News Karnataka Kannada
Monday, April 29 2024
ಮೈಸೂರು

ಬಂಡೀಪುರ ಕಾಡಂಚಿನಲ್ಲಿ ನಿಲ್ಲದ ಹುಲಿ ಉಪಟಳ

A tiger menace in Bandipur forest has not stopped
Photo Credit : News Kannada

ಸರಗೂರು: ಬಂಡೀಪುರ ಕಾಡಂಚಿನ ಪ್ರದೇಶದ ವ್ಯಾಪ್ತಿಯ ಗ್ರಾಮಗಳಲ್ಲಿ ಹುಲಿ ಉಪಟಳ ಜೋರಾಗಿದ್ದು, ಹುಲಿ ಸೆರೆಗೆ  ಒತ್ತಾಯಿಸಿದ್ದರೂ ಅರಣ್ಯ ಇಲಾಖೆ ಅಧಿಕಾರಿಗಳು ಮೌನವಹಿಸಿರುವುದು ಅನುಮಾನಕ್ಕೆ ಎಡೆ ಮಾಡಿಕೊಟ್ಟಿದೆ ಎಂದು  ಆರೋಪಿಸಿರುವ ಗ್ರಾಮಸ್ಥರು ಹುಲಿ ಸೆರೆಗೆ ಕಾರ್ಯಾಚರಣೆ ನಡೆಸದಿದ್ದರೆ ಅರಣ್ಯ ಇಲಾಖೆಗೆ ತಕ್ಕ ಪಾಠ ಕಲಿಸಬೇಕಾಗುತ್ತದೆ ಎಂಬ ಎಚ್ಚರಿಕೆಯನ್ನೂ ನೀಡಿದ್ದಾರೆ.

ತಾಲೂಕಿನ ಕಾನಕಾನಳ್ಳಿ ಗ್ರಾಮದ ಜಮೀನಿನಲ್ಲಿ ಮೇಯುತ್ತಿದ್ದ ಚಂದ್ರೇಗೌಡ ಎಂಬುವರಿಗೆ ಸೇರಿದ ಹಸುವೊಂದನ್ನು ಹುಲಿ  ದಾಳಿ ನಡೆಸಿ, ಕೊಂದು ತಿಂದಿದೆ. ಇದರಿಂದಾಗಿ ಸುಮಾರು 35 ಸಾವಿರ ರೂ. ನಷ್ಟ ಉಂಟಾಗಿದೆ ಎಂದು ಅಂದಾಜಿಸಲಾಗಿದೆ. ಸ್ಥಳಕ್ಕೆ ಆರ್‌ಎಫ್‌ಒ ಹನುಮಂತ, ಸಿಬ್ಬಂದಿಗಳು ಭೇಟಿ ನೀಡಿ, ಸ್ಥಳ ಪರಿಶೀಲನೆ ನಡೆಸಿದ್ದಾರೆ.

ಜಯಲಕ್ಷ್ಮಿಪುರ, ಶಿವಪುರ ಗ್ರಾಮದಲ್ಲಿಯೂ ತಿಂಗಳಿನಲ್ಲಿ ಎರಡು ಹಸುಗಳನ್ನು ಹುಲಿ ಕೊಂದು ತಿಂದಿರುವುದು ಬೆಳಕಿಗೆ ಬಂದಿದೆ. ಇದರಿಂದಾಗಿ ಕಾನಕಾನಳ್ಳಿ ಅಕ್ಕ, ಪಕ್ಕದ ಗ್ರಾಮಸ್ಥರು ತುಂಬಾ ಭಯ ಬೀತರಾಗಿದ್ದಾರೆ, ರೈತರು  ತಮ್ಮ ತಮ್ಮ ಜಮೀನುಗಳಲ್ಲಿ ಕೆಲಸ ಮಾಡಲು ಹಿಂದೇಟು ಹಾಕುತ್ತಿದ್ದಾರೆ. ಹೀಗಾಗಿ ಜೀವನ ನಡೆಸುವುದೇ ತುಂಬಾ ಕಷ್ಟವಾಗಿದೆ ಎಂದು ಗ್ರಾಮಸ್ಥರು ದೂರಿದ್ದಾರೆ.

ಈ ಸಂಬಂಧ ಹಲವು ಬಾರಿ ಅರಣ್ಯ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಮುಂದಾದರೂ ಇಲಾಖೆ ಎಚ್ಚೆತ್ತುಕೊಂಡು ಜನ, ಜಾನುವಾರುಗಳ ರಕ್ಷಣೆಗೆ ಮುಂದಾಗಬೇಕು ತಪ್ಪಿದ್ದಲ್ಲಿ ಅರಣ್ಯ ಇಲಾಖೆ ಕಚೇರಿ ಮುಂದೆ ಉಗ್ರವಾಗಿ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ರೈತರು ಎಚ್ಚರಿಕೆ ನೀಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು