News Karnataka Kannada
Monday, May 20 2024
ಮೈಸೂರು

ನಂಜನಗೂಡು ತಾಲ್ಲೂಕಿಗೆ ಶೇ.86.74 ರಷ್ಟು ಫಲಿತಾಂಶ: ವಿದ್ಯಾರ್ಥಿನಿ ಬಾಂಧವ್ಯ ತಾಲೂಕಿಗೆ ಪ್ರಥಮ ‌

ತಾಲ್ಲೂಕಿಗೆ ಶೇ.86.74 ರಷ್ಟು ಫಲಿತಾಂಶ ಬಂದಿದ್ದು, ನಂಜನಗೂಡಿನ ಸರ್ಕಾರಿ ಆದರ್ಶ ಶಾಲೆಯ ವಿದ್ಯಾರ್ಥಿನಿ ಬಾಂಧವ್ಯ ತಾಲ್ಲೂಕಿಗೆ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾರೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ವಿ ಸುರೇಶ್ ತಿಳಿಸಿದರು.
Photo Credit : NewsKarnataka

ನಂಜನಗೂಡು: ತಾಲೂಕಿಗೆ ಶೇ.86.74 ರಷ್ಟು ಫಲಿತಾಂಶ ಬಂದಿದ್ದು, ನಂಜನಗೂಡಿನ ಸರ್ಕಾರಿ ಆದರ್ಶ ಶಾಲೆಯ ವಿದ್ಯಾರ್ಥಿನಿ ಬಾಂಧವ್ಯ ತಾಲೂಕಿಗೆ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾರೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ವಿ ಸುರೇಶ್ ತಿಳಿಸಿದರು.

ನಂಜನಗೂಡು ನಗರದ ತಾಲ್ಲೂಕು ಆಡಳಿತ ಭವನದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿಯಲ್ಲಿ ಮಾತನಾಡಿದ ಅವರು, ಎಸ್ಸೆಸ್ಸೆಲ್ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ನಂಜನಗೂಡು ತಾಲ್ಲೂಕಿಗೆ 2023-24ನೇ ಶೈಕ್ಷಣಿಕ ಸಾಲಿನಲ್ಲಿ ಉತ್ತಮ ಫಲಿತಾಂಶ ಬಂದಿದೆ.

ತಾಲ್ಲೂಕಿನಲ್ಲಿ ಸುಮಾರು 70 ಪ್ರೌಢಶಾಲೆಗಳಿದ್ದು, ಈ ಬಾರಿ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಒಟ್ಟು 4706 ವಿದ್ಯಾರ್ಥಿಗಳಲ್ಲಿ 4082 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಉತ್ತಮ ಫಲಿತಾಂಶ ದಾಖಲಾಗಿದೆ. ಈ ಶೈಕ್ಷಣಿಕ ಸಾಲಿನಲ್ಲಿ 18 ಪರೀಕ್ಷಾ ಕೇಂದ್ರಗಳಲ್ಲಿ ಸಿಸಿ ಕ್ಯಾಮೆರಾ ಗಳನ್ನು ಅಳವಡಿಸಿ ಪರೀಕ್ಷೆಗಳನ್ನು ಪಾರದರ್ಶಕವಾಗಿ ನಡೆಸಲಾಗಿತ್ತು. ಇಂತಹ ಸಂದರ್ಭದಲ್ಲಿಯೂ ಸಹ ವಿದ್ಯಾರ್ಥಿಗಳು ಉತ್ತಮ ಅಂಕಗಳನ್ನುಗಳಿಸಿ ದಾಖಲೆ ಮಾಡಿದ್ದಾರೆ.

ನಂಜನಗೂಡಿನ ದೇಬೂರು ಗ್ರಾಮದ ಸರ್ಕಾರಿ ಆದರ್ಶ ಶಾಲೆಯ ವಿದ್ಯಾರ್ಥಿನಿ ಬಾಂಧವ್ಯ 625 ಕ್ಕೆ 618 ಅಂಕಗಳನ್ನು ಗಳಿಸಿ ತಾಲ್ಲೂಕಿಗೆ ಪ್ರಥಮ ಸ್ಥಾನವನ್ನುಗಳಿಸಿದ್ದಾರೆ. ಎಲ್ಲ ಪ್ರೌಢಶಾಲೆಯ ಮುಖ್ಯ ಶಿಕ್ಷಕರು ಮತ್ತು ಸಹಶಿಕ್ಷಕರು ಪರಿಶ್ರಮವಹಿಸಿ ಕಾಳಜಿಯಿಂದ ಕೆಲಸ ಮಾಡಿದ ಪರಿಣಾಮವಾಗಿ ತಾಲ್ಲೂಕಿಗೆ ಉತ್ತಮ ಫಲಿತಾಂಶ ಬಂದಿದೆ.

ಉತ್ತೀರ್ಣರಾಗಿರುವ ವಿದ್ಯಾರ್ಥಿಗಳಿಗೆ ಅಭಿನಂದನೆಗಳು ಹಾಗೂ ಅನುತ್ತೀರ್ಣಗೊಂಡ ವಿದ್ಯಾರ್ಥಿಗಳು ಕುಗ್ಗದೆ ಧೈರ್ಯವಾಗಿ ಮತ್ತೆ ಪರೀಕ್ಷೆಯನ್ನು ಬರೆದು ಜೀವನವನ್ನು ರೂಪಿಸಿಕೊಳ್ಳಬೇಕು ಎಂದು ಹೇಳಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು