ಮೈಸೂರು

ಮೈಸೂರಿನಲ್ಲಿ ಮೂರು ದಿನ ಸಿಎಂ ಚುನಾವಣಾ ಪ್ರಚಾರ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಏ.1ರಿಂದ ಮೂರು ದಿನಗಳವರೆಗೆ ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಳ್ಳಲಿದ್ದು, ಲೋಕಸಭೆ ಚುನಾವಣೆ ಪ್ರಚಾರದಲ್ಲಿ ಭಾಗಿಯಾಗಲಿದ್ದಾರೆ.

ಮುಖಂಡರ ಸಭೆಗಳನ್ನು ನಡೆಸಿ, ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ ಹಾಗೂ ಚಾಮರಾಜನಗರ ಕ್ಷೇತ್ರದ ಅಭ್ಯರ್ಥಿ ಸುನೀಲ್ ಬೋಸ್ ಗೆಲುವಿಗೆ ರಣತಂತ್ರ ರೂಪಿಸಲಿದ್ದಾರೆ. ಏ.1ರಂದು ಬೆಳಗ್ಗೆ 10.45ಕ್ಕೆ ವಿಶೇಷ ವಿಮಾನದಲ್ಲಿ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಬಂದಿಳಿಯುವ ಅವರು, ಬೆಳಗ್ಗೆ 11.30ಕ್ಕೆ ಮೈಸೂರು ತಾಲೂಕಿನ ಬಿಳಿಗೆರೆಯಲ್ಲಿ ಹಾಗೂ ಮಧ್ಯಾಹ್ನ 3ಕ್ಕೆ ತಿ.ನರಸೀಪುರದಲ್ಲಿ ಚುನಾವಣಾ ಪ್ರಚಾರ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಸಂಜೆ 6ಕ್ಕೆ ನಗರದಲ್ಲಿ ಬಿಷಪ್ ಹೌಸ್‌ಗೆ ಭೇಟಿ ನೀಡಿದ ಬಳಿಕ ವಾಸ್ತವ್ಯ ಹೂಡಲಿದ್ದಾರೆ.

ಏ.2ರಂದು ಬೆಳಗ್ಗೆ 10ಕ್ಕೆ ನಗರದ ಶಂಕರಮಠಕ್ಕೆ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ 11ಕ್ಕೆ ಚಾಮರಾಜ ವಿಧಾನಸಭಾ  ಕ್ಷೇತ್ರದ ವ್ಯಾಪ್ತಿಯ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಸಂಜೆ 4ಕ್ಕೆ ನಜರ್‌ಬಾದ್‌ನ ಜೆ.ಪಿ.ಫಾರ್ಚೂನ್ ಹೋಟೆಲ್‌ನಲ್ಲಿ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಮುಖಂಡರ ಸಭೆ ನಡೆಸಲಿದ್ದಾರೆ.

ಏ.3ರಂದು ಬೆಳಗ್ಗೆ 9ಗಂಟೆಗೆ ಸುತ್ತೂರು ಮಠಕ್ಕೆ ಭೇಟಿ ನೀಡಲಿದ್ದಾರೆ. ಬೆಳಗ್ಗೆ 11ಕ್ಕೆ ಚಾಮರಾಜನಗರದಲ್ಲಿ ಸುನೀಲ್ ಬೋಸ್ ಅವರೊಂದಿಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆಯಲ್ಲಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ 1ರ ಸುಮಾರಿಗೆ ಮೈಸೂರಿಗೆ ಆಗಮಿಸಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ ಅವರ ನಾಮಪತ್ರ ಸಲ್ಲಿಕೆ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಸಂಜೆ 6ಕ್ಕೆ ಬೆಂಗಳೂರಿಗೆ ತೆರಳಲಿದ್ದಾರೆ.

Ashika S

Recent Posts

ʼನನ್ನನ್ನು ನೋಡಬೇಡಿ, ಅಟಲ್‌ ಸೇತುವೆ ನೋಡಿʼ ಎಂದ ರಶ್ಮಿಕಾಗೆ ಪಿಎಂ ಮೋದಿ ಮೆಚ್ಚುಗೆ

ನಟಿ ರಶ್ಮಿಕಾ ಮಂದಣ್ಣ ಅವರು ಸೋಶಿಯಲ್ ಮೀಡಿಯಾದಲ್ಲಿ ದೊಡ್ಡ ಅಭಿಮಾನಿ ಬಳಗ ಹೊಂದಿದ್ದಾರೆ. ಇದಕ್ಕೆ ಕಾರಣ ಆಗಿದ್ದು ಅವರ ಸಿನಿಮಾಗಳು.…

19 mins ago

ಗಮನ ಸೆಳೆದ ಮಾವು ಮೇಳ; ವಿವಿಧ ತಳಿಯ ಮಾವಿನ ಹಣ್ಣುಗಳ ಪ್ರದರ್ಶನ

ಹಣ್ಣುಗಳ ರಾಜನೆಂದು ಕರೆಯಲಾಗುವ, ಬಾಯಲ್ಲಿ ನೀರೂರಿಸುವ ಮಾವಿನ ಹಣ್ಣುಗಳ ಪ್ರದರ್ಶನ ಹಾಗೂ ಮಾರಾಟ ಮೇಳ ದೊಡ್ಡಣಗುಡ್ಡೆಯ ಶಿವಳ್ಳಿ ಮಾದರಿ ತೋಟಗಾರಿಕಾ…

43 mins ago

ಇಂದು ರೀ ರಿಲೀಸ್ ಆದ ಉಪ್ಪಿಯ ‘‘A’’ ಸಿನಿಮಾ; ಸ್ವಾಗತಿಸಿದ ಫ್ಯಾನ್ಸ್

ಕನ್ನಡ ಚಿತ್ರರಂಗದ ಸರ್ವಕಾಲಿಕ ಸೂಪರ್ ಹಿಟ್ ಚಿತ್ರ ಉಪೇಂದ್ರ ನಿರ್ದೇಶನದ “A” ಸಿನಿಮಾ ಇಂದು ರೀ ರಿಲೀಸ್​ ಆಗಿದೆ. ಬೆಂಗಳೂರಿನ…

1 hour ago

ಚಾರ್ ಧಾಮ್​ ಯಾತ್ರೆ, ದೇವಸ್ಥಾನಗಳ ಬಳಿ ರೀಲ್ಸ್​ಗೆ ನಿಷೇಧ

ಚಾರ್​ ಧಾಮ್ ಯಾತ್ರೆ ಶುರುವಾಗಿದ್ದು, ಮೇ 31ರವರೆಗೆ ವಿಐಪಿ ದರ್ಶನಕ್ಕೆ ಅವಕಾಶ ನೀಡದಿರಲು ಸರ್ಕಾರ ನಿರ್ಧರಿಸಿದೆ. ಅಷ್ಟೇ ಅಲ್ಲದೆ ದೇವಾಲಯದಗಳ…

2 hours ago

ಎವರೆಸ್ಟ್​, ಎಂಡಿಎಚ್​ ಮಸಾಲೆಗಳ ಮಾರಾಟ ನಿಷೇಧ !

ಭಾರತದ ಎಂಡಿಎಚ್​ ಹಾಗೂ ಎವರೆಸ್ಟ್​ ಮಸಾಲೆ ಉತ್ಪನ್ನಗಳಲ್ಲಿ ವಿಷಕಾರಿ ಅಂಶ ಇರುವ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಸುರಕ್ಷತೆ ದೃಷ್ಟಿಯಿಂದ ನೇಪಾಳವು…

3 hours ago

ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಮಳೆಯ ಅಬ್ಬರ

ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಗ್ರಾಮಾಂತರ,…

3 hours ago