ಮೈಸೂರು

ಮೈಸೂರಿನಲ್ಲಿ ತಾರಕಕ್ಕೇರಿದ ಅಭಿವೃದ್ಧಿ ಚರ್ಚೆ ವಿಚಾರ

ಮೈಸೂರು: ಮೈಸೂರು ಅಭಿವೃದ್ಧಿಯ ವಿಚಾರವಾಗಿ ಸಂಸದ ಪ್ರತಾಪ್‌ಸಿಂಹ ಅವರೊಂದಿಗೆ ಚರ್ಚೆ ನಡೆಸಲು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಪ್ರಯತ್ನ ಮಂಗಳವಾರ ಮತ್ತೊಮ್ಮೆ ಭಗ್ನಗೊಂಡಿದೆಯಾದರೂ ಇದು ಎಲ್ಲಿಗೆ ಹೋಗಿ ಮುಟ್ಟುತ್ತದೆಯೋ ಗೊತ್ತಿಲ್ಲ.

ನಗರದ ಇಂದಿರಾಗಾಂಧಿ ಕಾಂಗ್ರೆಸ್ ಭವನದಿಂದ ಎರಡು ಕತ್ತೆಗಳು ಹಾಗೂ ಎರಡು ಹಂದಿಗಳ ಜತೆಗೆ ಲಕ್ಷ್ಮಣ್ ಅವರು, ಮಾಜಿ ಸಿಎಂ ಸಿದ್ದರಾಮಯ್ಯ ಆಡಳಿತ ಅವಧಿಯಲ್ಲಿ ಆಗಿರುವ ಅಭಿವೃದ್ಧಿ ಕಾರ್ಯಗಳ ಪಟ್ಟಿ ಇರುವ ಕಡತವೊಂದನ್ನು ಕೈಯಲ್ಲಿ ಹಿಡಿದುಕೊಂಡು ಮೆರವಣಿಗೆ ಪ್ರಾರಂಭಿಸಿದರು. ಲಕ್ಷ್ಮಣ್ ಅವರೊಂದಿಗೆ ಕೆಪಿಸಿಸಿ ಮೈಸೂರು ಜಿಲ್ಲಾ ಗ್ರಾಮಾಂತರ ಅಧ್ಯಕ್ಷ ಡಾ.ಬಿ.ಜೆ.ವಿಜಯಕುಮಾರ್, ನಗರಾಧ್ಯಕ್ಷ ಆರ್.ಮೂರ್ತಿ, ಪ್ರಧಾನ ಕಾರ್ಯದರ್ಶಿ ಭಾಸ್ಕರ್ ಎಲ್.ಗೌಡ, ಮಾಜಿ ಮಹಾಪೌರ ಅಯೂಬ್‌ಖಾನ್ ಮತ್ತಿತರರು ಜೊತೆಗೂಡಿದ್ದರು. ಜೆಎಲ್‌ಬಿ ರಸ್ತೆಯ ಮೂಲಕ ದಾಸಪ್ಪ ಸರ್ಕಲ್ ತನಕ ಮೆರವಣಿಗೆ ಹೊರಟಿತು. ಅಲ್ಲಿ ಬ್ಯಾರಿಕೇಡ್ ಹಾಕಿಕೊಂಡು ನಿಂತಿದ್ದ ಪೊಲೀಸರು ಮೆರವಣಿಗೆಗೆ ತಡೆಯೊಡ್ಡಿದರು.

ಆಗ ಕಾಂಗ್ರೆಸ್ ನಗರಾಧ್ಯಕ್ಷ ಆರ್.ಮೂರ್ತಿ ಮಾತನಾಡಿ, ನಾವು ಯಾರು ಸಂಸದರ ಕಚೇರಿಗೆ ಮೆರವಣಿಗೆ ಹೋಗುವುದಿಲ್ಲ. ಲಕ್ಷ್ಮಣ್ ಒಬ್ಬರೇ ಹೋಗುತ್ತಾರೆ. ತಾವೇನು ನಿಷೇಧಾಜ್ಞೆ ಜಾರಿಗೊಳಿಸಿಲ್ಲ. ಆದ್ದರಿಂದ ಮೆರವಣಿಗೆ ಹೋಗಬಹುದಲ್ಲ ಎಂದು ಪೊಲೀಸರನ್ನು ಪ್ರಶ್ನಿಸಿದರು. ಈ ವಿಚಾರವಾಗಿ ಕೆಲ ಕಾಲ ಮಾತಿನ ಚಕಮಕಿ ನಡೆಯಿತು.

ಈ ಮಧ್ಯೆ ಮಾಜಿ ಮೇಯರ್ ಅಯೂಬ್‌ಖಾನ್ ಮಾತನಾಡಿ, ಲಕ್ಷ್ಮಣ್ ಅವರೇನೂ ಬಾಂಬ್ ಕಟ್ಟಿಕೊಂಡು ಹೋಗುತ್ತಿಲ್ಲ. ಸಿದ್ದರಾಮಯ್ಯ ಅವರ ಅಭಿವೃದ್ಧಿ ಕೆಲಸಗಳ ಪಟ್ಟಿ ತೆಗೆದುಕೊಂಡು ಹೋಗುತ್ತಿದ್ದಾರೆ. ಅವರೊಬ್ಬರನ್ನು ಬಿಡಿ ಎಂದರು. ಇದಕ್ಕೆ ಒಪ್ಪದ ಪೊಲೀಸರು ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುತ್ತದೆ. ನಾವು ಅನುಮತಿ ಕೊಡುವುದಿಲ್ಲ. ನೀವು ಬೇಕಿದ್ದರೆ ತಟಸ್ಥ ಸ್ಥಳದಲ್ಲಿ ಚರ್ಚೆ ಮಾಡಿಕೊಳ್ಳಿ ಎಂದರು. ಕೊನೆಗೆ ಲಕ್ಷ್ಮಣ್ ಅವರನ್ನು ವಶಕ್ಕೆ ಪಡೆದ ಪೊಲೀಸರು, ವಾಹನದಲ್ಲಿ ಕುಳ್ಳಿರಿಸಿದರು.

ಮತ್ತೆ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಪೊಲೀಸರ ಮಧ್ಯೆ ಮಾತಿನ ಚಕಮಕಿ ನಡೆಯಿತು. ಕೆಲ ಕಾಲದ ಬಳಿಕ ಲಕ್ಷ್ಮಣ್ ಅವರನ್ನು ವಾಹನದಿಂದ ಕೆಳಗಿಳಿಸಲಾಯಿತು. ಪೊಲೀಸರು ಬ್ಯಾರಿಕೇಡ್‌ಗಳನ್ನು ತೆರವುಗೊಳಿಸಿದರು. ದಾಸಪ್ಪ ಸರ್ಕಲ್‌ನಲ್ಲಿ ಬಂದ್ ಮಾಡಿದ ಟ್ರಾಫಿಕ್ ಅನ್ನು ತೆರವುಗೊಳಿಸಿ ವಾಹನಗಳ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು.

Gayathri SG

Recent Posts

ದುರಸ್ತಿ ಮಾಡಿ ವಾರ ಕಳೆಯುವ ಮೊದಲೇ ಕಿತ್ತು ಬಂದ ರಸ್ತೆ

ಪಟ್ಟಣದ ಬಸವಕಲ್ಯಾಣ-ಭಾಲ್ಕಿ ಮುಖ್ಯ ರಸ್ತೆ ಸಂಪೂರ್ಣ ಕೆಟ್ಟು ಹೋಗಿದೆ. ವಾರದ ಹಿಂದೆ ರಸ್ತೆ ದುರಸ್ತಿ ಕಾಮಗಾರಿ ಮಾಡಲಾಗಿದ್ದು, ವಾರ ಕಳೆಯುವ…

6 mins ago

ಬಿರುಗಾಳಿ ಸಹಿತ ಮಳೆಗೆ ಕಬ್ಬಿಣದ ಬಸವ ಮಹಾದ್ವಾರ ಕುಸಿತ

ಭಾಲ್ಕಿ ತಾಲ್ಲೂಕಿನ ಭಾತಂಬ್ರಾ ಗ್ರಾಮದ ಬಸವ ಮಹಾದ್ವಾರ ಗುರುವಾರ ಸುರಿದ ಬಿರುಗಾಳಿ ಸಹಿತ ಮಳೆಗೆ ಕುಸಿದು ಬಿದ್ದಿದೆ. ಅದೃಷ್ಟವಶಾತ್ ಯಾವುದೇ…

18 mins ago

ನೂರಕ್ಕೆ ನೂರು ‘ಇಂಡಿಯಾ’ ಮೈತ್ರಿಗೆ ಅಧಿಕಾರ: ಈಶ್ವರ ಖಂಡ್ರೆ

'ದೇಶದಲ್ಲಿ ಈ ಸಲ 'ಇಂಡಿಯಾ' ಒಕ್ಕೂಟ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ' ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ…

23 mins ago

ನಾನು ಶೀಘ್ರದಲ್ಲೇ ಪಾಕಿಸ್ತಾನಕ್ಕೆ ಭೇಟಿ ನೀಡುತ್ತೇನೆ ಎಂದ ವಿರಾಟ್​​ ಕೊಹ್ಲಿ

ವಿರಾಟ್​​ ಕೊಹ್ಲಿ ಶೀಘ್ರದಲ್ಲೇ ಪಾಕಿಸ್ತಾನಕ್ಕೆ ಭೇಟಿ ನೀಡುತ್ತೇನೆ ಎಂದು ಹೇಳಿದ್ದಾರೆ. ಅವರು ಹೇಳಿರುವ ಆಡಿಯೋ ಸಮೇತ ದೃಶ್ಯ ವೈರಲ್​ ಆಗಿದೆ. 

37 mins ago

ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಮಹಿಳೆಯ ತಲೆ ಸಿಕ್ಕಿಕೊಂಡು ಪರದಾಟ

ಕೆಎಸ್‌ಆರ್‌ಟಿಸಿ ಬಸ್‌ ನ ಕಿಟಕಿಯಿಂದ ಉಗುಳಲು ಹೋಗಿ ಮಹಿಳೆಯೊಬ್ಬರ ತಲೆ ಸಿಕ್ಕಿಕೊಂಡಿರುವ ಘಟನೆ ನಡೆದಿದೆ.

59 mins ago

92ನೇ ಜನ್ಮದಿನ ಆಚರಿಸಿಕೊಳ್ಳದಿರಲು ಎಚ್‌.ಡಿ. ದೇವೇಗೌಡರ ನಿರ್ಧಾರ!

ಇದೇ ತಿಂಗಳ 18 ರಂದು 92ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವ ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರು ಈ ಬಾರಿ ಹುಟ್ಟುಹಬ್ಬ…

1 hour ago