Categories: ಮೈಸೂರು

ಚುನಾವಣಾ ಪ್ರಕ್ರಿಯೆಯಲ್ಲಿ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ – ಡಾ.ಕೆ ವಿ ರಾಜೇಂದ್ರ

ನಂಜನಗೂಡು: ಚುನಾವಣಾ ಪ್ರಕ್ರಿಯೆಯಲ್ಲಿ ಸೆಕ್ಟರ್ ಆಫೀಸರ್ ಗಳ ಕೆಲಸ ಪ್ರಮುಖವಾಗಿದ್ದು ಅವರ ಕರ್ತವ್ಯ ಮತ್ತು ಜವಾಬ್ದಾರಿಯನ್ನು ಅರಿತು ವ್ಯವಸ್ಥಿತವಾಗಿ ಕಾರ್ಯ ನಿರ್ವಹಿಸಬೇಕು ಎಂದು ಜಿಲ್ಲಾ ಚುನಾವಣಾ ಅಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳಾದ ಡಾ. ಕೆ ವಿ ರಾಜೇಂದ್ರ ಅವರು ತಿಳಿಸಿದರು.

ವಿಧಾನಸಭೆ ಸಾರ್ವತ್ರಿಕ ಚುನಾವಣೆ-2023 ರ ಸಂಬoಧ ಮಾದರಿ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ನಂಜನಗೂಡು ಕ್ಷೇತ್ರ ಮತ್ತು ವರುಣಾ ಕ್ಷೇತ್ರಗಳ ಫ್ಲೈಯಿಂಗ್ ಸ್ಕ್ವಾಡ್ ಹಾಗೂ ಸ್ಟಾಟಿಸ್ಟಿಕ್ ಸರ್ವೇಲೆನ್ಸ್ ತಂಡದ ಸದಸ್ಯರುಗಳು ನಿರ್ವಹಿಸಬೇಕಾದ ಕರ್ತವ್ಯಗಳು ಮತ್ತು ಜವಾಬ್ದಾರಿಗಳ ಕುರಿತು ಮಾದರಿ ನೀತಿ ಸಂಹಿತೆ ಸಮಿತಿಯ ವತಿಯಿಂದ ನಂಜನಗೂಡಿನ ರಿಟರ್ನಿಂಗ್ ಆಫೀಸರ್ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ತರಬೇತಿಯನ್ನು ಉದ್ಘಾಟಿಸಿ ಮಾತನಾಡಿದರು.

ಸೆಕ್ಟರ್ ಅಧಿಕಾರಿಗಳು ಬೂತ್ ಲೆವೆಲ್ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದ್ದು ಏನಾದರೂ ಸಮಸ್ಯೆಗಳು ಕಂಡು ಬಂದಲ್ಲಿ ಪರಿಹರಿಸಬೇಕು. ಮತದಾರರ ಪಟ್ಟಿಯಲ್ಲಿ ಹೆಸರು ಬಿಟ್ಟು ಹೋಗಿದ್ದರೆ ಮತ್ತು ಮತದಾರರ ಪಟ್ಟಿಯಲ್ಲಿ ಹೊಸದಾಗಿ ಹೆಸರು ಸೇರಿಸಲು ಏಪ್ರಿಲ್ 11ರವರೆಗೆ ಅವಕಾಶವಿದ್ದು, ತಡ ಮಾಡದೆ ಬಂದ ಅರ್ಜಿಗಳನ್ನು ಸ್ವೀಕರಿಸಿ ಈ ಕೆಲಸಗಳನ್ನು ಪೂರ್ಣಗೊಳಿಸಬೇಕು ಎಂದು ತಿಳಿಸಿದರು.

ಮತದಾರರ ಪಟ್ಟಿಯಿಂದ ಹೆಸರುಗಳು ಕೈ ಬಿಟ್ಟು ಹೋಗದಂತೆ ಮತ್ತು ಮರಣ ಹೊಂದಿದವರ ಪಟ್ಟಿಯ ಬಗ್ಗೆ ಗಮನಹರಿಸಬೇಕು. 80 ವರ್ಷ ಮೇಲ್ಪಟ್ಟಿದ್ದು ಮತಗಟ್ಟೆಗೆ ಬಂದು ಮತ ಹಾಕಲು ಸಾಧ್ಯವಾಗದವರಿಗೆ 12 ಡಿ ಮೂಲಕ ಮತದಾನ ಮಾಡಲು ಅವಕಾಶವಿದೆ. ಸಿ-ವಿಜಿಲ್ ಮೂಲಕ ದಾಖಲಾದ ದೂರುಗಳಿಗೆ ನೂರು ನಿಮಿಷಗಳಲ್ಲಿ ಪರಿಹಾರಕ್ಕೆ ನಮ್ಮ ಕೈಗೊಳ್ಳಲಾಗುವುದು. ವಲ್ನರಬಲ್ ಹಾಗೂ ಕ್ರಿಟಿಕಲ್ ಪೋಲಿಂಗ್ ಸ್ಟೇಷನ್ ಗಳನ್ನು ಗುರುತಿಸಿದ್ದು, ಅವುಗಳ ಸರಿಯಾದ ನಿರ್ವಹಣೆಗೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಗಮನಹರಿಸಬೇಕು ಎಂದು ತಿಳಿಸಿದರು.

