ಮೈಸೂರು

ಮೈಸೂರಿನಲ್ಲಿ ಹೆಚ್ಚುತ್ತಿರುವ ಡೆಂಗ್ಯೂ ಜ್ವರ: ಜನರಿಗೆ ಆತಂಕ

ಮೈಸೂರು: ಜಿಲ್ಲೆಯಲ್ಲಿ ಡೆಂಗ್ಯೂ ಜ್ವರದ ಆರ್ಭಟ ಜೋರಾಗಿದ್ದು, ಸೋಂಕಿತರ ಸಂಖ್ಯೆ 291ಕ್ಕೆ ಏರಿಕೆಯಾಗಿದ್ದು, ಸದ್ಯ ಡೆಂಗ್ಯೂ ಹೆಚ್ಚಳದಲ್ಲಿ ರಾಜ್ಯದಲ್ಲಿ ಮೈಸೂರು ಎರಡನೇ ಸ್ಥಾನದಲ್ಲಿದೆ.

ಡೆಂಗ್ಯೂನಿಂದ ಬಳಲುತ್ತಿರುವವರ ಸಂಖ್ಯೆ ಕಳೆದ ಒಂದು ತಿಂಗಳಲ್ಲೇ ಹೆಚ್ಚಾಗಿದ್ದು, ಈ ಕುರಿತು ಸಾರ್ವಜನಿಕರು ಎಚ್ಚರಿಕೆ ವಹಿಸಬೇಕಿದೆ. ಜೂನ್ ತಿಂಗಳ ಅವಧಿಯಲ್ಲಿ 68, ಜುಲೈ ತಿಂಗಳಲ್ಲಿ ಇಲ್ಲಿಯವರೆಗೆ 49 ಪ್ರಕರಣ ದಾಖಲಾಗಿವೆ. ಜನವರಿ 1ರಿಂದ ಇಲ್ಲಿಯವರೆಗೆ ಒಟ್ಟು ಸೋಂಕಿತರ ಸಂಖ್ಯೆ 291ಕ್ಕೆ ಏರಿದೆ. ಆದರೆ, ಆರೋಗ್ಯ ಇಲಾಖೆ ಅಧಿಕಾರಿಗಳ ಮುನ್ನೆಚ್ಚರಿಕೆಯಿಂದಾಗಿ ಯಾವುದೇ ಸಾವು ಸಂಭವಿಸಿಲ್ಲ. ಜಿಲ್ಲೆಯಲ್ಲಿ ಈವರೆಗೆ 3,070 ಜನರ ರಕ್ತ ಮಾದರಿ ಸಂಗ್ರಹಿಸಿ ಪರೀಕ್ಷೆ ಮಾಡಲಾಗಿದೆ.

2018ನೇ ಸಾಲಿನಲ್ಲಿ ಜಿಲ್ಲೆಯಲ್ಲಿ 600ಕ್ಕೂ ಹೆಚ್ಚು ಡೆಂಗ್ಯೂ ಪ್ರಕರಣಗಳು ದಾಖಲಾಗಿದ್ದವು. 2017ನೇ ಸಾಲಿನಲ್ಲಿ ಜಿಲ್ಲೆಯಲ್ಲಿ 843 ಡೆಂಗ್ಯೂ ಪ್ರಕರಣಗಳು ಪತ್ತೆಯಾಗಿದ್ದವು. ಇದೇ ಈವರೆಗಿನ ಜಿಲ್ಲೆಯ ದಾಖಲೆಯಾಗಿದೆ. 2021ರಲ್ಲಿ 182 ಪ್ರಕರಣಗಳು ಕಂಡುಬಂದಿದ್ದವು. 2022ರಲ್ಲಿ 789 ಡೆಂಘೆ ಪ್ರಕರಣ ವರದಿಯಾಗಿತ್ತು. ಆ ವೇಳೆ ಆಗಸ್ಟ್, ಸೆಪ್ಟೆಂಬರ್, ಅಕ್ಟೋಬರ್ ತಿಂಗಳಲ್ಲಿಯೂ ಹೆಚ್ಚು ಪ್ರಕರಣಗಳು ವರದಿಯಾಗಿದ್ದವು. ಇದೀಗ ಜೂನ್, ಜುಲೈ ತಿಂಗಳ 45 ದಿನಗಳ ಅವಧಿಯಲ್ಲೇ 117 ಪ್ರಕರಣ ದಾಖಲಾಗಿರುವುದು ಆತಂಕಕ್ಕೆ ಕಾರಣವಾಗಿದೆ.

ಡಿಸೆಂಬರ್ ತಿಂಗಳಲ್ಲಿ ಕೊಂಚ ಮಳೆಯಾದ ಪರಿಣಾಮ ಜನವರಿಯಲ್ಲಿ ಹೆಚ್ಚು ಡೆಂಗ್ಯೂ ಪ್ರಕರಣ ವರದಿಯಾಗಿವೆ. ಜನವರಿಯಲ್ಲಿ 30 ಜನರಿಗೆ ಕಾಣಿಸಿಕೊಂಡಿತ್ತು. ಬಳಿಕ ಪ್ರತಿ ತಿಂಗಳು ಸರಾಸರಿ 20 ರಿಂದ 25 ಪ್ರಕರಣಗಳು ವರದಿಯಾಗಿವೆ. ಬಳಿಕ ಮಳೆಯಾದ ಕಾರಣ ಜೂನ್, ಜುಲೈನಲ್ಲಿ ಪ್ರಕರಣ ಹೆಚ್ಚಾಗಿವೆ. ಮನೆ ಸುತ್ತಮುತ್ತ ಮಳೆ ನೀರು ಮಡುಗಟ್ಟಿ ನಿಂತು ಡೆಂಗ್ಯೂ ಹರಡುವ ಈಡೀಸ್ ಸೊಳ್ಳೆಗಳು ಸಾಕಷ್ಟು ಪ್ರಮಾಣದಲ್ಲಿ ಉತ್ಪತ್ತಿಯಾಗಿವೆ. ಮಳೆಗಾಲ ಇನ್ನೂ ಇರುವುದರಿಂದ ಡೆಂಗ್ಯೂ ಆರ್ಭಟ ಇನ್ನೂ ಮೂರು ತಿಂಗಳ ಕಾಲ ಕಾಡಲಿದೆ. ಹಾಗಾಗಿ ಆರೋಗ್ಯ ಇಲಾಖೆ ಹಾಗೂ ಸಾರ್ವಜನಿಕರು ಎಚ್ಚರ ವಹಿಸಬೇಕಿದೆ.

ಈ ಬಾರಿ ಹುಣಸೂರು ತಾಲೂಕು ಮತ್ತು ಮೈಸೂರು ನಗರದಲ್ಲಿಯೇ ಹೆಚ್ಚಾಗಿ ಡೆಂಗ್ಯೂ ಪ್ರಕರಣ ಕಂಡುಬಂದಿರುವುದು ವರದಿಯಾಗಿದೆ. ಹುಣಸೂರು ತಾಲೂಕಿನಲ್ಲಿ 3,070 ಜನರ ರಕ್ತ ಮಾದರಿ ಸಂಗ್ರಹಿಸಿ ಪರೀಕ್ಷೆ ಮಾಡಲಾಗಿದ್ದು, ಈ ಪೈಕಿ 89 ಡೆಂಗ್ಯೂ ಪ್ರಕರಣ ವರದಿಯಾಗಿದೆ. ಮೈಸೂರು ನಗರದಲ್ಲಿ 836 ಜನರ ರಕ್ತ ಮಾದರಿ ಪರೀಕ್ಷೆ ಪೈಕಿ 78 ಡೆಂಗ್ಯೂ ಪ್ರಕರಣ ವರದಿಯಾಗಿವೆ. ನಗರದ ಬಹುತೇಕ ಎಲ್ಲ ಬಡಾವಣೆಯಲ್ಲೂ ಡೆಂಗ್ಯೂ ಪ್ರಕರಣ ವರದಿಯಾಗಿದೆ. ಈ ಹಿಂದಿನ ವರ್ಷದಗಳಲ್ಲಿ ಹೆಚ್ಚಾಗಿ ಡೆಂಗ್ಯೂ ಕಾಣಿಸಿಕೊಂಡಿದ್ದ ರಾಮಕೃಷ್ಣನಗರ, ಸರಸ್ವತಿಪುರಂ, ಜನತಾನಗರ, ಹೆಬ್ಬಾಳು, ಕುವೆಂಪುನಗರದಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳ ಮುನ್ನೆಚ್ಚರಿಕೆಯಿಂದಾಗಿ ಈ ಬಾರಿ ಡೆಂಗ್ಯೂ ನಿಯಂತ್ರಣಕ್ಕೆ ಬಂದಿರುವುದು ಖುಷಿಯ ಸಂಗತಿಯಾಗಿದೆ. ಈ ಪ್ರದೇಶಗಳಲ್ಲಿ ಆರೋಗ್ಯ ಇಲಾಖೆ ವತಿಯಿಂದ ನಡೆದ ಅರಿವು ಕಾರ್ಯಕ್ರಮಗಳಿಂದ ಇದು ಸಾಧ್ಯವಾಗಿದೆ.

ಮೈಸೂರು ನಗರ ಮತ್ತು ಹುಣಸೂರು ಬಿಟ್ಟರೆ ಜುಲೈ 15ರವರೆಗಿನ ಮಾಹಿತಿ ಪ್ರಕಾರ ಮೈಸೂರು ತಾಲೂಕಿನಲ್ಲಿ 30, ತಿ.ನರಸೀಪುರ ತಾಲೂಕಿನಲ್ಲಿ 9, ನಂಜನಗೂಡು ತಾಲೂಕಿನಲ್ಲಿ 14, ಎಚ್.ಡಿ.ಕೋಟೆ ತಾಲೂಕಿನಲ್ಲಿ 20, ಪಿರಿಯಾಪಟ್ಟಣ ತಾಲೂಕಿನಲ್ಲಿ 12 ಹಾಗೂ ಕೆ.ಆರ್.ನಗರ ತಾಲೂಕಿನಲ್ಲಿ 28 ಡೆಂಘೆ ಪ್ರಕರಣಗಳು ಕಂಡುಬಂದಿವೆ. ಡೆಂಗ್ಯೂ ಪ್ರಕರಣಗಳ ಪೈಕಿ ಮೈಸೂರು ಜಿಲ್ಲೆ ಇಡೀ ರಾಜ್ಯದಲ್ಲಿ ಎರಡನೇ ಸ್ಥಾನದಲ್ಲಿದೆ. ಬೆಂಗಳೂರು ನಗರ ಪ್ರಥಮ ಸ್ಥಾನದಲ್ಲಿದೆ.

Gayathri SG

Recent Posts

ಜೂ.14 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ-2 ಪ್ರಾರಂಭ

ಮೇ.15 ರಿಂದ ಆರಂಭವಾಗಿದ್ದ ಎಸ್​ಎಸ್​ಎಲ್​ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು‌ ರಾಜ್ಯ…

5 hours ago

ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಡಿಕ್ಕಿ: ಮೂವರ ದುರ್ಮರಣ

ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್​ನಲ್ಲಿ ಮನೆಗೆ ಹೋಗುವಾಗ ​ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…

6 hours ago

ಬೀದರ್: ನರೇಗಾ ಕಾಮಗಾರಿ ಪರಿಶೀಲಿಸಿದ ಉಪ ಕಾರ್ಯದರ್ಶಿ

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…

6 hours ago

ಮನಿ ಲಾಂಡರಿಂಗ್ ಪ್ರಕರಣ: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಆಲಂಗೀರ್ ಆಲಂ

ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್​ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…

6 hours ago

ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಕಾಲಕ್ಕೆ ಸಿಗದ ಔಷಧ: ಸಾರ್ವಜನಿಕರ ಆಕ್ರೋಶ

ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…

7 hours ago

ಪದವೀಧರರ ಸಮಸ್ಯೆಗೆ ಸ್ಪಂದಿಸಿದ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ: ಡಾ. ಶಿಂಧೆ

ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…

7 hours ago