ನಂಜನಗೂಡು: ತಾಲ್ಲೂಕಿನ ಹಲ್ಲರೆ ಗ್ರಾಮದಲ್ಲಿ ಅಂಬೇಡ್ಕರ್ ನಾಮಫಲಕ ವಿಚಾರದಲ್ಲಿ ಎರಡು ಕೋಮುಗಳ ನಡುವೆ ಘರ್ಷಣೆಯಾಗಿ ಗ್ರಾಮದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ.
ಮನೆಗಳಿಗೆ ಕಲ್ಲು ತೂರಾಟ ನಡೆಸಿ, ಮನೆ ಮುಂದೆ ನಿಲ್ಲಿಸಿದ್ದ ವಾಹನಗಳನ್ನು ಜಖಂಗೊಂಡಿದೆ. ಕೆಲ ಕಿಡಿಗೇಡಿಗಳಿಂದ ಹಲ್ಲರೆ ಗ್ರಾಮದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಗ್ರಾಮದ ಬೀದಿಯಲ್ಲೂ ಕಲ್ಲು ತೂರಾಟ ಮಾಡಲಾಗಿದ್ದು, ಹಲವರಿಗೆ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.
ನಂಜನಗೂಡು ಗ್ರಾಮಾಂತರ ಪೊಲೀಸರು ದೌಡಾಯಿಸಿದ್ದು, ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.
ಈ ಸಂಬಂಧ ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.