ಮೈಸೂರು

ಟಿಕೆಟ್ ಘೋಷಣೆಗೆ ಮುನ್ನ ವಿಚಲಿತರಾಗದಂತೆ ಪ್ರತಾಪ್ ಸಿಂಹಗೆ ಮನವಿ

ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಟಿಕೆಟ್ ಇನ್ನೂ ಘೋಷಣೆಯಾಗಿಲ್ಲ. ಟಿಕೆಟ್ ಘೋಷಣೆಗೂ ಮುನ್ನವೇ ಸಂಸದ ಪ್ರತಾಪಸಿಂಹ ಭಾವನಾತ್ಮಕ ಮತ್ತು ವಿಚಲಿತರಾಗಿ ಮಾತನಾಡುವುದು ಬೇಡ ಎಂದು ಶಾಸಕ ಟಿ.ಎಸ್.ಶ್ರೀವತ್ಸ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಲೂ ಟಿಕೆಟ್ ಸಿಗಬಹುದು. ಹಾಗಾಗಿ ಆತಂಕಕ್ಕೆ ಒಳಗಾಗಿ ಮಾತಾಡುವುದನ್ನು ನಿಲ್ಲಿಸುವಂತೆ ಮನವಿ ಮಾಡುತ್ತೇನೆ. ಪ್ರತಾಪಸಿಂಹ ಅವರು ಕೇಂದ್ರದ ನಾಯಕರೊಂದಿಗೆ ಮಾತನಾಡಲು ಬೆಂಗಳೂರಿಗೆ ಹೋಗಿದ್ದಾರೆ. ಇನ್ನೂ ಚರ್ಚೆಗಳು ನಡೆಯುತ್ತಿವೆ ಭಾವನಾತ್ಮಕವಾಗಿ ಮಾತನಾಡಿದರೆ ಪಕ್ಷ ಮುಜುಗರ ಅನುಭವಿಸಬೇಕಾಗುತ್ತದೆ ಎಂದು ನುಡಿದರು.

ಬಿಜೆಪಿ ನಗರಾಧ್ಯಕ್ಷ ಎಲ್.ನಾಗೇಂದ್ರ ಮಾತನಾಡಿ, ಮೈಸೂರು ಲೋಕಸಭಾ ಟಿಕೆಟ್ ವಿಚಾರವಾಗಿ ಎರಡು ದಿನಗಳಿಂದ ಗೊಂದಲ ಶುರುವಾಗಿದೆ. ಪ್ರತಾಪಸಿಂಹ ಅವರ ಬದಲು ಬೇರೆ ಹೆಸರು ಮುನ್ನಲೆಗೆ ಬಂದಿದೆ. ರಾಜ್ಯದ ಯಾವ ನಾಯಕರಿಗೂ ಟಿಕೆಟ್ ಘೋಷಿಸುವ ಅಧಿಕಾರ ಇಲ್ಲ ಎಂದು ಸ್ಪಷ್ಟಪಡಿಸಿದರು.

10 ವರ್ಷಗಳ ಹಿಂದೆ ಪ್ರತಾಪಸಿಂಹ ಅವರು ಮೈಸೂರಿಗೆ ಬಂದಾಗ ಪರಿಚಯವೇ ಇರಲಿಲ್ಲ. ಅವರನ್ನು ಗೆಲ್ಲಿಸಿದೆವು. ಪ್ರತಾಪಸಿಂಹ ಒಳ್ಳೆಯ ಕೆಲಸ ಮಾಡಿದ್ದಾರೆ. ಆದರೆ, ಪಕ್ಷದ ತೀರ್ಮಾನ ಒಪ್ಪಬೇಕಾಗುತ್ತದೆ. ಯಾರೇ ಅಭ್ಯರ್ಥಿಯಾದರೂ ಕೆಲಸ ಮಾಡಬೇಕಾಗುತ್ತದೆ. ಮಹಾರಾಜರು ಮೈಸೂರು ಅಭಿವೃದ್ಧಿಗೆ ತಮ್ಮ ಸರ್ವಸ್ವ ಅರ್ಪಿಸಿದ್ದಾರೆ. ಈಗ ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಬಗ್ಗೆ ಹಗುರವಾಗಿ ಮಾತನಾಡಬಾರದು ಎಂದು ತಿಳಿಸಿದರು.

ಪಕ್ಷದೊಳಗೆ ಯಾವುದೇ ಒಡಕಿಲ್ಲ. ಟಿಕೆಟ್ ಬದಲಿಸುವ ಪ್ರಯತ್ನವನ್ನೂ ಸ್ಥಳೀಯ ನಾಯಕರು ಮಾಡಿಲ್ಲ. ನಾಯಕರಾದ ಕೆ.ಎಸ್. ಈಶ್ವರಪ್ಪ ಅವರು ಅಭಿಪ್ರಾಯ ಸಂಗ್ರಹಿಸಿದ್ದರು. ಡಾ.ಮಂಜುನಾಥ್ ಮತ್ತು ಅಪ್ಪಚ್ಚು ರಂಜನ್ ಟಿಕೆಟ್‌ಗೆ ಆಪೇಕ್ಷೆ ಪಟ್ಟಿದ್ದರು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಫೇಸಬುಕ್ ಲೈವ್‌ನಲ್ಲಿ ನಡವಳಿಕೆಯಿಂದಲೇ ಎಲ್.ನಾಗೇಂದ್ರ ಚುನಾವಣೆಯಲ್ಲಿ ಪರಾಭವಗೊಂಡರೆಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ನನ್ನ ನಡವಳಿಕೆಯಿಂದ ಪಕ್ಷಕ್ಕೆ ಯಾವುದೇ ಮುಜುಗರವಾಗಿಲ್ಲ. ನನ್ನ ನಡವಳಿಕೆ ಸರಿ ಇದ್ದ ಕಾರಣಕ್ಕೆ ನಗರಾಧ್ಯಕ್ಷ ಸ್ಥಾನ ನೀಡಿದ್ದಾರೆ ಎಂದು ಪ್ರತ್ಯುತ್ತರ ನೀಡಿದರು.

ಮಾಜಿ ಶಾಸಕ ಎಸ್.ಎ.ರಾಮದಾಸ್ಟಿಕೆಟ್ ಹಂಚಿಕೆ ವಿಚಾರವಾಗಿ ಪಾರ್ಲಿಮೆಂಟರಿ ಸಭೆ ನಡೆದಿಲ್ಲ. ಆದರೂ ಅನವಶ್ಯಕ ಚರ್ಚೆ ನಡೆಯುತ್ತಿದೆ. ನಾಲ್ಕು ಬಾರಿ ಶಾಸಕನಾಗಿದ್ದ ನನಗೆ ಹಿಂದಿನ ಚುನಾವಣೆಯಲ್ಲಿ ಟಿಕೆಟ್ ಕೊಡಲಿಲ್ಲ. ಸಾಮಾನ್ಯ ಕಾರ್ಯಕರ್ತನಿಗೆ ಟಿಕೆಟ್ ಕೊಡುವುದಾಗಿ ನಾಯಕರು ಹೇಳಿದಾಗ ಒಪ್ಪಿದೆ. ಕಾರ್ಯಕರ್ತರ ಸಭೆಯಲ್ಲಿ ಪ್ರತಾಪಸಿಂಹ ಅವರು ನನಗೆ ಆಡಿದ ಮಾತುಗಳನ್ನು ನೆನಪಿಸಿಕೊಳ್ಳಬೇಕು. ಯಾರೇ ಅಭ್ಯರ್ಥಿಯಾದರೂ ಗೆಲ್ಲಿಸುವುದು ನಮ್ಮ ಗುರಿ ಎಂದಿದ್ದಾರೆ.

ಬಿಜೆಪಿ ಗ್ರಾಮಾಂತರ ಅಧ್ಯಕ್ಷ ಎಲ್.ಆರ್. ಮಹದೇವಸ್ವಾಮಿ, ಮುಖಂಡರಾದ ಸಂದೇಶ್ ಸ್ವಾಮಿ, ಕೇಬಲ್ ಮಹೇಶ್, ಗಿರಿಧರ್ ಮುಂತಾದವರಿದ್ದರು.

Ashika S

Recent Posts

ಈಜಲು ಹೋಗಿ‌ದ್ದ ಮೂವರು ನೀರುಪಾಲು: 5 ಜನ ಪ್ರಾಣಾಪಾಯದಿಂದ ಪಾರು

ಈಜಲು ಹೋಗಿ‌ದ್ದ ಮೂವರು ನೀರುಪಾಲಾಗಿರುವ ಘಟನೆ ರಾಮನಗರ ತಾಲೂಕಿನ ಅಚ್ಚಲು ಗ್ರಾಮದ ಬಳಿ ನಡೆದಿದೆ.

11 mins ago

“ಪಟ್ಲ ಸಂಭ್ರಮ” ಯಶಸ್ವಿಗೊಳಿಸಲು ಪಟ್ಲ ಸತೀಶ್ ಶೆಟ್ಟಿ ಕರೆ

ಮೇ 26 ರಂದು ಅಡ್ಯಾರ್ ಗಾರ್ಡನ್ ನಲ್ಲಿ ನಡೆಯುವ "ಪಟ್ಲ ಸಂಭ್ರಮ" ನಮ್ಮೆಲ್ಲರ ಮನೆಯ ಕಾರ್ಯಕ್ರಮ. ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಪಟ್ಲ…

20 mins ago

ಮಂಗಳೂರು: ಕರ್ತವ್ಯದಲ್ಲಿದ್ದ ವಾಹನದ ಬಗ್ಗೆ ಸುಳ್ಳು ಸಂದೇಶ ರವಾನಿಸಿದ ಸಾರ್ವಜನಿಕ

ಕಳೆದ ದಿನ (ಮೇ 16) ಸಂಜೆ ಮಂಗಳೂರು ನಗರದ ಕುಂಟಿಕಾನ ಬಳಿ ಕರ್ತವ್ಯದಲ್ಲಿದ್ದ ಕೆಎ-19-ಜಿ-1023 ನೊಂದಣೆ ಸಂಖ್ಯೆಯ ಹೆದ್ದಾರಿ ಗಸ್ತು…

26 mins ago

ಹೊಸ ರುಚಿ: ಅವಲಕ್ಕಿ ಹುಳಿ ಮಾಡುವುದು ಹೇಗೆ?

ಗಡಿಬಿಡಿಯ ಜೀವನದಲ್ಲಿ ಬೆಳಗ್ಗಿನ ಉಪಹಾರ ಮಾಡಿಕೊಂಡು ಆಫೀಸಿಗೆ ಹೋಗುವುದೇ ಸವಾಲ್. ಇಂತಹ  ಸಂದರ್ಭದಲ್ಲಿ ಅವಲಕ್ಕಿ ಇದ್ದರೆ ಅದರಿಂದ ಹುಳಿ ತಯಾರಿಸಿ…

33 mins ago

ಬಾವಿಗೆ ಬಿದ್ದ ಮಗುವನ್ನು ರಕ್ಷಿಸಿದ ಯುವಕನಿಗೆ ಮೆಚ್ಚುಗೆಯ ಸುರಿಮಳೆ

ಸರಪಾಡಿಯ ಹಂಚಿಕಟ್ಟೆಯಲ್ಲಿ ಬಾವಿಗೆ ಬಿದ್ದ ಮಗುವೊಂದನ್ನು ತನ್ನ ಪ್ರಾಣದ ಹಂಗನ್ನು ತೊರೆದು ತುಂಡಾಗುವ ಸ್ಥಿತಿಯಲ್ಲಿದ್ದ ಹಳೆಯ ಹಗ್ಗವನ್ನು ಬಳಸಿ ಮೇಲಕ್ಕೆತ್ತಿದ…

42 mins ago

ಶ್ರೀರಾಮ ಸೇನೆ ರಾಜ್ಯಾಧ್ಯಕ್ಷರ ಮೇಲೆ ಜಾತಿ ನಿಂದನೆ ಪ್ರಕರಣ ದಾಖಲು

ಜಿಲ್ಲೆಯ ಜೇವರ್ಗಿ ತಾಲೂಕಿನ ಆಂದೋಲಾ ಕರುಣೇಶ್ವರ ಮಠದ ಪೀಠಾಧಿಪತಿ, ಶ್ರೀರಾಮ ಸೇನೆಯ ಅಧ್ಯಕ್ಷ ಸಿದ್ದಲಿಂಗ ಶ್ರೀಗಳ ವಿರುದ್ಧ ಕಲಬುಗಿಯಲ್ಲಿ ಜಾತಿ…

47 mins ago