ಮತಗಟ್ಟೆಯಲ್ಲಿ ಕುಡಿಯುವ ನೀರು, ಶೌಚಾಲಯ, ವಿದ್ಯುತ್,ರ್ಯಾಂಪ್ ಫ್ಯಾನ್ ಒಳಗೊಂಡಂತೆ ಕನಿಷ್ಠ ಸೌಲಭ್ಯಗಳಿರುವಂತೆ ನೋಡಿಕೊಳ್ಳಬೇಕು. ಇವಿಎಂ ಮತ್ತು ವಿವಿಪ್ಯಾಟ್ ಗಳ ನಿರ್ವಹಣೆಯಲ್ಲಿ ಅಥವಾ ಇವುಗಳ ಬಳಕೆಯಲ್ಲಿ ಸಮಸ್ಯೆಯಾದರೆ ರಿಪ್ಲೇಸ್ ಮಾಡಿಕೊಡಲಾಗುವುದು. ಎಫ್ ಎಸ್ ಟಿ ಮತ್ತು ಎಸ್ ಎಸ್ ಟಿ ತಂಡದವರಿಗೆ ವಾಹನ ಪೂರೈಕೆ ಮಾಡಲು ಆರ್ ಓ ಹಾಗೂ ಎಆರ್ ಓ ಗಳಿಗೆ ಸೂಚಿಸಿದರು.

ತರಬೇತಿಯಲ್ಲಿ ಜಿಲ್ಲಾ ಮಾದರಿ ನೀತಿ ಸಂಹಿತೆ ನೋಡಲ್ ಅಧಿಕಾರಿ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಕೆ.ಎಂ ಗಾಯತ್ರಿ, ಪ್ರಾಚ್ಯ ವಸ್ತು ಸಂಗ್ರಹಾಲಯದ ಆಯುಕ್ತರಾದ ಶ್ರೀ ದೇವರಾಜ್ ಅವರನ್ನು ಒಳಗೊಂಡಂತೆ ಇತರರು ಉಪಸ್ಥಿತರಿದ್ದರು.

Sneha Gowda

Recent Posts

ರಿಚರ್ಡ್‌ ಹ್ಯಾನ್ಸೆನ್‌ಗೆ ಸೆಲ್ಕೋದ ಪ್ರತಿಷ್ಠಿತ ʼಸೂರ್ಯಮಿತ್ರʼ ಪ್ರಶಸ್ತಿ

ಅಭಿವೃದ್ಧಿಶೀಲ ರಾಷ್ಟ್ರಗಳ ಗ್ರಾಮೀಣ ಪ್ರದೇಶಗಳಲ್ಲಿ ಸೌರವಿದ್ಯುತ್ ಸೌಲಭ್ಯವನ್ನು ಹೆಚ್ಚಿಸಲು, ಆಧುನಿಕ ಫೋಟೋ ವೋಲ್ಟಾಯಿಕ್‌ (ಪಿವಿ) ತಂತ್ರಜ್ಞಾನವನ್ನು ಮೈಕ್ರೋ ಫೈನಾನ್ಸ್ ಸಂ‍ಸ್ಥೆಗಳ…

6 hours ago

ಜಿಯೋ ಬಂಪರ್‌ ಆಫರ್‌ : 15 ಒಟಿಟಿ ಆ್ಯಪ್ಲಿಕೇಷನ್‌ ಜೊತೆ ಅನ್‌ಲಿಮಿಟೆಡ್ ಡೇಟಾ ಪ್ಲಾನ್

ಜಿಯೋ ಇದೀಗ ಮತ್ತೊಂದು ಹೊಚ್ಚ ಹೊಸ ಪ್ಲಾನ್ ಘೋಷಿಸಿದೆ. ನೆಟ್‌ಫ್ಲಿಕ್ಸ್‌ನ ಬೇಸಿಕ್ ಪ್ಲಾನ್, ಅಮೆಜಾನ್ ಪ್ರೈಮ್ ಸೇರಿದಂತೆ 15 ಒಟಿಟಿ…

7 hours ago

ಕಾರಿನಲ್ಲಿ ಆಕಸ್ಮಿಕ ಬೆಂಕಿ : ವ್ಯಕ್ತಿ ಸಜೀವ ದಹನ

ಕಾರಿಗೆ ಆಕಸ್ಮಿಕ ಬೆಂಕಿ ತಗುಲಿ, ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನವಾದ ಘಟನೆ ಬಾಗಲಕೋಟೆ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ನಡೆದಿದೆ.ಕಾರಿನಲ್ಲಿದ್ದ ಸಂಗನಗೌಡ…

7 hours ago

ವಿಧಾನಪರಿಷತ್ ಚುನಾವಣೆ : ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ಬಿಜೆಪಿ

ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. 6 ಕ್ಷೇತ್ರಗಳ…

7 hours ago

ಹಾಡಹಗಲೇ ಚಾಕುವಿನಿಂದ ಇರಿದು ಯುವಕನ ಭೀಕರ ಹತ್ಯೆ

ಚಾಕುವಿನಿಂದ ಇರಿದು ಹಾಡಹಗಲೇ ಯುವಕನ ಭೀಕರ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ‌ಮಣ್ಣೂರು ಗ್ರಾಮದಲ್ಲಿ ನಡೆದಿದೆ. ಪ್ರೀತಿ…

7 hours ago

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಬಿತ್ತು ಧರ್ಮದೇಟು

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಸಾರ್ವಜನಿಕರೇ ಧರ್ಮದೇಟು ನೀಡಿದ ಘಟನೆ ಉಡುಪಿ ಸಿಟಿ ಬಸ್‌ ನಿಲ್ದಾಣದಲ್ಲಿ ಇಂದು ಸಂಭವಿಸಿದೆ

8 hours ago