News Karnataka Kannada
Monday, April 29 2024
ಮೈಸೂರು

ಕೇರಳದಲ್ಲಿ ಕೊರೊನಾ: ಮೈಸೂರಿನಲ್ಲಿ ಮುಂಜಾಗ್ರತಾ ಕ್ರಮ

ಕೇರಳದಲ್ಲಿ ಮಹಾಮಾರಿ ಕೊರೊನಾ ಸೋಂಕು ಹೆಚ್ಚುತ್ತಿರುವ ಬೆನ್ನಲ್ಲೇ ಕೇರಳದೊಂದಿಗೆ ಗಡಿ ಹಂಚಿಕೊಂಡಿರುವ ಮೈಸೂರು ಜಿಲ್ಲೆಯಲ್ಲಿ ನಿಗಾ ವಹಿಸಲಾಗುತ್ತಿದ್ದು, ಮುಂಜಾಗ್ರತಾ ಕ್ರಮವಾಗಿ ಹಲವು ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ.
Photo Credit : News Kannada

ಮೈಸೂರು: ಕೇರಳದಲ್ಲಿ ಮಹಾಮಾರಿ ಕೊರೊನಾ ಸೋಂಕು ಹೆಚ್ಚುತ್ತಿರುವ ಬೆನ್ನಲ್ಲೇ ಕೇರಳದೊಂದಿಗೆ ಗಡಿ ಹಂಚಿಕೊಂಡಿರುವ ಮೈಸೂರು ಜಿಲ್ಲೆಯಲ್ಲಿ ನಿಗಾ ವಹಿಸಲಾಗುತ್ತಿದ್ದು, ಮುಂಜಾಗ್ರತಾ ಕ್ರಮವಾಗಿ ಹಲವು ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ.

ಕೊರೊನಾ ಸೋಂಕಿಗೆ ಸಂಬಂಧಿಸಿದಂತೆ ತೆಗೆದುಕೊಳ್ಳಲಾಗಿರುವ ಕ್ರಮಗಳ ಕುರಿತು ಪ್ರತಿಕ್ರಿಯೆ ನೀಡಿರುವ ಜಿಲ್ಲಾ ಆರೋಗ್ಯಾಧಿಕಾರಿ ಪಿ.ಸಿ.ಕುಮಾರಸ್ವಾಮಿ, ಜಿಲ್ಲೆಯಲ್ಲಿ ಸದ್ಯಕ್ಕೆ ಯಾವುದೇ ಕೇಸ್‌ಗಳು ದಾಖಲಾಗಿಲ್ಲ. ಅಗತ್ಯ ಬಿದ್ದರೆ ಮುಂಜಾಗ್ರತ ಕ್ರಮಕೈಗೊಳ್ಳುತ್ತೇವೆ. ಆರೋಗ್ಯ ಸಚಿವರು ಸಹ ಈಗಾಗಲೇ ಸಭೆ ನಡೆಸಿದ್ದಾರೆ. ಆದರೆ, ಸದ್ಯದ ಪರಿಸ್ಥಿತಿಯಲ್ಲಿ ಮೈಸೂರು ಕೇರಳ ಗಡಿ ಭಾಗದಲ್ಲಿ ಆರೋಗ್ಯ ಸಿಬ್ಬಂದಿ ಮೂಲಕ ತಪಾಸಣೆ ನಡೆಸುವ ಸೂಕ್ಷ್ಮತೆ ಇಲ್ಲ. ಹೀಗಾಗಿ ಸಾರ್ವಜನಿಕರು ಯಾವುದೇ ರೀತಿಯಲ್ಲಿ ಭಯಪಡುವ ಅಗತ್ಯವಿಲ್ಲ. ಸಾರ್ವಜನಿಕರು ಜ್ವರದ ಲಕ್ಷಣಗಳು ಕಂಡುಬಂದಲ್ಲಿ ಸ್ಥಳೀಯ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ಪರೀಕ್ಷೆ ಮಾಡಿಸಿಕೊಳ್ಳಬೇಕು ಹಾಗೂ ಆರೋಗ್ಯ ಇಲಾಖೆ ನೀಡುವ ಸೂಚನೆಗಳನ್ನ ಪಾಲಿಸಬೇಕಿದೆ ಎಂದರು.

ಜಿಲ್ಲೆಯಲ್ಲಿ ಈವರೆಗೂ ಕೊರೊನಾ ಆತಂಕ ಕಂಡುಬಂದಿಲ್ಲ. ಆದರೆ, ಆರೋಗ್ಯ ಇಲಾಖೆಯಿಂದ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಇದಕ್ಕಾಗಿ ಈಗಾಗಲೇ ತಾಲೂಕು ಆರೋಗ್ಯಾಧಿಕಾರಿಗಳ ಜತೆಗೆ ಸಭೆ ಮಾಡಲಾಗಿದೆ. ಅಲ್ಲದೇ ಗ್ರಾಮೀಣ ಭಾಗದಲ್ಲಿ ಜನರಿಗೆ ಜಾಗೃತಿ ಮೂಡಿಸುವ ಹಾಗೂ ಮುನ್ನೆಚ್ಚರಿಕೆ ವಹಿಸುವ ನಿಟ್ಟಿನಲ್ಲಿ ಜ್ವರ, ಕೆಮ್ಮು, ನೆಗಡಿ ಹೀಗೆ ಕೊರೊನಾ ಲಕ್ಷಣಗಳು ಕಂಡುಬಂದಲ್ಲಿ, ಕೂಡಲೇ ಸಮೀಪದ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಮಾಹಿತಿ ನೀಡುವಂತೆ ಆಶಾಕಾರ್ಯಕರ್ತೆಯರಿಗೆ ಸೂಚನೆ ನೀಡಲಾಗಿದೆ.

ಕೊರೊನಾ ಆತಂಕ ಇಲ್ಲದಿದ್ದರೂ, ಜಿಲ್ಲೆಯಲ್ಲಿ ಮುನ್ನೆಚ್ಚರಿಕೆಯಾಗಿ ಡ್ರೈ ರನ್ ನಡೆಸಲಾಗಿದೆ. ಈ ವೇಳೆ ಕೊರೊನಾ ಸೋಂಕಿಗೆ ಚಿಕಿತ್ಸೆ ನೀಡಲು ಅಗತ್ಯವಿರುವ ಆಕ್ಸಿಜನ್ ಸಿಲಿಂಡರ್‌ಗಳ ವ್ಯವಸ್ಥೆ, ಔಷಧಗಳು, ಪಿಪಿಇ ಕಿಟ್‌ಗಳ ಲಭ್ಯತೆ ಬಗ್ಗೆ ಪರಿಶೀಲನೆ ನಡೆಸಲಾಗಿದೆ. ಪ್ರಮುಖವಾಗಿ ತಾಲೂಕು ಆಸ್ಪತ್ರೆಗಳಲ್ಲಿ 8-10 ಬೆಡ್‌ಗಳನ್ನು ಮೀಸಲಿರಿಸಲು ಕ್ರಮವಹಿಸಲಾಗಿದೆ ಎಂದು ತಿಳಿಸಿದರು.

ನೆರೆಯ ಕೇರಳ ರಾಜ್ಯದಲ್ಲಿ ಕೊರೊನಾ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಗಡಿಭಾಗವಾಗಿರುವ ಎಚ್.ಡಿ.ಕೋಟೆಯಲ್ಲಿ ಹೆಚ್ಚಿನ ಮುಂಜಾಗ್ರತೆವಹಿಸಲಾಗಿದೆ. ಯಾವುದೇ ವ್ಯಕ್ತಿ ಗಡಿದಾಟಿ ಹೋದ ಅಥವಾ ಬಂದ ಸಂದರ್ಭದಲ್ಲಿ ಅವರ ಮನೆಗಳಿಗೆ ತೆರಳಿ ಅವರುಗಳ ಆರೋಗ್ಯದ ಬಗ್ಗೆ ಪರಿಶೀಲನೆ ನಡೆಸಿ, ಮಾಹಿತಿ ಪಡೆಯುವಂತೆ ಸ್ಥಳೀಯ ಆರೋಗ್ಯ ಸಿಬ್ಬಂದಿಗೆ ಸೂಚಿಸಲಾಗಿದೆ. ಮುಂಬರುವ ದಿನಗಳಲ್ಲಿ ಸಾಲು ಸಾಲು ರಜೆ ಇರುವ ಪರಿಣಾಮ ಮೈಸೂರಿಗೆ ಬರುವ ಪ್ರವಾಸಿಗರ ಸಂಖ್ಯೆಯೂ ಹೆಚ್ಚಾಗಲಿದ್ದು, ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಜಿಪಂ ಸಿಇಓ ಅವರ ನೇತೃತ್ವದಲ್ಲಿ ಶೀಘ್ರವೇ ಟಾಸ್ಕ್ ಫೋರ್ಸ್ ಸಭೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಮಾಹಿತಿ ನೀಡಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು