Categories: ಮೈಸೂರು

ಚಾಮುಂಡಿಬೆಟ್ಟದ ತಪ್ಪಲಿನಲ್ಲಿ ರಕ್ತದಾನದ ಅರಿವು

ಮೈಸೂರು: ಚಾಮುಂಡೇಶ್ವರಿ ಯುವ ಬಳಗದ ವತಿಯಿಂದ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಮುಂಜಾನೆ ವಾಯು ವಿಹಾರಿಗಳಿಗೆ ರಕ್ತದಾನದಿಂದ ಆಗುವ ಉಪಯೋಗಗಳ ಬಗ್ಗೆ ಕರಪತ್ರ ನೀಡಿ, ರಕ್ತದಾನ ಮಹಾದಾನ, ಒಂದು ಹನಿ ರಕ್ತ ಒಂದು ಅಮೂಲ್ಯ ಜೀವದ ಉಳಿಯುವಿಕೆಗಾಗಿ ನೆರವಾಗಲಿದೆ ಎಂಬ ಘೋಷಣಾ ಫಲಕಗಳನ್ನು ಹಿಡಿದು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಯಿತು.

ಈ ವೇಳೆ ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ ರವಿ ಅವರು,  ಸಾರ್ವಜನಿಕರು ಹಾಗೂ ಕಾಲೇಜು ವಿದ್ಯಾರ್ಥಿಗಳು ರಕ್ತದಾನದ ಮಹತ್ವ ಅರಿತು ಒಂದು ಜೀವ ಉಳಿಸುವ ಸದುದ್ದೇಶದಿಂದ ರಕ್ತದಾನ ಮಾಡಬೇಕು. ರಕ್ತವನ್ನು ಉತ್ಪತ್ತಿ ಮಾಡಲು ಸಾಧ್ಯವಿಲ್ಲ. ಆರೋಗ್ಯವಂತ ವ್ಯಕ್ತಿ ಮತ್ತೊಬ್ಬರಿಗೆ ರಕ್ತದಾನ ಮಾಡಿದರೆ ತುರ್ತು ಸಂದರ್ಭದಲ್ಲಿ ಜೀವಗಳನ್ನು ಉಳಿಸಲು ಸಾಧ್ಯವಾಗುತ್ತದೆ. ರಕ್ತದ ಅಗತ್ಯ ಮತ್ತು ಯಾರು ರಕ್ತದಾನ ಮಾಡಬಹುದು, ಎಷ್ಟು ದಿನಗಳಿಗೊಮ್ಮೆ ರಕ್ತದಾನ ಮಾಡಬಹುದು ಎಂದು ಹೇಳಿದರು.

ಜೀವಧಾರ ರಕ್ತನಿಧಿ ಕೇಂದ್ರದ ನಿರ್ದೇಶಕ ಗಿರೀಶ್ ಮಾತನಾಡಿ ಯುವತರುಣರೇ ತುಂಬಿರುವಂತಹ ಬಾರತೀಯ ಸಮಾಜದಲ್ಲಿ ಆರೋಗ್ಯವಂತ ಭಾರತ ನಿರ್ಮಾಣವಾಗಬೇಕಾದರೆ ರಕ್ತದಾನ ಮಾಡಬೇಕು, ನಮ್ಮ ಒಂದೊಂದು ಹನಿರಕ್ತವು  ಒಂದೊಂದು ಜೀವವನ್ನು ಬದುಕಿಸುತ್ತದೆ, ಇದರಿಂದ ಆರೋಗ್ಯವಂತ ಭಾರತ  ನಿರ್ಮಾಣವಾಗುತ್ತದೆ ಎಂದರು.

ಕರ್ನಾಟಕ ಚಲನಚಿತ್ರ ಮಂಡಳಿಯ  ಸದಸ್ಯ  ಎಂ ಡಿ ಪಾರ್ಥಸಾರಥಿ, ಚಾಮುಂಡೇಶ್ವರಿ ಯುವಬಳಗದ ಅಧ್ಯಕ್ಷ ಶ್ರೀನಿವಾಸ್,  ಉಪಾಧ್ಯಕ್ಷ ವಿನಯ್ ಕುಮಾರ್, ಕೆ ಆರ್ ಬ್ಯಾಂಕ್ ಉಪಾಧ್ಯಕ್ಷ ಬಸವರಾಜ್ ಬಸಪ್ಪ, ಅಜಯ್ ಶಾಸ್ತ್ರಿ, ವಿನಯ್ ಕಣಗಾಲ್, ಉದ್ಯಮಿ ಅಪೂರ್ವ ಸುರೇಶ್, ಪರಿಸರ ಸ್ನೇಹಿ ತಂಡದ ಅಧ್ಯಕ್ಷ ಲೋಹಿತ್ ಶ್ರೀಕಾಂತ್ ಕಶ್ಯಪ್, ಶಿವಕುಮಾರ್, ರಕ್ತನಿಧಿ ಕೇಂದ್ರದ ಪ್ರಭು ಹಾಗೂ ಇನ್ನಿತರರು ಇದ್ದರು.

Sneha Gowda

Recent Posts

ಬೈಕಿಗೆ ಡಿಕ್ಕಿ ಹೊಡೆದ ಕಾರು: ಓರ್ವ ಸಾವು

ಕಾರು ​​ ಚಾಲಕನೋರ್ವ ಕುಡಿದು ಅಡ್ಡಾದಿಡ್ಡಿ ಡ್ರೈವಿಂಗ್​ ಮಾಡಿ ಬೈಕ್​ಗೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸಾವನ್ನಪ್ಪಿದ ಘಟನೆ ನಡೆದಿದೆ.

6 mins ago

ಬ್ಯಾಂಕ್ ಗೆ ಜಮೆ ಮಾಡಲು ತಂದಿದ್ದ 1.37 ಲಕ್ಷ ರೂ‌ ಎಗರಿಸಿದ ಖದೀಮ

ಬ್ಯಾಂಕ್‌ ಖಾತೆಗೆ ಜಮಾ ಮಾಡಲು ಎಂದು ತಂದಿದ್ದ ಹಣವು ಕಳ್ಳತನಕ್ಕೆ ಒಳಗಾದ ಘಟನೆ ಬಸವಕಲ್ಯಾಣದಲ್ಲಿ ನಡೆದಿದೆ. ಬೈಕ್ ನ ಪೆಟ್ರೋಲ್…

24 mins ago

ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಅಪಘಾತ

ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪೂರ್ವ ಅಜೆರ್ಬೈಜಾನ್ ಪ್ರಾಂತ್ಯದಲ್ಲಿ‌ಭಾನುವಾರ ಮುಂಜಾನೆ ಅಪಘಾತಕ್ಕೀಡಾಗಿದೆ.

40 mins ago

ಚಾಕುವಿನಿಂದ ಇರಿದು ಯುವಕನ ಬರ್ಬರ ಹತ್ಯೆ : ಪರಿಚಯಸ್ಥರಿಂದಲೇ ಕೊಲೆ ಶಂಕೆ

ತಡರಾತ್ರಿ ದುಷ್ಕರ್ಮಿಗಳು ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಹತ್ಯೆಗೈದಿರುವ ಘಟನೆ ನಗರದ…

59 mins ago

ಬಿಜೆಪಿ ಈಗ ಬೆಳೆದು ನಿಂತಿದೆ ಅದಕ್ಕೆ ಆರ್ ಎಸ್ ಎಸ್ ಬೆಂಬಲ ಬೇಕಾಗಿಲ್ಲ: ಉದ್ಧವ್ ಠಾಕ್ರೆ

ಬಿಜೆಪಿ ಮತ್ತು ಆರೆಸ್ಸೆಸ್ ಸಂಬಂಧದ ಬಗ್ಗೆ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ನೀಡಿದ ಹೇಳಿಕೆಯನ್ನು ಉಲ್ಲೇಖಿಸಿ ಶಿವಸೇನಾ ಯುಬಿಟಿ ಬಣದ…

1 hour ago

ನೇಹಾ, ಅಂಜಲಿ ಕೊಲೆ ಕೇಸ್​​ : ಎಡಿಜಿಪಿ ಆರ್.ಹಿತೇಂದ್ರ ಅಧಿಕಾರಿಗಳಿಗೆ ಕ್ಲಾಸ್​

ನೇಹಾ ಮತ್ತು ಅಂಜಲಿ ಅಂಬಿಗೇರ ಹತ್ಯೆ ಪ್ರಕರಣಗಳು ಬಾರಿ ಸಂಚಲನ ಮೂಡಿಸಿದ್ದವು ಈ ಹಿನ್ನೆಲೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ…

1 hour ago