ಮೈಸೂರು: ರಾಜ್ಯದಲ್ಲಿ ಬಿಜೆಪಿ ಸರ್ಕಾರ ಆಡಳಿತದಲ್ಲಿದ್ದಾಗ ಹಿಜಾಬ್ ನಿಷೇಧಿಸಿದ್ದ ಬಿಜೆಪಿ ಸರ್ಕಾರದ ಆದೇಶವನ್ನು ಇದೀಗ ಕಾಂಗ್ರೆಸ್ ಸರ್ಕಾರ ವಾಪಸ್ ಪಡೆಯಲು ನಿರ್ಧರಿಸಿದೆ. ಈ ಬಗ್ಗೆ ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿ, ಹಿಜಾಬ್ ನಿಷೇಧವನ್ನು ವಾಪಸ್ ಪಡೆಯಲು ಸೂಚನೆ ನೀಡಿದ್ದೇನೆ ಎಂದಿದ್ದಾರೆ.
ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಕವಲಂದೆ ಗ್ರಾಮದಲ್ಲಿ ಮಾತನಾಡಿದ ಸಿದ್ದರಾಮಯ್ಯ, ಹಿಜಾಬ್ ನಿಷೇಧವನ್ನು ವಾಪಸ್ ಪಡೆಯಲು ಸೂಚನೆ ನೀಡಿದ್ದೇನೆ. ಮೋದಿ ಅವರ ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ಬೋಗಸ್. ಬಟ್ಟೆ, ಉಡುಪು, ಜಾತಿ, ಆಧಾರದ ಮೇಲೆ ಜನರನ್ನು ವಿಭಜಿಸುವ, ಸಮಾಜವನ್ನು ವಿಭಜಿಸುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ. ಹೀಗಾಗಿ ಹಿಜಾಬ್ ನಿಷೇಧವನ್ನು ವಾಪಾಸ್ ಪಡೆಯಲು ಹೇಳಿದ್ದೇನೆ ಎಂದು ಸ್ಪಷ್ಟಪಡಿಸಿದರು.