News Karnataka Kannada
Tuesday, April 16 2024
Cricket
ಮೈಸೂರು

ಸಂಸದ ಪ್ರತಾಪ್‌ಸಿಂಹ ಅವರಿಗೆ ಟಿಕೆಟ್ ನೀಡಲು ಆಗ್ರಹ

ಸಂಸದ ಪ್ರತಾಪ್‌ಸಿಂಹ ಅವರು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ ತಮ್ಮ ಅವಧಿಯಲ್ಲಿ ಉತ್ತಮ ಅಭಿವೃದ್ಧಿ ಕೆಲಸ ಮಾಡಿದ್ದಾರೆ. ಆದರೂ ಕೆಲವರು ಈ ಬಾರಿಯ ಚುನಾವಣೆ ವೇಳೆ ಇವರ ಬದಲಿಗೆ ರಾಜವಂಶಸ್ಥ ಯದುವೀರ್ ಅವರನ್ನು ಕಣಕ್ಕಿಳಿಸಲು ಬಿಜೆಪಿ ಒಲವು ತೋರಿದೆ ಎಂಬ ವದಂತಿಗಳನ್ನು ಹಬ್ಬಿಸುತ್ತಿದ್ದಾರೆ ಎಂದು ವಿವಿಧ ಒಕ್ಕಲಿಗ ಸಂಘ ಸಂಸ್ಥೆಗಳ ಮುಖಂಡರು ಜಿಲ್ಲಾ ಪತ್ರಕರ್ತರ ಭವನದಲ್ಲಿ ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಕಿಡಿಕಾರಿದರು.
Photo Credit : News Kannada

ಮೈಸೂರು: ಸಂಸದ ಪ್ರತಾಪ್‌ಸಿಂಹ ಅವರು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ ತಮ್ಮ ಅವಧಿಯಲ್ಲಿ ಉತ್ತಮ ಅಭಿವೃದ್ಧಿ ಕೆಲಸ ಮಾಡಿದ್ದಾರೆ. ಆದರೂ ಕೆಲವರು ಈ ಬಾರಿಯ ಚುನಾವಣೆ ವೇಳೆ ಇವರ ಬದಲಿಗೆ ರಾಜವಂಶಸ್ಥ ಯದುವೀರ್ ಅವರನ್ನು ಕಣಕ್ಕಿಳಿಸಲು ಬಿಜೆಪಿ ಒಲವು ತೋರಿದೆ ಎಂಬ ವದಂತಿಗಳನ್ನು ಹಬ್ಬಿಸುತ್ತಿದ್ದಾರೆ ಎಂದು ವಿವಿಧ ಒಕ್ಕಲಿಗ ಸಂಘ ಸಂಸ್ಥೆಗಳ ಮುಖಂಡರು ಜಿಲ್ಲಾ ಪತ್ರಕರ್ತರ ಭವನದಲ್ಲಿ ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಕಿಡಿಕಾರಿದರು.

ಮೊದಲಿಗೆ ನಮ್ಮೂರು ನಮ್ಮೋರು ಸಮಾಜ ಸೇವಾ ಟ್ರಸ್ಟ್‌ನ ಸತೀಶ್ ಬೀಡನಹಳ್ಳಿ ಮಾತನಾಡಿ, ಚುನಾವಣೆ ವೇಳೆ ಈ ಲೋಕಸಭಾ ಕ್ಷೇತ್ರದಿಂದ ಬಿಜೆಪಿಯಿಂದ ಪ್ರತಾಪ್‌ಸಿಂಹ ಅವರನ್ನು ಹೊರತು ಪಡಿಸಿ ಬೇರೆಯವರಿಗೆ ಟಿಕೆಟ್ ನೀಡಬೇಕೆಂಬುದಕ್ಕೆ ನಮ್ಮ ವಿರೋಧವಿದೆ. ಈ ರೀತಿಯ ಬೇಡಿಕೆಗಳು ಒಕ್ಕಲಿಗ ಸಮುದಾಯದ ತಾಳ್ಮೆ ಕೆಣಕುವ ಕೆಲಸವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಸಂಸದ ಪ್ರತಾಪ್‌ಸಿಂಹ ಬೆಂಗಳೂರು ನಂತರ ಮೈಸೂರನ್ನು ಅಚ್ಚುಕಟ್ಟಾಗಿ ಅಭಿವೃದ್ಧಿಗೊಳಿಸಿದ್ದಾರೆ. ಇದಕ್ಕಾಗಿ ಹಲವಾರು ಯೋಜನೆ ತಂದಿದ್ದು, ಈಗಲೂ ಶ್ರಮಿಸುತ್ತಿದ್ದಾರೆ. ಹೀಗಾಗಿ ಒಂದು ವೇಳೆ ಬಿಜೆಪಿ ಟಿಕೆಟ್ ನೀಡದಿದ್ದಲ್ಲಿ ಈ ಭಾಗದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿರುವ ಒಕ್ಕಲಿಗ ಸಮುದಾಯ ದಿಟ್ಟ ನಿರ್ಧಾರ ಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದರು.

ವಿವಿಧ ಒಕ್ಕಲಿಗ ಸಂಘ ಸಂಸ್ಥೆ ಮುಖಂಡರಾದ ಎನ್.ರಾಜ್‌ಕುಮಾರ್, ಚೇತನ್, ರವಿಕುಮಾರ್, ಅಣ್ಣೇಗೌಡ, ಪ್ರೇಮ ಶಂಕರಲಿಂಗೇಗೌಡ, ಗಂಗಾಧರ್, ರವಿ ಹಾಗೂ ಜಗದೀಶ್ ಮತ್ತಿತರರು ಇದ್ದರು.

ಕೊಡವ ಸಮಾಜ ಆಗ್ರಹ: ಈ ಬಾರಿಯ ಲೋಕಸಭಾ ಚುನಾವಣೆ ವೇಳೆ ಸಂಸದ ಪ್ರತಾಪ್‌ಸಿಂಹ ಅವರಿಗೇ ಬಿಜೆಪಿ ಟಿಕೆಸ್ ನೀಡಬೇಕೆಂದು ನಗರದ ವಿಜಯನಗರದಲ್ಲಿನ ಕೊಡವ ಸಮಾಜ ಸಹಾ ಆಗ್ರಹಿಸಿದೆ.

ಈ ಕುರಿತು ಜಿಲ್ಲಾ ಪತ್ರಕರ್ತರ ಭವನದಲ್ಲಿ ಮುಖಂಡ ಕೆ.ಮುತ್ತಪ್ಪ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಳೆದೆರಡು ದಿನಗಳಿಂದ ಮಾಧ್ಯಮಗಳಲ್ಲಿ ಈ ಬಾರಿ ಪ್ರತಾಪ್‌ಸಿಂಹ ಅವರಿಗೆ ಬಿಜೆಪಿ ಟಿಕೆಟ್ ನೀಡುವುದಿಲ್ಲ ಎಂಬ ಸುದ್ದಿಗಳು ಪ್ರಸಾರವಾಗುತ್ತಿರುವುದು ಸರಿಯಲ್ಲ. ಬಿಜೆಪಿ ಇವರಿಗೆ ಟಿಕೆಟ್ ನಿರಾಕರಿಸಿಲ್ಲ. ಈ ನಡುವೆ ಇವರು ಸಾಕಷ್ಟು ಶ್ರಮಿಸಿ ಕ್ಷೇತ್ರವನ್ನು ಅಬಿವೃದ್ಧಿಗೊಳಿಸಿದ್ದಾರೆ. ಆದರೂ ಸುಳ್ಳು ವದಂತಿಗಳನ್ನು ಹಬ್ಬಿಸಲಾಗುತ್ತಿದೆ. ಒಂದು ವೇಳೆ ಇವರಿಗೆ ಟಿಕೆಟ್ ನೀಡದಿದ್ದಲ್ಲಿ ಕ್ಷೇತ್ರದಲ್ಲಿ ನಿರ್ಣಾಯಕ ಸಂಖ್ಯೆಯಲ್ಲಿರುವ ಸ್ಥಳೀಯ ಮತದಾರರು ದಿಟ್ಟ ನಿರ್ಧಾರ ಕೈಗೊಳ್ಳಲಿದ್ದಾರೆಂದರು.

ಪದಾಧಿಕಾರಿಗಳಾದ ಪೊಂಜಂಡ ಗಣಪತಿ, ವೇದಿತ್ ಉತ್ತಯ್ಯ, ಲೌಲಿ ಅಪ್ಪಯ್ಯ ಹಾಗೂ ಇನ್ನಿತರರು ಇದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು