Categories: ಮೈಸೂರು

ಮೈಸೂರಿನ ಮಕ್ಕಳ ದಸರಾದಲ್ಲಿ ಚಿಣ್ಣರ ಕಲರವ

ಮೈಸೂರು: ನಾಡಹಬ್ಬ ದಸರಾ ಮಹೋತ್ಸವ ಅಂಗವಾಗಿ ಜಗನ್‌ಮೋಹನ ಅರಮನೆಯಲ್ಲಿ ಆಯೋಜಿಸಿರುವ ಮಕ್ಕಳ ದಸರಾದಲ್ಲಿ ಚಿಣ್ಣರ ಕಲರವ ಮೇಳೈಸಿತ್ತು. ಚಿಣ್ಣರು ತಮ್ಮ ಪ್ರತಿಭೆಯನ್ನು ಮೆರೆದು ಮಕ್ಕಳ ದಸರಾಕ್ಕೆ ಮೆರಗು ತಂದರು.

ಮಹಿಳಾ ಮತ್ತು ಮಕ್ಕಳ ದಸರಾ ಉಪ ಸಮಿತಿ ವತಿಯಿಂದ ಹಮ್ಮಿಕೊಂಡಿದ್ದ ಮಕ್ಕಳ ದಸರಾ ಕಾರ್ಯಕ್ರಮವನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಸಕಾಲ ಸಚಿವ ಮಧು ಬಂಗಾರಪ್ಪ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಮಕ್ಕಳಿಗೆ ಬೇಕಾದ ಎಲ್ಲಾ ಸೌಲಭ್ಯಗಳನ್ನು ಪೂರೈಸುವುದು ನನ್ನ ಜವಾಬ್ದಾರಿ. ರಾಜ್ಯ ಸರ್ಕಾರ ಆ ಕರ್ತವ್ಯವನ್ನು ನನಗೆ ವಹಿಸಿದೆ ಎಂದು ಹೇಳಿದರು.

ಎಲ್ಲಾ ಮಕ್ಕಳಲ್ಲಿಯೂ ಪ್ರತಿಭೆ ಇದೆ. ಆದರೆ, ಅವಕಾಶದ ಕೊರತೆ ಇರುವುದರಿಂದ ಕೆಲವೊಮ್ಮೆ ಮಕ್ಕಳಲ್ಲಿನ ಪ್ರತಿಭೆಗಳನ್ನು ಗುರುತಿಸಲಾಗುವುದಿಲ್ಲ. ಮಕ್ಕಳ ಅಭಿವೃದ್ಧಿಗೆ ಬೇಕಾದ ಕೆಲಸಗಳನ್ನು ಮುಂದಿನ ದಿನಗಳಲ್ಲಿ ಮಾಡಲಾಗುವುದು. ಆವರಣದಲ್ಲಿರುವ ಮಕ್ಕಳ ವಸ್ತು ಪ್ರದರ್ಶನ ಗಮನಿಸಿದೆ. ಅತ್ಯಂತ ಆಕರ್ಷಣೀಯವಾದ ವಸ್ತು ಪ್ರದರ್ಶನದಲ್ಲಿ ಮಕ್ಕಳ ಪ್ರತಿಭೆ ಎದ್ದು ತೋರುತ್ತದೆ. ಅತ್ಯಂತ ಚಿಕ್ಕ ವಯಸ್ಸಿನಲ್ಲಿಯೇ ಸಾಧನೆಗೈದ ಪ್ರತಿಭಾವಂತ ಮಕ್ಕಳ ಜೊತೆಯಲ್ಲಿ ಕುಳಿತಿರುವುದು ನನ್ನ ಸೌಭಾಗ್ಯ ಎಂದು ಸಂತಸ ವ್ಯಕ್ತಪಡಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಸಕ ಹರೀಶ್ ಗೌಡ ಮಾತನಾಡಿ, ಎಲ್ಲ ಮಕ್ಕಳಿಗೂ ದಸರಾ ಹಬ್ಬದ ಶುಭವನ್ನು ಹಾರೈಸಿದರು. ಇಂದಿನ ಮಕ್ಕಳ ಬೌದ್ಧಿಕ ಬೆಳವಣಿಗೆ ಹಾಗೂ ಅವರಲ್ಲಿರುವ ಪ್ರತಿಭೆ ನಮಗಿಂತ ಹೆಚ್ಚಿನದ್ದಾಗಿದೆ. ಎರಡು ದಿನಗಳ ಕಾಲ ನಡೆಯಲಿರುವ ಈ ಮಕ್ಕಳ ದಸರಾ ಕಾರ್ಯಕ್ರಮದಲ್ಲಿ ಎಲ್ಲ ಮಕ್ಕಳು ವೇದಿಕೆಯನ್ನು ಚೆನ್ನಾಗಿ ಬಳಸಿಕೊಳ್ಳಿ ಮತ್ತು ಸಂತಸಪಡಿ ಎಂದು ಮಕ್ಕಳಿಗೆ ಕಿವಿ ಮಾತು ಹೇಳಿದರು.

ಮೇಯರ್ ಶಿವಕುಮಾರ್ ಮಾತನಾಡಿ, ದಸರಾ ಮಹೋತ್ಸವದಲ್ಲಿ ಮಕ್ಕಳ ದಸರಾವನ್ನು ೨೦೦೭ರಲ್ಲಿ ಮಾಡಲಾಯಿತು. ಮಕ್ಕಳ ಸಂತೋಷ ಹೆಚ್ಚಿಸುವುದಕ್ಕಾಗಿ ದಸರಾ ಮಹೋತ್ಸವದಲ್ಲೂ ಅವಕಾಶ ಕಲ್ಪಿಸಲಾಗಿದೆ. ಮಕ್ಕಳ ದಸರಾ ವೇದಿಕೆ ಮಕ್ಕಳ ಪ್ರತಿಭೆಯ ಅನಾವರಣಕ್ಕೆ ಅವಕಾಶ ಕಲ್ಪಿಸಿಕೊಟ್ಟಿದೆ ಎಂದರು.

ಸರಿಗಮಪ ಸೀಸನ್ 19ರ ದಿಯಾ ಹೆಗಡೆ, ಪ್ರಗತಿ ಬಡಿಗೇರ್, ರಾಜ್ಯಮಟ್ಟದ ಸೊಲೊ ಡಾನ್ಸ್ ವಿಜೇತ ಗಂಗಾಧರ್ ಜಿಎಂ ಹಾಗೂ ಖೋ-ಖೋ ರಾಷ್ಟ್ರೀಯ ಕ್ರೀಡಾಪಟು ಮಾನಸ ಬಾಲ ಪ್ರತಿಭೆಗಳಿಗೆ ಗೌರವ ಸಮರ್ಪಣೆ ಮಾಡಲಾಯಿತು.

Ashika S

Recent Posts

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

6 hours ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

6 hours ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

7 hours ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

7 hours ago

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

8 hours ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

9 hours ago