News Karnataka Kannada
Monday, April 29 2024
ಮೈಸೂರು

ಮೈಸೂರು: ಇಂದು ದಸರಾ ಗೋಲ್ಡ್​ ಕಾರ್ಡ್​ ಬಿಡುಗಡೆ

Dasara Gold Card Ticket Sold Out
Photo Credit : News Kannada

ಮೈಸೂರು: ನಾಡಹಬ್ಬ, ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2023ಕ್ಕೆ ಈಗಾಗಲೇ ಚಾಲನೆ ದೊರೆತಿದೆ. ಅರಮನೆ ನಗರಿಯಲ್ಲಿ ಸಂಭ್ರಮ ಮನೆ ಮಾಡಿದೆ.

ಈಗಾಗಲೆ ವಿವಿಧ ಕಾರ್ಯಕ್ರಮಗಳು ಆರಂಭವಾಗಿದೆ. ಅ.24ರ ವಿಜಯದಶಮಿಯಂದು ವಿಶ್ವವಿಖ್ಯಾತ ಜಂಬೂಸವಾರಿ ಮೆರವಣಿಗೆ ನಡೆಯಲಿದೆ. ದಸರಾ ಉತ್ಸವವನ್ನು ವೀಕ್ಷಿಸಲು ದೇಶ, ವಿದೇಶಗಳಿಂದ ಆಗಮಿಸುವ ಪ್ರವಾಸಿಗರು ಹಾಗೂ ಸಾರ್ವಜನಿಕರಿಗಾಗಿ ಗೋಲ್ಡ್​​ ಕಾರ್ಡ್​​​ ಸೌಲಭ್ಯವನ್ನು ಜಿಲ್ಲಾಡಳಿತ ಇಂದು (ಅ.18) ರಂದು ಬೆಳಗ್ಗೆ 10 ಗಂಟೆಗೆ ಬಿಡುಗಡೆ ಮಾಡಲಿದೆ.

ಜಿಲ್ಲಾಡಳಿತ ದಸರಾ ಗೋಲ್ಡ್​​ ಕಾರ್ಡ್​ಗೆ 6 ಸಾವಿರ ರೂ. ನಿಗದಿ ಮಾಡಿದೆ. ಗೋಲ್ಡ್​ ಕಾರ್ಡ್​ ಲಭ್ಯತೆ ಅನುಗುಣವಾಗಿದೆ ಆನ್‌ಲೈನ್ ಮೂಲಕ mysoredasara.gov.in ವೆಬ್‌ಸೈಟ್‌ನಲ್ಲಿ ಖರೀದಿಸಬಹುದಾಗಿದೆ. ಒಂದು ಬಾರಿಗೆ ಗರಿಷ್ಠ ಎರಡು ಗೋಲ್ಡ್​ ಕಾರ್ಡ್​ ಖರೀದಿಸಬಹುದು. ಅರಮನೆ ಆವರಣದೊಳಗೆ ದಸರಾ ಜಂಬೂಸವಾರಿ ವೀಕ್ಷಣೆಗೆ ಪ್ರತಿ ಟಿಕೆಟ್ ಬೆಲೆ 3 ಸಾವಿರ ರೂ. ಹಾಗೂ 2 ಸಾವಿರ ರೂ. ನಿಗದಿ ಮಾಡಲಾಗಿದೆ. ಬನ್ನಿಮಂಟಪದಲ್ಲಿ ಪಂಜಿನ ಕವಾಯಿತು ವೀಕ್ಷಣೆಗೆ 500 ರೂ. ನಿಗದಿಪಡಿಸಲಾಗಿದೆ ಎಂದು ಮೈಸೂರು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಮಾಹಿತಿ ನೀಡಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು