ನಂಜನಗೂಡು: ಬೆಂಗಳೂರಿನ ಜೈನ್ ಯೂನಿವರ್ಸಿಟಿಯಲ್ಲಿ ಅಂಬೇಡ್ಕರ್ ಅವರಿಗೆ ಅಪಮಾನ ಮಾಡಿರುವುದನ್ನು ಖಂಡಿಸಿ ರಾಜ್ಯ ರೈತ ಸಂಘ ಹಾಗೂ ದಲಿತ ಸಂಘರ್ಷ ಸಮಿತಿ ವತಿಯಿಂದ ಪ್ರತಿಭಟನೆ.
ಪಟ್ಟಣದ ತಾಲೂಕು ಕಚೇರಿ ಮುಂಭಾಗ ಜಮಾಹಿಸಿದ ಪ್ರತಿಭಟನಾಕಾರರು . ಜೈನ್ ವಿಶ್ವವಿದ್ಯಾಲಯ ಹಾಗೂ ಅಂಬೇಡ್ಕರ್ ವಿರೋಧಿಗಳ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು.
ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಕಂದಾಯ ಇಲಾಖೆ ಅಧಿಕಾರಿಗಳಿಗೆ ಘಟನೆಯನ್ನು ಖಂಡಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಪ್ರತಿಭಟನಾಕಾರರು ರಾಜ್ಯಪಾಲರಿಗೆ ಮನವಿ ಪತ್ರ ಸಲ್ಲಿಸಿದರು.
ಬಳಿಕ ರೈತ ಸಂಘದ ಅಧ್ಯಕ್ಷ ವಿದ್ಯಾಸಾಗರ್ ಹಾಗೂ ದಸಂಸ ತಾಲೂಕು ಸಂಚಾಲಕ ಗಟ್ಟವಾಡಿ ಮಹೇಶ್ ಮಾತನಾಡಿ ಪಟನೆಯನ್ನು ಖಂಡಿಸಿ ತಪ್ಪಿತಸ್ಥ ವಿರುದ್ಧ ಕ್ರಮ ಜರುಗಿಸುವಂತೆ ಒತ್ತಾಯಿಸಿದರು ಇಲ್ಲವಾದಲ್ಲಿ ರಾಜ್ಯಾದ್ಯಂತ ಇನ್ನು ಹೆಚ್ಚಿನ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ವಿವರಿಸಿದರು .
ಪ್ರತಿಭಟನೆಯಲ್ಲಿ ರೈತ ಮುಖಂಡರಾದ ಹಿಮ್ಮಾವು ರಘು, ಶಂಕರನಾಯಕ, ವೇಣುಗೋಪಾಲ್, ಕುಮಾರ್ ಬಸಪ್ಪ, ಮಹದೇವಪ್ಪ, ಹೂವಯ್ಯ, ಮರಿಸ್ವಾಮಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು