ನಂಜನಗೂಡು: ನಾಯಿಗಳ ದಾಳಿಗೆ ಜಿಂಕೆಯೊಂದು ಬಲಿಯಾಗಿರುವ ಘಟನೆ ನಂಜನಗೂಡು ತಾಲ್ಲೂಕಿನ ಏಚಗುಂಡ್ಲ ಗ್ರಾಮದಲ್ಲಿ ನಡೆದಿದೆ.
ಇಂದು ಶುಕ್ರವಾರ ಬೆಳಿಗ್ಗೆ 10:30 ರ ಸಮಯದಲ್ಲಿ ಕಾಡಿನಿಂದ ನಾಡಿಗೆ ಬಂದಿದ್ದ ಜಿಂಕೆಯನ್ನು ನಾಯಿಗಳು ಅಟ್ಟಾಡಿಸಿಕೊಂಡು ಬೇಟೆಯಾಡಿವೆ. ಆಹಾರ ಹುಡುಕುತ್ತಾ ಬಂದ ಜಿಂಕೆಯ ಮೇಲೆ ನಾಯಿಗಳು ಏಕಾಏಕಿ ದಾಳಿ ನಡೆಸಿ, ಜಿಂಕೆಯ ಕತ್ತು ಮತ್ತು ತೊಡೆಯ ಭಾಗಕ್ಕೆ ಕಚ್ಚಿ ಗಾಯಗೊಳಿಸಿ, ಬಲಿ ತೆಗೆದುಕೊಂಡಿವೆ.
ಸ್ಥಳೀಯ ರೈತರೊಬ್ಬರು ನಾಯಿಗಳನ್ನು ಓಡಿಸಿ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿಯನ್ನು ತಿಳಿಸಿದ್ದಾರೆ.
ಸ್ಥಳಕ್ಕೆ ವಲಯ ಅರಣ್ಯ ಅಧಿಕಾರಿ ನಿತಿನ್ ಕುಮಾರ್ ಮತ್ತು ಅರಣ್ಯ ಇಲಾಖೆಯ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಸುಮಾರು ಎರಡುವರೆ ವರ್ಷದ ಹೆಣ್ಣು ಜಿಂಕೆಯಾಗಿದ್ದು, ಮರಣೋತ್ತರ ಪರೀಕ್ಷೆ ನಡೆಸಲಾಗುತ್ತದೆ ಎಂದು ವಲಯ ಅರಣ್ಯಾಧಿಕಾರಿ ನಿತೀನ್ ಕುಮಾರ್ ತಿಳಿಸಿದ್ದಾರೆ.