Categories: ಮೈಸೂರು

ಚುನಾವಣಾ ಹಿನ್ನೆಲೆಯಲ್ಲಿ ಮಾತ್ರ ಹೊಂದಾಣಿಕೆ: ಜಿಟಿಡಿ

ಮೈಸೂರು: ಜನತಾ ಪಕ್ಷ ಕಟ್ಟಿದ ಜಯಪ್ರಕಾಶ್ ನಾರಾಯಣ್ ಅವರ ಪಕ್ಷ ಉಳಿಸಿ ಬೆಳೆಸಿದ  ಎಚ್.ಡಿ ದೇವೇಗೌಡರ ಹಾದಿಯಲ್ಲಿ ನಾವು ಸಾಗುತ್ತಿದ್ದು, ಲೋಕಸಭಾ ಚುನಾವಣೆ ಹಿತದೃಷ್ಟಿಯಿಂದ ಮಾತ್ರ ಬಿಜೆಪಿ ಜತೆಗೆ ಜೆಡಿಎಸ್‌ ಹೊಂದಾಣಿಕೆ ಮಾಡಿಕೊಂಡಿದ್ದು, ಅದನ್ನು ಹೊರತುಪಡಿಸಿ ನಮ್ಮ‌ ತತ್ವ ಸಿದ್ದಾಂತವೇ ಬೇರೆ, ಬಿಜೆಪಿ ತತ್ವ ಸಿದ್ದಾಂತವೇ ಬೇರೆ ಎಂದು ಜೆಡಿಎಸ್‌ ಮುಖಂಡ ಜಿ.ಟಿ.ದೇವೇಗೌಡ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈತ್ರಿ ಮಾಡಿಕೊಂಡಿರುವ ಮಾತ್ರಕ್ಕೆ ನಮ್ಮ ತತ್ವ ಸಿದ್ಧಾಂತ ಒಂದಿಂಚು ಕೂಡ ಬದಲಾಗಲ್ಲ. ಬಿಜೆಪಿಯವರದು ಅವರಿಗೆ ನಮ್ಮದು ನಮಗೆ.

ಕೇವಲ ಚುನಾವಣಾ ದೃಷ್ಟಿಯಿಂದ ಮಾತ್ರ ನಾವು ಒಂದಾಗಿದ್ದೇವೆ, ಎಚ್ ಡಿಕೆ ಕೇಸರಿ ಶಾಲು ಹಾಕಿದ ಬಗ್ಗೆ ಜೆಡಿಎಸ್‌ ವರಿಷ್ಠ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅಸಮಧಾನ ವ್ಯಕ್ತಪಡಿಸಿ ಬಹಿರಂಗವಾಗಿಯೇ ಆಕ್ಷೇಪಿಸಿದ ಹಿನ್ನೆಲೆಯಲ್ಲಿ ಸ್ಪಷ್ಟನೆ ನೀಡಿದ ಅವರು, ಕುಮಾರಸ್ವಾಮಿ ಧರಿಸಿದ್ದ ಶಾಲು ಬಿಜೆಪಿಯವರದ್ದಲ್ಲ, ಆಂಜನೇಯನ ಭಕ್ತ ನೀಡಿದ ಶಾಲು. ಆದರೆ, ಕಾಂಗ್ರೆಸ್ ನವರು ಅದನ್ನೇ ದೊಡ್ಡದು ಮಾಡಿದ್ದಾರೆ ಅಷ್ಟೆ ಎಂದು ಹೇಳಿದರು.

Ashika S

Recent Posts

ಇಂದು ದಾದಿಯರ ದಿನ; ದಣಿವರಿಯಿಲ್ಲದೆ ಕೆಲಸ ಮಾಡುವ ದಾದಿಯರಿಗೊಂದು ಸಲಾಂ

ಪ್ರಪಂಚದಾದ್ಯಂತ ಮೇ 12ರಂದು ಅಂತರಾಷ್ಟ್ರೀಯ ದಾದಿಯರ ದಿನ ವನ್ನಾಗಿ ಆಚರಿಸಲಾಗುತ್ತದೆ. ಫ್ಲಾರೆನ್ಸ್ ನೈಟಿಂಗೇಲ್ ಅವರ ಜನ್ಮದಿನದ ಗೌರವಾರ್ಥವಾಗಿ ವಿಶ್ವಾದ್ಯಂತ ಅಂತರರಾಷ್ಟ್ರೀಯ…

5 mins ago

ಜೈಲಿನಲ್ಲೇ ಹೃದಯಾಘಾತವಾಗಿ ಕೈದಿ ಮೃತ್ಯು

ವಿಚಾರಣಾಧೀನ ಕೈದಿಯೋರ್ವ ಜೈಲಿನಲ್ಲೇ ಹೃದಯಾಘಾತ ಸಂಭವಿಸಿ ಮೃತಪಟ್ಟ ಘಟನೆ ಉಡುಪಿ ಜಿಲ್ಲೆಯ ಹಿರಿಯಡಕ ಸಬ್ ಜೈಲಿನಲ್ಲಿ ನಡೆದಿದೆ.

10 mins ago

ಎಕ್ಸಾಂನಲ್ಲಿ ಫೇಲ್‌ : ಕೆರೆಗೆ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ

ಪರೀಕ್ಷೆಯಲ್ಲಿ ಫೇಲ್‌ ಆಗಿದ್ದೇನೆ ಎಂದು ಇಂಜಿನಿಯರಿಂಗ್ ವಿದ್ಯಾರ್ಥಿಯೋರ್ವ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. . ಫೇಲ್ ಆದ ವಿಚಾರ ಪೋಷಕರಿಗೆ…

34 mins ago

29ನೇ ಬಾರಿ ಮೌಂಟ್‌ ಎವರೆಸ್ಟ್‌ ಏರಿದ ಕಮಿ ರೀಟಾ ಶೆರ್ಪಾ

ಎವರೆಸ್ಟ್ ಮ್ಯಾನ್ ಎಂದೇ ಹೆಸರಾಗಿರುವ ನೇಪಾಳದ ಕಮಿ ರೀಟಾ ಶೆರ್ಪಾ 29ನೇ ಬಾರಿ ವಿಶ್ವದ ಅತಿ ಎತ್ತರದ ಪರ್ವತ ಮೌಂಟ್‌…

44 mins ago

ಭೀಕರ ಅಪಘಾತ : ಇಬ್ಬರು ಶಿಕ್ಷಕರು ಸ್ಥಳದಲ್ಲೇ ದುರ್ಮರಣ

ಮದುವೆಗೆ ಹೋಗಿ ತಡರಾತ್ರಿ ಮರಳಿ ಬರುತ್ತಿದ್ದ ಸಂದರ್ಭ ಕಾರು ಪಲ್ಟಿಯಾಗಿ ಇಬ್ಬರು ಶಿಕ್ಷಕರು ಸ್ಥಳದಲ್ಲೇ ಮೃತಪಟ್ಟ ಘಟನೆ ಪಾವಗಡ -ತುಮಕೂರು…

56 mins ago

ಕಡಬ: ಸಿಡಿಲು ಬಡಿದು ಮರಳುಗಾರಿಕೆ ಮಾಡುತ್ತಿದ್ದ ಕಾರ್ಮಿಕ ಸಾವು

ದಕ್ಷಿಣಕನ್ನಡ ಜಿಲ್ಲೆಯ ಕೆಲವು ಪ್ರದೇಶಗಳಲ್ಲಿ ಮಳೆ ಆರಂಭವಾಗಿದ್ದು, ಬಿಸಿಲಿನಿಂದ ಕಂಗೆಟ್ಟಿದ್ದ ದಕ್ಷಿಣಕನ್ನಡ ಜಿಲ್ಲೆಗೆ ವರುಣ ತಂಪೇರಗಿದ್ದಾನೆ. ಈ ನಡುವೆ ಸಿಡಿಲು…

1 hour ago