News Karnataka Kannada
Saturday, April 13 2024
Cricket
ಮೈಸೂರು

ನಂಜನಗೂಡು: ವಿದ್ಯುತ್ ಸ್ಪರ್ಶಿಸಿ ಯುವ ಕಾರ್ಮಿಕ ಸಾವು

ವಿದ್ಯುತ್ ಸ್ಪರ್ಶಿಸಿ ಯುವ ಕಾರ್ಮಿಕ ಸಾವನ್ನಪ್ಪಿರುವ ಘಟನೆ ನಂಜನಗೂಡು ತಾಲ್ಲೂಕಿನ ಇಮ್ಮಾವು ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ.
Photo Credit : News Kannada

ನಂಜನಗೂಡು: ವಿದ್ಯುತ್ ಸ್ಪರ್ಶಿಸಿ ಯುವ ಕಾರ್ಮಿಕ ಸಾವನ್ನಪ್ಪಿರುವ ಘಟನೆ ನಂಜನಗೂಡು ತಾಲ್ಲೂಕಿನ ಇಮ್ಮಾವು ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ.

23 ವರ್ಷದ ಸುಜನ್ ರಾವ್ ಮೃತ ಯುವ ಕಾರ್ಮಿಕನಾಗಿದ್ದಾನೆ. ಪಶ್ಚಿಮ ಬಂಗಾಳದ ಮೂಲದ ವ್ಯಕ್ತಿಯಾಗಿದ್ದು ಇಮ್ಮಾವು ಕೈಗಾರಿಕಾ ಪ್ರದೇಶದಲ್ಲಿರುವ ರಿಷಿ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ.

ಕಾರ್ಖಾನೆಯ ಕಾರ್ಮಿಕರ ವಸತಿ ನಿಲಯದಲ್ಲಿ ವಿದ್ಯುತ್ ಕಂಬವನ್ನು ಸ್ಪರ್ಶಿಸಿ ಸ್ಥಳದಲ್ಲಿಯೇ ಯುವಕ ಸಾವನಪ್ಪಿದ್ದಾನೆ.
ವಿಷಯ ತಿಳಿದು ಸ್ಥಳಕ್ಕೆ ನಂಜನಗೂಡು ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕೂಡಲೇ ಮೈಸೂರಿನ ಕೆ.ಆರ್ ಆಸ್ಪತ್ರೆಗೆ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ರವಾನಿಸಿದ್ದಾರೆ. ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಕುಟುಂಬಸ್ಥರಿಗೆ ಶವವನ್ನು ರವಾನೆ ಮಾಡಲಾಗುತ್ತದೆ. ಈ ಸಂಬಂಧ ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು