News Karnataka Kannada
Sunday, April 28 2024
ಮೈಸೂರು

ಆಷಾಢ ಮಾಸಕ್ಕೆ ಚಾಮುಂಡಿಬೆಟ್ಟದಲ್ಲಿ ಸ್ವಚ್ಚತಾ ಕಾರ್ಯ

Cleanliness drive at Chamundi Hill for Ashadha month
Photo Credit : By Author

ಮೈಸೂರು: ಆಷಾಢ ಮಾಸದ ಹಿನ್ನೆಲೆ ಚಾಮುಂಡಿ ಬೆಟ್ಟವನ್ನು ಪ್ಲಾಸ್ಟಿಕ್ ಮುಕ್ತಗೊಳಿಸಿ ಸ್ವಚ್ಛತೆ ಕಾಪಾಡುವ ನಿಟ್ಟಿನಲ್ಲಿ ಮೈಸೂರು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಎಚ್.ಡಿ.ಗಿರೀಶ್ ಅವರ ನೇತೃತ್ವದಲ್ಲಿ ತಾಲೂಕಿನ ಎಲ್ಲಾ ಗ್ರಾಮ ಪಂಚಾಯಿತಿಗಳ ಸಿಬ್ಬಂದಿ ಸ್ವಚ್ಛತಾ ಕಾರ್ಯ ನೆರವೇರಿಸಿದರು.

ಬೆಟ್ಟದ ಪಾದದಿಂದ ದೇವಾಲಯದವರೆಗೂ ಮೆಟ್ಟಿಲುಗಳನ್ನು ಗುಡಿಸಿ, ಮುಳ್ಳಿನ ಗಿಡ ತೆರವುಗೊಳಿಸಿ, ಮಾರ್ಗ ಮಧ್ಯೆದಲ್ಲಿ ಬಿಸಾಡಿದ್ದ ನೀರಿನ ಬಾಟಲ್, ಪ್ಲಾಸ್ಟಿಕ್ ಪೇಪರ್ ಸೇರಿದಂತೆ ಇನ್ನಿತರ ತ್ಯಾಜ್ಯವನ್ನು ಸಂಗ್ರಹಿಸಿ ಸೂಕ್ತ ವಿಲೇವಾರಿ ಮಾಡಿದರು.

ಈ ವೇಳೆ ಕಾರ್ಯನಿರ್ವಾಹಕ ಅಧಿಕಾರಿ ಎಚ್.ಡಿ.ಗಿರೀಶ್ ಅವರು ಮಾತನಾಡಿ, ಆಷಾಢ ಮಾಸದ ದಿನಗಳಂದು ವಾಡಿಕೆಯಂತೆ ಸಾವಿರಾರು ಭಕ್ತರು ಹಾಗೂ ವಿವಿಧ ಹರಕೆ ಹೊತ್ತವರು ಮೆಟ್ಟಿಲುಗಳನ್ನು ಹತ್ತುವ ಮೂಲಕ ಬೆಟ್ಟ ಹತ್ತಿ ದೇವಿಯ ದರ್ಶನ ಪಡೆಯುತ್ತಾರೆ. ಈ ಹಿನ್ನೆಲೆ ಬೆಟ್ಟ ಸ್ವಚ್ಛವಾಗಿರಬೇಕು ಹಾಗೂ ಪರಿಸರಕ್ಕೆ ಹಾನಿಕಾರಕವಾಗಿರುವ ಪ್ಲಾಸ್ಟಿಕ್ ವಸ್ತುಗಳಿಂದ ಮುಕ್ತಗೊಳಿಸಬೇಕು ಎಂಬ ನಿಟ್ಟಿನಲ್ಲಿ ನಮ್ಮ ಗ್ರಾಮ ಪಂಚಾಯಿತಿಗಳ ಪೌರಕಾರ್ಮಿಕರು, ಅಧಿಕಾರಿ ವರ್ಗ ಹಾಗೂ ಸಿಬ್ಬಂದಿ ಜೊತೆಗೂಡಿ ಸ್ವಚ್ಛಗೊಳಿಸಲಾಗಿದೆ ಎಂದು ತಿಳಿಸಿದರು.

ಚಾಮುಂಡಿಬೆಟ್ಟದ ಪರಿಸರ ಉತ್ತಮವಾಗಿದೆ. ಅಚ್ಚಹರಿಸಿನಿಂದ ಕೂಡಿದೆ. ಸಾರ್ವಜನಿಕರನ್ನು ಇದನ್ನು ಹಾಳು ಮಾಡುವ ಕೆಲಸ ಮಾಡಬಾರದು. ಮೈಸೂರು ದೇಶದ ಸ್ವಚ್ಛನಗರಿಗಳಲ್ಲಿ ಒಂದಾಗಿದ್ದು, ನಗರದ ಸ್ವಚ್ಛತೆ ಕಾಪಾಡಿಕೊಳ್ಳುವ ಜವಾಬ್ದಾರಿ ಎಲ್ಲರ ಮೇಲೂ ಇದೆ. ಹೀಗಾಗಿ ಪ್ರತಿಯೊಬ್ಬ ನಾಗರೀಕರೂ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಪ್ಲಾಸ್ಟಿಕ್ ನಿಷೇಧ ಮಾಡಿರುವುದರಿಂದ ಬೆಟ್ಟದಲ್ಲಿ ಪ್ಲಾಸ್ಟಿಕ್ ಮಾಡಬಾರದು. ಕೇವಲ ಆಷಾಧ ಮಾಸದಲ್ಲಿ ಮಾತ್ರವಲ್ಲದೆ ಪ್ರತಿದಿನವೂ ಬೆಟ್ಟದ ಸ್ವಚ್ಛತೆ ಕಾಪಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ.ಗಾಯಿತ್ರಿ ಅವರ ಮಾರ್ಗದರ್ಶನದಂತೆ ಈ ಹಿಂದೆಯೂ ಚಾಮುಂಡಿಬೆಟ್ಟದಲ್ಲಿ ವರ್ತಕರ ಸಭೆ ನಡೆಸಿ ಪ್ಲಾಸ್ಟಿಕ್ ವಸ್ತುಗಳನ್ನು ಬಳಕೆಗೆ ನೀಡದಂತೆ ಮನವರಿಕೆ ಮಾಡಲಾಗಿದೆ. ಅದರಂತೆ ಬೆಟ್ಟವನ್ನು ಪ್ಲಾಸ್ಟಿಕ್ ಮುಕ್ತವಾಗಿಸಲು ಹಾಗೂ ಸ್ವಚ್ಛತೆ ಕಾಪಾಡುವ ಉದ್ದೇಶದಿಂದ ನಮ್ಮ ಪೌರಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸ್ವಚ್ಛಗೊಳಿಸಿದ್ದು ಹೆಮ್ಮೆಯ ವಿಚಾರ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ತಾಲ್ಲೂಕು ಪಂಚಾಯಿತಿ ಸಿಬ್ಬಂದಿ, ಎಲ್ಲಾ ಗ್ರಾಮ ಪಂಚಾಯಿತಿಗಳ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿಗಳು, ಎಸ್‌ಡಿಎ, ಡಿಇಒ ಗಳು, ಪೌರಕಾರ್ಮಿಕ ಸಿಬ್ಬಂದಿ ಸ್ವಚ್ಛತಾ ಕಾರ್ಯದಲ್ಲಿ ಭಾಗವಹಿಸಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು