Categories: ಮೈಸೂರು

ಮೈಸೂರಿನಲ್ಲಿ ಮತದಾನದ ಪ್ರಮಾಣ ಹೆಚ್ಚಿಸಲು ಡಿಸಿ ಸೂಚನೆ

ಮೈಸೂರು: ಜಿಲ್ಲೆಯಲ್ಲಿ ಮತದಾನ ಪ್ರಮಾಣ ಕಡಿಮೆ ಇದ್ದು, ಮತದಾನ ಪ್ರಮಾಣ ಹೆಚ್ಚಳ ಮಾಡಲು ಅಗತ್ಯ ಸ್ವೀಪ್  ಚಟುವಟಿಕೆಗಳನ್ನು ಕೈಗೊಳ್ಳಿ ಎಂದು ಅಪರ ಮುಖ್ಯ ಚುನಾವಣಾಧಿಕಾರಿ ಕೂರ್ಮರಾವ್ ತಿಳಿಸಿದ್ದಾರೆ.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಸ್ವೀಪ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕಳೆದ  ವಿಧಾನಸಭಾ ಚುನಾವಣೆಯಲ್ಲಿ ಜಿಲ್ಲೆಯ ನಗರ ಪ್ರದೇಶದ ಕ್ಷೇತ್ರಗಳಾದ ಕೃಷ್ಣರಾಜ, ನರಸಿಂಹರಾಜ ಹಾಗೂ ಚಾಮರಾಜ ಕ್ಷೇತ್ರಗಳಲ್ಲಿ ಕಡಿಮೆ ಮತದಾನವಾಗಿದೆ. ಈ ಕ್ಷೇತ್ರಗಳ ಯಾವ ಮತಗಟ್ಟೆಗಳಲ್ಲಿ ಕಡಿಮೆ ಮತದಾನ ಆಗಿದೆ ಎಂಬುದನ್ನು ಗುರುತಿಸಿ ಆ ವ್ಯಾಪ್ತಿಯಲ್ಲಿ ಮತದಾನದ ಮಹತ್ವ ಕುರಿತು ಅರಿವು ಮೂಡಿಸಿ ಎಂದರು.

ಮತದಾನ ಕಡಿಮೆಯಾಗಲು ಕೆಲವರು ಬೇರೆ ಪ್ರದೇಶಗಳಿಗೆ ವಲಸೆ ಹೋಗಿರುತ್ತಾರೆ. ಅವರ ಹೆಸರನ್ನು ಅವರು ಇರುವ  ಮತಗಟ್ಟೆಗೆ ಫಾರಂ ೮ನ್ನು ನೀಡಿ ಶಿಫ್ಟ್ ಮಾಡಿಸಿಕೊಳ್ಳುವಂತೆ ಅರಿವು ಮೂಡಿಸಿ. ಇದರಿಂದ ಅವರು ಇರುವ ಕಡೆ ಮತದಾನ ಮಾಡಲು ಅನುಕೂಲವಾಗುತ್ತದೆ. ಚುನಾವಣಾ ಸಾಕ್ಷರತಾ ಕ್ಲಬ್‌ಗಳ ಮೂಲಕ ವ್ಯವಸ್ಥಿತ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಮತದಾನದ ಮಹತ್ವದ ಕುರಿತು ಜಾಗೃತಿ ಮೂಡಿಸಬೇಕು. ಮತದಾನದ ಮಹತ್ವ ಕುರಿತು ಒಂದು ನಿಮಿಷದ ಕಿರು ಚಿತ್ರಗಳ ಸ್ಪರ್ಧೆ ಆಯೋಜನೆ ಮಾಡಿ ಬಹುಮಾನ ನೀಡಿ. ಉತ್ತಮ ಕಿರು ಚಿತ್ರಗಳನ್ನು ಮತದಾನ ಜಾಗೃತಿಯಲ್ಲಿ ಬಳಸಿಕೊಳ್ಳಬೇಕು ಎಂದರು.

ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಎಂ.ಗಾಯತ್ರಿ ಮಾತನಾಡಿ, ಜಿಲ್ಲೆಯ ಶಾಲಾ ಕಾಲೇಜುಗಳಲ್ಲಿ  822 ಚುನಾವಣಾ ಸಾಕ್ಷರತಾ ಕ್ಲಬ್‌ಗಳನ್ನು ಸ್ಥಾಪಿಸಲಾಗಿದೆ. ಈ ಸಾಕ್ಷರತಾ ಕ್ಲಬ್‌ಗಳ ಮೂಲಕ ಮತದಾನ ಕುರಿತು ಜಾಥಾ, ಚಿತ್ರಕಲೆ ಸ್ಪರ್ಧೆ, ಭಾಷಣ ಸ್ಪರ್ಧೆ, ಪ್ರಬಂಧ ಸ್ಪರ್ಧೆಗಳನ್ನು ಆಯೋಜನೆ ಮಾಡಿ ಮತದಾನದ ಮಹತ್ವ ಕುರಿತು ಅರಿವು ಮೂಡಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.

Ashika S

Recent Posts

ಕಿಂಗ್ಸ್‌-ರಾಯಲ್ಸ್‌ ಕದನದಲ್ಲಿ ಕಲಾಶ್‌ನಿಕಾವೋ: ಕೊಹ್ಲಿ ಕೆಣಕಿ ಉಳಿದವರುಂಟೇ

ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ಆರ್‌ ಸಿ ಬಿ ತಂಡ ಪಂಜಾಬ್ ಕಿಂಗ್ಸ್ ಅನ್ನು 60 ರನ್‌ಗಳಿಂದ…

6 mins ago

ಭಾರೀ ಗಾಳಿ ಮಳೆಗೆ ಮನೆಯ ಗೇಟ್ ಬಿದ್ದು ಬಾಲಕಿ ಮೃತ್ಯು

ಮಳೆ ಜತೆಗೆ ರಭಸವಾಗಿ ಬೀಸಿದ ಬಿರುಗಾಳಿಗೆ ಮನೆಯ ಗೇಟ್ ಕಿತ್ತು ಬಂದಿದ್ದು, ಇದೇ ವೇಳೆ ಮನೆಯ ಮುಂದೆ ಆಟವಾಡುತ್ತಿದ್ದ 7…

10 mins ago

ʼಮೇ 18-19 ಹಳ್ಳಿಗಟ್ಟು ಬೋಡ್ ನಮ್ಮೆ: ಮೇ 11 ರಂದು ದೇವ ಕಟ್ಟ್ ಬೀಳುವುದುʼ

ಕೆಸರಿನ ಓಕುಳಿಯ ಹಬ್ಬವೆಂದು ಖ್ಯಾತಿ ಪಡೆದಿರುವ ಹಳ್ಳಿಗಟ್ಟು ಶ್ರೀ ಭದ್ರಕಾಳಿ ಹಾಗೂ ಶ್ರೀ ಗುಂಡಿಯತ್ ಅಯ್ಯಪ್ಪ ದೇವರ ವಾರ್ಷಿಕ ಬೋಡ್…

33 mins ago

ಪೂಜೆಗೆ ಅರಳಿ ಹೂವು ಬಳಕೆ ನಿಲ್ಲಿಸಲು ಟಿಡಿಬಿ ತೀರ್ಮಾನ

ಕೇರಳದ ತಿರುವಾಂಕೂರು ದೇವಸ್ಥಾನ ಆಡಳಿತ ಮಂಡಳಿಯು (ಟಿಡಿಬಿ) ತನ್ನ ಸುಪರ್ದಿಯಲ್ಲಿರುವ ದೇವಾಲಯಗಳಲ್ಲಿ ಪೂಜೆಗೆ ಅರಳಿ ಹೂವು (ಒಲಿಯಾಂಡರ್‌-ಕಣಗಿಲು ಜಾತಿಗೆ ಸೇರಿದ…

54 mins ago

50 ಕೋ. ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡ ಮಂತ್ರಿಮಾಲ್‌: ಬೀಗ ಜಡಿದ ಬಿಬಿಎಂಪಿ

ಸರಿ ಸುಮಾರು 50 ಕೋಟಿಗಿಂತ ಹೆಚ್ಚು ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವ ಬೆಂಗಳೂರಿನ ಪ್ರತಿಷ್ಠಿತ ಮಾಲ್‌ಗೆ ಬಿಬಿಎಂಪಿ ಬೆಳ್ಳಂಬೆಳಗ್ಗೆಯೇ  ಬೀಗ…

60 mins ago

ಆಟವಾಡುತ್ತಿದ್ದ ಮಗುವಿಗೆ ಕಚ್ಚಿದ ಬೀದಿ ನಾಯಿ : ಮಹಾನಗರ ಪಾಲಿಕೆ ವಿರುದ್ಧ ಆಕ್ರೋಶ

ಆಟವಾಡುತ್ತಿದ್ದ ಮಕ್ಕಳ ಮೇಲೆ ಎರಗಿ ಬೀದಿ ನಾಯಿಗಳು ಕಚ್ಚಿದ ಘಟನೆ ಬೆಳಗಾವಿ ನ್ಯೂ ಗಾಂಧಿನಗರದಲ್ಲಿ ನಡೆದಿದೆ.

1 hour ago