News Karnataka Kannada
Tuesday, April 23 2024
Cricket
ಮೈಸೂರು

ವಿಧಾನಸೌಧದ ಮುಂದೆ ಹುಂಡಿ ಇಡಿ: ಬಿ.ವೈ.ವಿಜಯೇಂದ್ರ

ರಾಜ್ಯ ಸರ್ಕಾರ ದೇವಾಲಯಕ್ಕೆ ಕನ್ನ ಹಾಕುವ ಬದಲು, ವಿಧಾನಸೌಧದ ಮುಂದೆ ಒಂದು ಹುಂಡಿ ಇಟ್ಟರೆ ಸೂಕ್ತ ಎಂದು ಬಿಜೆಪಿ ರಾಜ್ಯಾಧಕ್ಷ ಬಿ.ವೈ.ವಿಜಯೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದರು.
Photo Credit : By Author

ಮೈಸೂರು: ರಾಜ್ಯ ಸರ್ಕಾರ ದೇವಾಲಯಕ್ಕೆ ಕನ್ನ ಹಾಕುವ ಬದಲು, ವಿಧಾನಸೌಧದ ಮುಂದೆ ಒಂದು ಹುಂಡಿ ಇಟ್ಟರೆ ಸೂಕ್ತ ಎಂದು ಬಿಜೆಪಿ ರಾಜ್ಯಾಧಕ್ಷ ಬಿ.ವೈ.ವಿಜಯೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರದ ಬಳಿ ಹಣವಿಲ್ಲ. ಸರ್ಕಾರಿ ನೌಕರರಿಗೂ ಸಂಬಳ ಕೊಡಲು ಕಷ್ಟವಾಗುವ ಸ್ಥಿತಿ ಬಂದಿದೆ. ಹಾಗಾಗಿಯೇ ದೇವಾಲಯಗಳ ಹುಂಡಿಯಲ್ಲಿನ ಶೇ.10ರಷ್ಟು ಹಣವನ್ನು ಸರ್ಕಾರ ಬಳಕೆ ಮಾಡಿಕೊಳ್ಳಲು ನಿಧರಿಸಿದೆ. ಹೀಗೆ ದೇವಾಲಯಗಳ ಹುಂಡಿಗೆ ಕನ್ನ ಹಾಕುವ ಬದಲು ವಿಧಾನಸೌಧದ ಮುಂದೆ ಒಂದು ಹುಂಡಿ ಇಟ್ಟರೆ, ದಾನಿಗಳು ಅಲ್ಲಿಗೆ ಬಂದು ದಾನ ಮಾಡುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸರ್ಕಾರ ರಾಜ್ಯದಲ್ಲಿರುವ 224 ವಿಧಾನಸಭಾ ಕ್ಷೇತ್ರಕ್ಕೆ ಒಂದೇ ಒಂದು ರೂಪಾಯಿ ಅನುದಾನ ಕೊಡುತ್ತಿಲ್ಲ. ರಾಜ್ಯದ ಹಣೆಬರಹ ಏನಾಗುತ್ತಿದೆ ಎಂಬುದನ್ನು ಜನರೇ ನೋಡುತ್ತಿದ್ದಾರೆ. ಖಾಸಗಿ ಶಾಲೆಗಳಲ್ಲಿ ನಾಡಗೀತೆ ಕಡ್ಡಾಯವಲ್ಲ ವಿಚಾರಕ್ಕೆ ಪ್ರತಿಕ್ರಿಯಿಸಿ, ರಾಜ್ಯ ಸರ್ಕಾರದ ಅಜೆಂಡಾ ಏನೆಂಬುದು ಈ ಆದೇಶಗಳಿಂದ ಗೊತ್ತಾಗುತ್ತಿದೆ. ಜತೆಗೆ ಈ ಸರ್ಕಾರ ಕನ್ನಡ ವಿರೋಧಿ ಚಿಂತನೆಯಲ್ಲಿದೆ. ಕನ್ನಡ ನಾಡು-ನುಡಿಗೆ ಮುಖ್ಯಮಂತ್ರಿಗಳು ಧಕ್ಕೆ ತರುತ್ತಿದ್ದಾರೆ ಎಂದರು.

ಮಂಗಳೂರು ಭಾಗದ ಹಿಂದೂ ಪರ ಹೋರಾಟಗಾರ ಅರುಣ್ ಕುಮಾರ್ ಪುತ್ತಿಲ ಭೇಟಿ ವಿಚಾರವಾಗಿ ಪ್ರತಿಕ್ರಿಯಿಸಿ, ಪುತ್ತಿಲ ನನ್ನನ್ನು ಭೇಟಿ ಮಾಡಿದ್ದು ಸತ್ಯ. ಈ ವೇಳೆ ಯಾವುದೇ ಷರತ್ತುಗಳಿಲ್ಲದೇ ಬೇಷರತ್ ಆಗಿ ಬಿಜೆಪಿ ಸೇರ್ಪಡೆಯಾಗಿ, ಮೋದಿ ನಾಯಕತ್ವಕ್ಕಾಗಿ ಎಲ್ಲರು ಒಂದಾಗಬೇಕು ಎಂದು ಹೇಳಿzನೆ. ನಾನು ಕೂಡ ಅಲ್ಲಿನ ಸ್ಥಳೀಯ ಮುಖಂಡರ ಜೊತೆ ಚರ್ಚೆ ಮಾಡುತ್ತೇನೆ ಎಂದು ಹೇಳಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು