News Karnataka Kannada
Wednesday, April 24 2024
Cricket
ಮೈಸೂರು

ಬಂಡೀಪುರ ಅರಣ್ಯದಲ್ಲಿ ರಾತ್ರಿ ಸಂಚಾರಕ್ಕೆ ಅವಕಾಶವಿಲ್ಲ

ಬಂಡೀಪುರ ಅರಣ್ಯ ಪ್ರದೇಶ ವನ್ಯ ಜೀವಿಗಳ ಆವಾಸಸ್ಥಾನವಾಗಿದ್ದು, ಇಲ್ಲಿ ಕಾಡುಪ್ರಾಣಿಗಳ ಸಂಚಾರಕ್ಕೆ ತೊಂದರೆ ಆಗದ ರೀತಿಯಲ್ಲಿ ಕ್ರಮ ವಹಿಸುವ ಹಿನ್ನಲೆಯಲ್ಲಿ ರಾತ್ರಿ ಸಂಚಾರಕ್ಕೆ ಯಾವುದೇ ರೀತಿಯ ಅವಕಾಶ ಮಾಡಿಕೊಡುವುದಿಲ್ಲ ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ.
Photo Credit : By Author

ಮೈಸೂರು: ಬಂಡೀಪುರ ಅರಣ್ಯ ಪ್ರದೇಶ ವನ್ಯ ಜೀವಿಗಳ ಆವಾಸಸ್ಥಾನವಾಗಿದ್ದು, ಇಲ್ಲಿ ಕಾಡುಪ್ರಾಣಿಗಳ ಸಂಚಾರಕ್ಕೆ ತೊಂದರೆ ಆಗದ ರೀತಿಯಲ್ಲಿ ಕ್ರಮ ವಹಿಸುವ ಹಿನ್ನಲೆಯಲ್ಲಿ ರಾತ್ರಿ ಸಂಚಾರಕ್ಕೆ ಯಾವುದೇ ರೀತಿಯ ಅವಕಾಶ ಮಾಡಿಕೊಡುವುದಿಲ್ಲ ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ.

ಮೈಸೂರಿನ ಅರಣ್ಯ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಂಡೀಪುರ ಅರಣ್ಯದೊಳಗೆ ಇರುವ ರಸ್ತೆ ಮಾರ್ಗವಾಗಿ ಕೇರಳಕ್ಕೆ ಹೋಗಲು ಬೆಳಗ್ಗೆ 6ರಿಂದ ರಾತ್ರಿ 9ರವರೆಗೆ ಅವಕಾಶ ನೀಡಲಾಗಿದೆ. ರಾತ್ರಿ ಸಂಚಾರಕ್ಕೆ ಅವಕಾಶ ನಿರ್ಬಂಧಿಸಲಾಗಿದೆ. ಇದು ಮುಂದುವರಿಯುತ್ತದೆ. ಆದಾಗ್ಯೂ ಕೆಲವು ವಿಶೇಷ ಸಂದರ್ಭ ಅಂದರೆ ವೈದ್ಯಕೀಯ ತುರ್ತು ಇತ್ಯಾದಿ ಸಂದರ್ಭದಲ್ಲಿ ಪರಿಶೀಲಿಸಿ ವಾಹನ ಸಂಚಾರಕ್ಕೆ ಅವಕಾಶ ನೀಡಲಾಗಿದೆ ಎಂದರು.

ಮಾನವ-ವನ್ಯಜೀವಿ ಸಂಘರ್ಷ ತಡೆಗೆ ಕ್ರಮ ಅತ್ಯಗತ್ಯವಾಗಿದೆ. ಪ್ರತಿಯೊಂದು ಜೀವವೂ ಅಮೂಲ್ಯವಾಗಿದೆ. ಹೀಗಾಗಿ ಬೆಳೆ ಹಾನಿ ಆಗದಂತೆ ಮತ್ತು ಜೀವ ಹಾನಿ ಆಗದ ರೀತಿಯಲ್ಲಿ ರೈಲ್ವೆ ಬ್ಯಾರಿಕೇಡ್ ನಿರ್ಮಿಸುವ ಕಾರ್ಯ ಪ್ರಗತಿಯಲ್ಲಿದೆ. ಇದರ ಜೊತೆಗೆ ಅರಣ್ಯ ವಿಸ್ತರಣೆಗೆ ಆದ್ಯತೆ ನೀಡಲಾಗುವುದು ಎಂದರು. ಸ್ವಾತಂತ್ರ್ಯ ಪೂರ್ವದಲ್ಲಿ 7500 ಎಕರೆ ಅರಣ್ಯ ಭೂಮಿಯನ್ನು ಬ್ರಿಟಿಷರು ಕೆಲವು ಎಸ್ಟೇಟ್ ಕಂಪನಿಗಳಿಗೆ ದೀರ್ಘ ಕಾಲದ ಅವಧಿಗೆ ಗುತ್ತಿಗೆ ನೀಡಿರುತ್ತಾರೆ. ಇದರಿಂದಾಗಿ ಪ್ರಾಣಿಗಳ ಸುಗಮ ಸಂಚಾರಕ್ಕೆ ಅಡ್ಡಿಯಾಗಿದೆ. ಹೀಗಾಗಿ ಈ ಭೂಮಿಯನ್ನು ಮರಳಿ ಅರಣ್ಯ ಇಲಾಖೆಗೆ ಪಡೆದು ಅರಣ್ಯ ವಿಸ್ತರಿಸಲು ಕಾನೂನು ಹೋರಾಟ ಮುಂದುವರಿಸಲಾಗುವುದು ಎಂದರು.

ಎಸ್ಟೇಟ್ ಗಳಿಗೆ ನೀಡಲಾಗಿರುವ ಅರಣ್ಯ ಭೂಮಿ ಗುತ್ತಿಗೆದಾರರಿಂದ ಬರಬೇಕಾದ ಬಾಕಿ ಮತ್ತು ಅವಧಿ ಮುಗಿದ ಅರಣ್ಯ ಭೂಮಿ ಮರುಪಡೆಯಲು ವಿಶೇಷ ತಂಡ ಮತ್ತು ಕಾನೂನು ಕೋಶವನ್ನು ರಚಿಸಲಾಗಿದೆ. ಈ ವಿಶೇಷ ತಂಡ ಗುತ್ತಿಗೆ ನೀಡಿದ ಅರಣ್ಯ ಭೂಮಿಯನ್ನು ಮರು ಪಡೆಯಲು ಕಾರ್ಯೋನ್ಮುಖವಾಗುತ್ತದೆ ಎಂದರು.

ಕೆಲವು ವರ್ಷಗಳ ಹಿಂದೆ ಹಾಲಿ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಯಾಗಿರುವ ಬಿ.ಪಿ. ರವಿ ಅವರು, ಚಾಮರಾಜನಗರದಲ್ಲಿ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳಾಗಿದ್ದಾಗ ಕೆಲವು ಕಂಪನಿಗಳು ಗುತ್ತಿಗೆ ಹಣವನ್ನು ಅರಣ್ಯ ಇಲಾಖೆಗೆ ಪಾವತಿಸಿಲ್ಲ ಎಂದು ನೋಟಿಸ್ ನೀಡಿದ್ದರು, ಈಗ ಎಸ್ಟೇಟ್ ನವರು ನ್ಯಾಯಾಲಯಕ್ಕೆ ಹೋಗಿದ್ದಾರೆ. ನಾವು ಕಾನೂನು ಹೋರಾಟ ಮಾಡಲು ವಿಶೇಷ ತಂಡ ರಚಿಸಿದ್ದೇವೆ ಎಂದರು.

ಬೇಸಿಗೆಯಲ್ಲಿ ಕಾಡ್ಗಿಚ್ಚಿನಿಂದ ಅರಣ್ಯಕ್ಕೆ ಹಾನಿ ಆಗದ ರೀತಿಯಲ್ಲಿ ಕಟ್ಟೆಚ್ಚರ ವಹಿಸಲು ಸೂಚಿಸಲಾಗಿದೆ. ಫೈರ್ ಲೈನ್ ಅಂದರೆ ಬೆಂಕಿ ರೇಖೆಯನ್ನು ನಿರ್ಮಿಸಲಾಗಿದೆ. ಅಗ್ನಿ ಶಾಮಕ ದಳದೊಂದಿಗೆ ಕೂಡ ಈ ಬಗ್ಗೆ ಮಾತುಕತೆ ನಡೆಸಲಾಗಿದೆ. ಎಲ್ಲ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು