News Karnataka Kannada
Monday, April 15 2024
Cricket
ಮೈಸೂರು

ಏ.1 ರಂದು ಬಿಳಿಗೆರೆ ಗ್ರಾಮಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ

ಏ.1 ರಂದು ಸೋಮವಾರ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಂಜನಗೂಡು ತಾಲೂಕಿನ ಬಿಳಿಗೆರೆ ಗ್ರಾಮಕ್ಕೆ ಆಗಮಿಸಲಿದ್ದಾರೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್.ಸಿ ಬಸವರಾಜು ಹೇಳಿದರು.
Photo Credit : NewsKarnataka

ನಂಜನಗೂಡು: ಏ.1 ರಂದು ಸೋಮವಾರ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಂಜನಗೂಡು ತಾಲೂಕಿನ ಬಿಳಿಗೆರೆ ಗ್ರಾಮಕ್ಕೆ ಆಗಮಿಸಲಿದ್ದಾರೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್.ಸಿ ಬಸವರಾಜು ಹೇಳಿದರು.

ನಂಜನಗೂಡು ತಾಲ್ಲೂಕಿನ ಹದಿನಾರು ಗ್ರಾಮದಲ್ಲಿ ಮಾತನಾಡಿದ ಅವರು, ಚಾಮರಾಜನಗರ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸುನಿಲ್ ಬೋಸ್ ಅವರು ಸ್ಪರ್ಧಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಗ್ರಾಮದ ಹೊರವಲಯದಲ್ಲಿ ಕಾರ್ಯಕರ್ತರ ಸಭೆಯನ್ನು ನಡೆಸಲಾಗುತ್ತಿದೆ. ಹಾಗಾಗಿ ಏ.1 ರಂದು ಸೋಮವಾರ ಬೆಳಗ್ಗೆ 11 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಆಗಮಿಸಲಿದ್ದಾರೆ.

ಇವರೊಂದಿಗೆ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಹೆಚ್ ಸಿ ಮಹದೇವಪ್ಪ, ಕೆ.ವೆಂಕಟೇಶ್, ಆಶ್ರಯ ಸಮಿತಿಯ ಅಧ್ಯಕ್ಷ ಡಾ. ಯತೀಂದ್ರ ಸಿದ್ದರಾಮಯ್ಯ, ಕಾಂಗ್ರೆಸ್ ಅಭ್ಯರ್ಥಿ ಸುನಿಲ್ ಬೋಸ್, ಸೇರಿದಂತೆ ಶಾಸಕರು, ಸಚಿವರು ಭಾಗವಹಿಸಿಲಿದ್ದಾರೆ ಹೆಚ್ಚಿನ ಸಂಖ್ಯೆಯಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಭಾಗವಹಿಸಬೇಕು ಎಂದು ತಿಳಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು