News Karnataka Kannada
Monday, April 22 2024
Cricket
ಮೈಸೂರು

ಅಂಬೇಡ್ಕರ್ ನಾಮಫಲಕ ವಿಚಾರದಲ್ಲಿ ಘರ್ಷಣೆ ಪ್ರಕರಣ: ಹಲ್ಲರೆ ಗ್ರಾಮಕ್ಕೆ ಶಾಸಕ ಅನಿಲ್ ಚಿಕ್ಕಮಾದು ಭೇಟಿ

ತಾಲ್ಲೂಕಿನ ಹಲ್ಲರೆ ಗ್ರಾಮಕ್ಕೆ ಶಾಸಕ ಅನಿಲ್ ಚಿಕ್ಕಮಾದು ಭೇಟಿ ನೀಡಿದ್ದಾರೆ. ಅಂಬೇಡ್ಕರ್ ನಾಮಫಲಕ ಅಳವಡಿಸುವ ವಿಚಾರದಲ್ಲಿ ಎರಡು ಕೋಮುಗಳ ನಡುವೆ ಘರ್ಷಣೆಯಾಗಿತ್ತು. ಈ ಹಿನ್ನೆಲೆಯಲ್ಲಿ ಗ್ರಾಮಕ್ಕೆ ಭೇಟಿ ನೀಡಿ, ಮಾಹಿತಿ ಸಂಗ್ರಹಿಸಿದ್ದಾರೆ.
Photo Credit : News Kannada

ನಂಜನಗೂಡು: ತಾಲ್ಲೂಕಿನ ಹಲ್ಲರೆ ಗ್ರಾಮಕ್ಕೆ ಶಾಸಕ ಅನಿಲ್ ಚಿಕ್ಕಮಾದು ಭೇಟಿ ನೀಡಿದ್ದಾರೆ. ಅಂಬೇಡ್ಕರ್ ನಾಮಫಲಕ ಅಳವಡಿಸುವ ವಿಚಾರದಲ್ಲಿ ಎರಡು ಕೋಮುಗಳ ನಡುವೆ ಘರ್ಷಣೆಯಾಗಿತ್ತು. ಈ ಹಿನ್ನೆಲೆಯಲ್ಲಿ ಗ್ರಾಮಕ್ಕೆ ಭೇಟಿ ನೀಡಿ, ಮಾಹಿತಿ ಸಂಗ್ರಹಿಸಿದ್ದಾರೆ.

ಬಳಿಕ ಮಾತನಾಡಿದ ಅವರು, ಈ ಬಗ್ಗೆ ಮುಖ್ಯಮಂತ್ರಿಗಳ ಜೊತೆ ಮಾತನಾಡಿದ್ದೇನೆ. ಪೊಲೀಸರಿಂದ ಮಾಹಿತಿ ಪಡೆದುಕೊಂಡಿದ್ದೇನೆ. ಮುಂದೆ ಇಂತಹ ಘಟನೆಗಳು ಆಗದಂತೆ ಕ್ರಮವಹಿಸುವಂತೆ ಪೊಲೀಸರಿಗೆ ಸೂಚನೆ ನೀಡಿದ್ದೇನೆ. ಶಾಂತಿ ಸಭೆ ನಡೆಸಲು ಈಗಾಗಲೇ ಸಂಬಂಧಪಟ್ಟ ಅಧಿಕಾರಿಗಳ ಜೊತೆ ಚರ್ಚೆ ನಡೆಸಿದ್ದೇವೆ. ಎರಡು ಸಮುದಾಯದವರು ಸೌಹಾರ್ದತೆಯಿಂದ ಬಾಳ್ವೆ ಮಾಡಬೇಕು. ಆದಷ್ಟು ಬೇಗ ಇದನ್ನು ಬಗೆಹರಿಸುವ ಕೆಲಸ ಮಾಡುತ್ತೇವೆ. ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಶಾಂತಿ ಸಭೆಯನ್ನು ನಡೆಸಿ ಇದಕ್ಕೆ ತೆರೆ ಎಳೆಯಲಾಗುವುದು ಎಂದರು.

ಈ ಸಂದರ್ಭದಲ್ಲಿ ಶಾಸಕ ದರ್ಶನ್ ಧ್ರುವನಾರಾಯಣ್, ಮಾಜಿ ಶಾಸಕ ಕಳಲೆ ಕೇಶವಮೂರ್ತಿ ಸೇರಿದಂತೆ ಹಲವರು ಭಾಗವಹಿಸಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು