೆ. ಇದು ಮುಸ್ಲಿಂ ಮಹಿಳೆಯರಿಗೆ ಮಾಡಿದ ಅವಮಾನ. ಅವರ ಮುಖ ನೋಡಲು ಹಿಜಾಬ್ ತೆಗೆಯಬೇಕಾ? ಇಬ್ರಾಹಿಂ ಅವರ ಈ ಹೇಳಿಕೆ ಯಾರೂ ಒಪ್ಪುವಂತದಲ್ಲ. ಸಮವಸ್ತ್ರ ಶಿಸ್ತಿನ ಹಿನ್ನೆಲೆಯಿಂದ ಈ ಆದೇಶ ಮಾಡಲಾಗಿದೆ ಎಂದು ಹೇಳಿದರು.

ಉಡುಪಿಯಿಂದಲೇ ಕಾಂಗ್ರೆಸ್ ಸರ್ವನಾಶ

ಹಿಜಾಬ್ ವಿವಾದದಿಂದಲೇ ಕಾಂಗ್ರೆಸ್ ಸರ್ವನಾಶವಾಗುವುದು ಖಚಿತ. ಉಡುಪಿಯಿಂದಲೇ ಕಾಂಗ್ರೆಸ್ ಸರ್ವನಾಶದ ಆರಂಭವಾಗಿದೆ. ಈ ಹಿಂದೆ ಗೋ ಹತ್ಯೆ ನಿಷೇಧವನ್ನು ಉಡುಪಿಯಲ್ಲೇ ಮಾಡಿದ್ದರು. ಆಗ ಸಿದ್ದರಾಮಯ್ಯ ಸಿಎಂ ಅಧಿಕಾರ ಕಳೆದುಕೊಂಡರು. ಚಾಮುಂಡೇಶ್ವರಿಯಲ್ಲೂ ಸೋತರು ಈಗ ಅಲ್ಲಿಂದಲೇ ಹಿಜಾಬ್ ವಿವಾದ ಸೃಷ್ಟಿಯಾಗಿದೆ. ಹಿಜಾಬ್ ವಿವಾದದ ಹಿಂದೆ ಸಂಪೂರ್ಣವಾಗಿ ಕಾಂಗ್ರೆಸ್ ಪಕ್ಷ ಇದೆ. ವೋಟ್ ಬ್ಯಾಂಕ್‌ಗಾಗಿ ಕಾಂಗ್ರೆಸ್ ಮುಖಂಡರಿಂದ ಈ ಕೆಲಸವಾಗುತ್ತಿದೆ ಎಂದು ಸಚಿವ ಕೆ.ಎಸ್. ಈಶ್ವರಪ್ಪ ಹರಿಹಾಯ್ದರು.

ಕಾಂಗ್ರೆಸ್ ಮುಖಂಡರು ಮನಸು ಮಾಡಿದ್ದರೆ ಸಮಸ್ಯೆ ಬಗೆಹರಿಸಬಹುದಿತ್ತು. ಆ ಆರು ಜನ ವಿದ್ಯಾರ್ಥಿನಿಯರಿಗೆ ತಿಳುವಳಿಕೆ ನೀಡಬಹುದಿತ್ತು. ಆದರೆ ಕಾಂಗ್ರೆಸ್‌ಗೆ ಮುಸ್ಲಿಂ ಮತಗಳೇ ಮುಖ್ಯವಾದವು. ಕಾಂಗ್ರೆಸ್ ಒಡೆದು ಆಳುವ ನೀತಿ ಅನುಸರಿಸುತ್ತಿದೆ. ಹಿಂದೆ ವೀರಶೈವ ಲಿಂಗಾಯತ ಧರ್ಮ, ನಂತರ ಮತಾಂತರದ ವಿಷಯ ಗೋಹತ್ಯೆ, ಈಗ ಹಿಜಾಬ್ ಅವರ ರಾಜಕೀಯ ವಿಚಾರವಾಗಿದೆ. ಹಿಂದೂ ಮುಸ್ಲಿಂ ಒಡೆದಿದ್ದು ಕಾಂಗ್ರೆಸ್ ಅಪವಾದ ಮಾತ್ರ ಬಿಜೆಪಿ ಮೇಲೆ ಎಂದು ಈಶ್ವರಪ್ಪ ಕಿಡಿಕಾರಿದರು.

 

Gayathri SG

Recent Posts

ಯುಎಇ ರಾಯಲ್‌ ಮನೆತನದ ಸದಸ್ಯನ ನಿಗೂಢ ಸಾವು

ಯುನೈಟೆಡ್ ಅರಬ್ ಎಮಿರೇಟ್ಸ್‌ನ  ರಾಯಲ್ ಮನೆತನದ ಸದಸ್ಯ ಶೇಖ್ ಹಝಾ ಬಿನ್ ಸುಲ್ತಾನ್ ಬಿನ್ ಜಾಯೆದ್ ಅಲ್ ನಹ್ಯಾನ್ ನಿಗೂಢವಾಗಿ…

3 hours ago

ಬಸವ ಜಯತಿಯ ಅಂಗವಾಗಿ ಆದಿವಾಸಿ ಮಕ್ಕಳಿಗೆ ಹಣ್ಣು-ಹಂಪಲು ವಿತರಣೆ

ಮದರ ತೆರೆಸಾ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಹಾಗೂ ನವೀನ ಪಬ್ಲಿಕ್ ಸ್ಕೂಲ್ ವತಿಯಿಂದ ಬೀದರ ನಗರದ ನೌಬಾದ ಹತ್ತಿರ…

3 hours ago

ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥ

ರಾಮನಗರ ತಾಲೂಕಿನ ಕನ್ನಮಂಗಲದೊಡ್ಡಿ ಗ್ರಾಮದಲ್ಲಿ‌ ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ  ನಡೆದಿದೆ.

4 hours ago

ಮಡಿಕೇರಿ ಜಿಲ್ಲಾಡಳಿತದಿಂದ ಬಸವೇಶ್ವರರ ಹಾಗೂ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ನಾಡಿನ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವೇಶ್ವರರ ಮತ್ತು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿಯನ್ನು ಜಿಲ್ಲಾಡಳಿತ ವತಿಯಿಂದ ಶುಕ್ರವಾರ ಸರಳವಾಗಿ…

5 hours ago

ಗುಂಡ್ಲುಪೇಟೆ: ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವು

ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

5 hours ago

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ: ಮಹೇಶ್ ಟೆಂಗಿನಕಾಯಿ

ಪ್ರಜ್ವಲ್ ಪ್ರಕರಣದಲ್ಲಿ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ' ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ…

6 hours ago