Categories: ಮೈಸೂರು

ಮೈಸೂರು: ಲೋಕ್ ಅದಾಲತ್‌ನಲ್ಲಿ ಒಂದಾದ 18 ಜೋಡಿಗಳು

ಮೈಸೂರು: ಮೈಸೂರಿನಲ್ಲಿ ನಡೆದ ಲೋಕ್ ಅದಾಲತ್‌ನಲ್ಲಿ 18 ಮಂದಿ ದಂಪತಿಗಳು ಒಂದಾಗಿದ್ದಾರೆ. ಬೇರ್ಪಟ್ಟಿದ್ದ ತಂದೆ-ಮಗಳು ಒಂದಾಗಿದ್ದಾರೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹಾಗೂ ಮೈಸೂರು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಎಂ.ಎಲ್ ರಘುನಾಥ್ ತಿಳಿಸಿದ್ದಾರೆ.

ಮೈಸೂರಿನ ಜಯನಗರದ ಮಳಲವಾಡಿಯಲ್ಲಿರುವ ನ್ಯಾಯಾಲಯದ ಸಂಕೀರ್ಣದಲ್ಲಿ ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೈಸೂರು ನಗರ ಮತ್ತು ತಾಲ್ಲೂಕುಗಳಲ್ಲಿ ಒಟ್ಟು 1,50,633 ಪ್ರಕರಣಗಳು ವಿಚಾರಣೆ ನಡೆಸಲಾಗಿದೆ. ಈ ಪೈಕಿ 59059 ಸಿವಿಲ್ ಪ್ರಕರಣಗಳು, 91,574 ಕ್ರಿಮಿನಲ್ ಪ್ರಕರಣಗಳ ವಿಚಾರಣೆ ನಡೆದಿದೆ. ಸದರಿ ಪ್ರಕರಣಗಳಲ್ಲಿ 70,281 ಪ್ರಕರಣಗಳು ಇತ್ಯರ್ಥವಾಗುವ ಸಂಭವವಿದೆ. ಈಗಾಗಲೇ 52695 ಪ್ರಕರಣಗಳನ್ನು ರಾಜಿ ಆಗುವ ಸಾಧ್ಯವಿರುವ ಪ್ರಕರಣಗಳೆಂದು ಪರಿಗಣನೆ ಮಾಡಲಾಗಿದೆ ಎಂದು ತಿಳಿಸಿದರು.

ರಾಷ್ಟ್ರೀಯ ಲೋಕ್ ಅದಾಲತ್ ನಲ್ಲಿ ಈ ಬಾರಿ ಮೈಸೂರು ನ್ಯಾಯಾಲಯದಲ್ಲಿ 98 ಕೌಟುಂಬಿಕ ಕಲಹದ ಪ್ರಕರಣಗಳು ಇತ್ಯರ್ಥವಾಗಿದೆ. 18 ದಂಪತಿಗಳು ಕಲಹವನ್ನು ಮರೆತು ಲೋಕ್ ಅದಾಲತ್ ನಲ್ಲಿ ರಾಜಿಯಾಗಿ, ಮತ್ತೆ ಒಂದಾಗಿದ್ದಾರೆ. ಈ ಬಾರಿ ವಿಶೇಷವಾಗಿ ಸಂಚಾರಿ ನಿಯಮ ಉಲ್ಲಂಘನೆ ಪ್ರಕರಣಗಳು ಇತ್ಯರ್ಥವಾಗಿದ್ದು, 45 ಲಕ್ಷ ದಂಡ ವಸೂಲಿ ಮಾಡಲಾಗಿದೆ.

ತಂದೆ ಮಗಳ ನಡುವೆ ಇದ್ದ ವಿಶೇಷ ಪ್ರಕರಣವೂ ಲೋಕ್ ಅದಾಲತ್ ಮೂಲಕ ಇತ್ಯರ್ಥವಾಗಿದೆ. ವೀಡಿಯೋ ಕಾನ್ಫರೆನ್ಸ್ ಮೂಲಕ ದೆಹಲಿಯಲ್ಲಿದ್ದ ತಂದೆಯನ್ನು ಸಂಪರ್ಕಿಸಿ ರಾಜಿ ಮಾಡಲಾಗಿದೆ. ತಾಯಿ ಸತ್ತ ಬಳಿಕ ತಂದೆಯು ಮಗಳ ಜವಾಬ್ದಾರಿ ಹೊರದೆ ಅಜ್ಜಿ ಮನೆಯಲ್ಲಿ ಬಿಟ್ಟು ಹೋಗಿದ್ದರು. ಹೀಗಾಗಿ ತಂದೆಯಿಂದ ಜೀವನಾಂಶ ಕೋರಿ ಮಗಳು ಕೋರ್ಟ್ ಮೆಟ್ಟಿಲೇರಿದ್ದಳು. ಕೊನೆಗೆ ಲೋಕ್ ಅದಾಲತ್ ನಲ್ಲಿ ಇದು ಇತ್ಯರ್ಥವಾಗಿದೆ ಎಂದು ಹೇಳಿದರು.

Gayathri SG

Recent Posts

ಟಿ20 ವಿಶ್ವಕಪ್​ಗೆ ಮುನ್ನ ರಿಷಭ್​ ಪಂತ್​​ಗೆ ನಿಷೇಧ, 30 ಲಕ್ಷ ರೂ. ದಂಡ

17ನೇ ಆವೃತ್ತಿಯ ಐಪಿಎಲ್​ನ 62ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡದ ನಡುವೆ ಹೈವೋಲ್ಟೇಜ್ ಪಂದ್ಯ…

5 mins ago

ʼರಾಜ್ಯ ಸರ್ಕಾರ ಸಾಲ ಮನ್ನಾ ಮಾಡಿ ರೈತರಿಗೆ ನೆರವಾಗಬೇಕುʼ

ರಾಜ್ಯ ಸರ್ಕಾರ ಸಾಲ ಮನ್ನಾ ಮಾಡಿ ರೈತರಿಗೆ ನೆರವಾಗಬೇಕು ಎಂದು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ.

7 mins ago

ಪ್ರವಾಹಕ್ಕೆ ತತ್ತರಿಸಿ ಹೋದ ಅಫ್ಗಾನಿಸ್ತಾನ : 200ಕ್ಕೂ ಹೆಚ್ಚು ಜನ ಬಲಿ

ಅಫ್ಘಾನಿಸ್ತಾನದಲ್ಲಿ ಭಾರೀ ಮಳೆಯಿಂದ ಪ್ರವಾಹ ಉಂಟಾಗಿದೆ. ಈ ಪ್ರವಾಹದಿಂದಾಗಿ ಸುಮಾರು 200ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದಾರೆ ಎಂದು ವಿಶ್ವಸಂಸ್ಥೆ ಶನಿವಾರ…

27 mins ago

ಫ್ಲೈಯಿಂಗ್ ಎಲೆಕ್ಟ್ರಿಕ್ ಟ್ಯಾಕ್ಸಿ ನಿರ್ಮಿಸಲು ಮುಂದಾದ ಮದ್ರಾಸ್ ಐಐಟಿ-ಶ್ಲಾಘಿಸಿದ ಆನಂದ್ ಮಹೀಂದ್ರಾ

ಎಲೆಕ್ಟ್ರಿಕ್ ಫ್ಲೈಯಿಂಗ್ ಟ್ಯಾಕ್ಸಿಯನ್ನು ಅಭಿವೃದ್ಧಿಪಡಿಸುತ್ತಿರುವ ಇಂಡಿಯನ್ ಇನ್‍ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಮದ್ರಾಸ್‍ನ್ನು ಮಹೀಂದ್ರಾ ಗ್ರೂಪ್ ಅಧ್ಯಕ್ಷ ಆನಂದ್ ಮಹೀಂದ್ರಾ ಅವರು…

39 mins ago

ಜಮ್ಮು –ಕಾಶ್ಮೀರ : ಪಾಕ್ ಡ್ರೋನ್ ಹೊಡೆದುರುಳಿಸಿದ ಬಿಎಸ್ಎಫ್

ಜಮ್ಮು ಮತ್ತು ಕಾಶ್ಮೀರದ ಸಾಂಬಾ ಜಿಲ್ಲೆಯ ಅಂತರರಾಷ್ಟ್ರೀಯ ಗಡಿ ಬಳಿ ಪಾಕಿಸ್ತಾನದ ಡ್ರೋನ್ ಅನ್ನು ಗಡಿ ಭದ್ರತಾ ಪಡೆ (ಬಿಎಸ್ಎಫ್)…

49 mins ago

ನೂಕುನುಗ್ಗಲಿನಲ್ಲೂ ಪಾದಯಾತ್ರೆ ಹೊರಟ ಭಕ್ತರು : ವಿಡಿಯೋ ವೈರಲ್‌

ಯಮುನೋತ್ರಿ, ಗಂಗೋತ್ರಿ, ಕೇದರ್‌ನಾಥ್‌ ಮತ್ತು ಬದರಿನಾಥ್‌ ಪವಿತ್ರ ಚಾರ್‌ ಧಾಮ್‌ ಯಾತ್ರೆಯ ಹಿನ್ನಲೆಯಲ್ಲಿ ಅಪಾರ ಪ್ರಮಾಣದ ಭಕ್ತರು ಜಮಾಯಿಸಿದ ಪರಿಣಾಮ…

1 hour ago