ಟಿ.ನರಸೀಪುರ: ಎಸ್ಸೆಸ್ಸೆಲ್ಸಿ ಪರೀಕ್ಷೆ ಮೊದಲ ದಿನ ಪರೀಕ್ಷೆ ಬರೆಯುವಾಗಲೇ ವಿದ್ಯಾರ್ಥಿನಿಯೊಬ್ಬಳು ಹೃದಯಾಘಾತದಿಂದ ಮೃತಪಟ್ಟ ಘಟನೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಸಂಭವಿಸಿದೆ.
ಟಿ.ನರಸೀಪುರದ ಅಕ್ಕೂರು ಗ್ರಾಮದ ನಿವಾಸಿ ಅನುಶ್ರೀ ಮೃತಪಟ್ಟ ದುರ್ದೈವಿ. ಪರೀಕ್ಷೆ ಬರೆಯುವ ವೇಳೆ ಹೃದಯಾಘಾತದಿಂದ ದಿಢೀರನೆ ಕುಸಿದು ಬಿದ್ದಿದ್ದಾಳೆ. ಕೂಡಲೇ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೇ ಅಸುನೀಗಿದ್ದಾಳೆ.
ಮಾದಾಪುರ ಪ್ರೌಢಶಾಲಾ ವಿದ್ಯಾರ್ಥಿನಿ ಅನುಶ್ರೀ ಸೋಮವಾರ ಆರಂಭಗೊಂಡ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯುವ ವಿದ್ಯೋದಯ ಪರೀಕ್ಷಾ ಕೇಂದ್ರದಲ್ಲಿ ಕುಸಿದುಬಿದ್ದಿದ್ದಾಳೆ.
ಮೃತ ವಿದ್ಯಾರ್ಥಿನಿಯ ಶವವನ್ನು ಆಸ್ಪತ್ರೆಯ ಶವಗಾರದಲ್ಲಿ ಇರಿಸಲಾಗಿದ್ದು, ಮರಣೋತ್ತರ ಪರೀಕ್ಷೆ ನಂತರ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗುವುದು.