News Karnataka Kannada
Monday, April 29 2024
ಮೈಸೂರು

ಮೈಸೂರಿಗೆ ಆಗಮಿಸಿದ ಕೇಂದ್ರ ಗೃಹಸಚಿವ ಅಮಿತ್ ಶಾ

ಬಿಜೆಪಿ ಚಾಣಕ್ಯ ಕೇಂದ್ರ ಗೃಹಸಚಿವ  ಅಮಿತ್ ಶಾ ಅವರು ಇಂದು ಬೆಳಗ್ಗಿನ ಜಾವ ಮೈಸೂರಿಗೆ ಆಗಮಿಸಿದ್ದಾರೆ.
Photo Credit : News Kannada

ಮೈಸೂರು: ಬಿಜೆಪಿ ಚಾಣಕ್ಯ ಕೇಂದ್ರ ಗೃಹಸಚಿವ  ಅಮಿತ್ ಶಾ ಅವರು ಇಂದು ಬೆಳಗ್ಗಿನ ಜಾವ ಮೈಸೂರಿಗೆ ಆಗಮಿಸಿದ್ದಾರೆ.

ಮುಂಜಾನೆ 3 ಗಂಟೆಗೆ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ವಿಶೇಷ ವಿಮಾನದ ಮೂಲಕ ಆಗಮಿಸಿದ ಅಮಿತ್ ಶಾ, ಇಲ್ಲಿಂದ ರಸ್ತೆ ಮಾರ್ಗದ ಮೂಲಕ ತೆರಳಿ ರಾಡಿಸನ್ ಬ್ಲೂ ಹೋಟೆಲ್​ನಲ್ಲಿ ವಾಸ್ತವ್ಯ ಹೊಂದಲಿದ್ದಾರೆ.

ರಾಡಿಸನ್ ಬ್ಲೂ ಹೋಟೆಲ್​ ಸುತ್ತಮುತ್ತ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.

ಅಮಿತ್ ಶಾ ಕಾರ್ಯಕ್ರಮಗಳ ವಿವರ: ರಾಡಿಸನ್ ಬ್ಲೂ ಹೋಟೆಲ್​ನಿಂದ ಅಮಿತ್ ಶಾ ಅವರು ಬೆಳಗ್ಗೆ 11ಕ್ಕೆ ಚಾಮುಂಡಿಬೆಟ್ಟಕ್ಕೆ ತೆರಳಲಿದ್ದಾರೆ. ಚಾಮುಂಡೇಶ್ವರಿ ಅಮ್ಮನವರಿಗೆ ವಿಶೇಷ ಪೂಜೆ ಸಲ್ಲಿಸಲಿರುವ ಅಮಿತ್ ಶಾ, ಬಳಿಕ ಮಂಡಕಹಳ್ಳಿ ಏರ್​ಪೋರ್ಟ್​ಗೆ ತೆರಳಲಿದ್ದಾರೆ.

ಅಲ್ಲಿಂದ ಹೆಲಿಕಾಪ್ಟರ್ ಮೂಲಕ ನಂಜನಗೂಡು ತಾಲೂಕಿನ ಸುತ್ತೂರು ಗ್ರಾಮಕ್ಕೆ ತೆರಳಲಿದ್ದಾರೆ. ಅಲ್ಲಿ ನಡೆಯುತ್ತಿರುವ ಸುತ್ತೂರು ಜಾತ್ರಾ ಮಹೋತ್ಸವದಲ್ಲಿ ಭಾಗಿಯಾಗಲಿದ್ದಾರೆ.

ರಾಡಿಸನ್ ಬ್ಲೂ ಹೋಟೆಲ್​ಗೆ ತೆರಳಿ ಸುಮಾರು 2 ಗಂಟೆಗೂ ಹೆಚ್ಚು ಕಾಲ ಕಾರ್ಯಕರ್ತರ ಜೊತೆ ಸಭೆ ನಡೆಸಲಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು