ಮೈಸೂರು

ನಂಜನಗೂಡು ಶ್ರೀಕಂಠೇಶ್ವರ ದೇಗುಲಕ್ಕೆ ಹರಿದು ಬಂದ ಭಕ್ತ ಸಾಗರ

ನಂಜನಗೂಡು: ಕಡೆಯ ಕಾರ್ತಿಕ ಸೋಮವಾರದ ಹಿನ್ನಲೆಯಲ್ಲಿ ಶ್ರೀಕಂಠೇಶ್ವರ ದೇವಾಲಯಕ್ಕೆ ಭಕ್ತ ಸಾಗರವೇ ಹರಿದು ಬಂದಿತು.

ಬೆಳಗಿನ ಜಾವ ನಾಲ್ಕು ಗಂಟೆಯಿಂದಲೇ ಭಕ್ತಾಧಿಗಳು ಕಪಿಲಾ ನದಿಯಲ್ಲಿ ಮಿಂದು ದೇವಾಲಯದ ಸುತ್ತ ಉರುಳು ಸೇವೆ ಮಾಡಿ ತಮ್ಮ ಹರಕೆಗಳನ್ನು ತೀರಿಸಿದರು ಮತ್ತೆ ನದಿಯಲ್ಲಿ ಸ್ನಾನ ಮಾಡಿ ಗಂಗೆ ಪೂಜೆ ನೆರವೇರಿಸಿದರು

ವಿವಿಧ ಕಡೆಗಳಿಂದ ಆಗಮಿಸಿದ್ದ ಭಕ್ತರಿಗೆ ದೇವಸ್ಥಾನದ ಆಡಳಿತ ವತಿಯಿಂದ ನೆರಳು ಮತ್ತು ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿತ್ತು. ಭಕ್ತರು ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನ ಮಾಡಿ ಹರಕೆ ಮತ್ತು ಸೇವೆಗಳನ್ನು ಸಲ್ಲಿಸಿದರು. ಇದೇ ವೇಳೆ ಭಕ್ತರು ಮುಡಿಸೇವೆ, ಉರುಳು ಸೇವೆ, ಬೆಳ್ಳಿ ಹರಕೆ ಸೇವೆ ಬೆಲ್ಲದಾರತಿ, ಬೆಲ್ಲದ ಸೇವೆ, ಧೂಪದ ಸೇವೆ, ಬಿಲ್ವ ಪತ್ರೆ ಸೇವೆ, ಪಂಚಾಮೃತ ಸೇವೆ ಗಳನ್ನು ನೆರವೇರಿಸಿದರು

ಅನೇಕ ಸಂಘ ಸಂಸ್ಥೆಗಳು ಭಕ್ತಾಧಿಗಳಿಗೆ ಬೆಳಿಗ್ಗೆಯಿಂದಲೇ ಮೊಸರು ಅನ್ನ, ಬಾತ್, ಲಾಡು ಮಜ್ಜಿಗೆಯನ್ನು ವಿತರಿಸಿದರು. ಎರಡು ವರ್ಷಗಳ ಬಳಿಕ ನಡೆದ ಕಾರ್ತಿಕ ಸೋಮವಾರದ ಪೂಜೆಗೆ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರಿಂದ ಭರ್ಜರಿ ವ್ಯಾಪಾರ ನಡೆಯಿತು. ರಾತ್ರಿ ವೇಳೆಯಲ್ಲಿ ಸವಿತಾ ಸಮಾಜ ವತಿಯಿಂದ ಶ್ರೀಕಂಠೇಶ್ವರ ಉತ್ಸವ ಮೂರ್ತಿ ಪಲ್ಲಕ್ಕಿ ಅಲಂಕಾರ. ಬಾಣ ಬಿರುಸು, ಭಕ್ತರ ಜೈಕಾರ ಮೊಳಗಿತು.

Gayathri SG

Recent Posts

ತೀರ್ಥಯಾತ್ರೆಗೆ ಬಂದ ನಾಲ್ವರು ನದಿಯಲ್ಲಿ ಮುಳುಗಿ ದಾರುಣ ಸಾವು

ತೀರ್ಥಯಾತ್ರೆಗೆಂದು ಅತಿಥಿ ಗೃಹಕ್ಕೆ ಬಂದಿದ್ದವರು ನದಿಯಲ್ಲಿ ಬಟ್ಟೆ ತೊಳೆಯಲು ಹೋಗಿ ನಾಲ್ವರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಕೊಲ್ಲಾಪುರದ ಕಾಗಲ್ ತಾಲೂಕಿನ…

1 min ago

ಪ್ರಾಚೀನರ ಕಲಾ ಕೊಡುಗೆಗಳ ಸಂರಕ್ಷಣೆ ಅಗತ್ಯ: ನೇಮಿರಾಜ ಶೆಟ್ಟಿ

ಇತಿಹಾಸವನ್ನು ಚಿತ್ರಗಳ ಮೂಲಕ ಜೋಪಾಸನೆ ಮಾಡುವ ಕಾಯಕವೂ ಅತ್ಯಂತ ಶ್ರೇಷ್ಠ. ಮುಂದಿನ ಪೀಳಿಗೆಗೆ ಪ್ರಾಚೀನರ ಕಲಾ ಕೊಡುಗೆಯನ್ನು ಸಂರಕ್ಷಣೆ ಮಾಡುವುದು…

6 mins ago

ಮತ್ತೆ ವಿವಾದಕ್ಕೆ ಸಿಲುಕಿದ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ

ಒಂದು ವರ್ಷದ ಸಾಧನೆಯ ರಿಪೋರ್ಟ್ ಕಾರ್ಡ್ ಹಿಡಿದು ಹಿರಿಯ ಬಿಜೆಪಿ ಮುಖಂಡರ ಬಳಿ ಶಾಸಕ ಅಶೋಕ್ ಕುಮಾರ್ ರೈ ತೆರಳಿದ್ದು, ಶಾಸಕ…

16 mins ago

ಚಾಮರಾಜನಗರ: ಹಾಸನೂರು ಘಾಟ್ ಬಳಿ ಕಾರು ಪಲ್ಟಿ

ಜಿಲ್ಲೆಗೆ ಹೊಂದಿಕೊಂಡಿರುವ ತಮಿಳುನಾಡಿನ ಹಾಸನೂರು ಘಾಟ್ ಬಳಿ ಕಾರೊಂದು ಪಲ್ಟಿಯಾದ ಘಟನೆ ನಡೆದಿದೆ.

36 mins ago

ಫ್ಲಾಟ್‌ಗಳನ್ನು ನಿರ್ಮಿಸಲು 8 ಮರಗಳನ್ನು ಕಡಿದ ಬಿಲ್ಡರ್ ವಿರುದ್ಧ ಎಫ್‌ಐಆರ್

ಫ್ಲಾಟ್‌ಗಳನ್ನು ನಿರ್ಮಿಸಲು ಎಂಟು ಮರಗಳನ್ನು ಕಡಿದ ಆರೋಪದ ಮೇಲೆ ಆಂಧ್ರಪ್ರದೇಶ ಮೂಲದ ಬಿಲ್ಡರ್ ವಿರುದ್ಧ ಬಿಬಿಎಂಪಿ ಅರಣ್ಯ ವಿಭಾಗವು ಎಫ್‌ಐಆರ್…

46 mins ago

ಸಾರಿಗೆ ಬಸ್‌, ಬೊಲೆರೋ ಗೂಡ್ಸ್‌ ವಾಹನ ಮಧ್ಯೆ ಅಪಘಾತ: ಇಬ್ಬರಿಗೆ ಗಾಯ

ಪಟ್ಟಣದ ಬೈಪಾಸ್‌ ಬಳಿ ಅಣ್ಣಿಗೇರಿಯಿಂದ ಹುಬ್ಬಳ್ಳಿ ರಸ್ತೆಗೆ ಸೇರುವ ರಸ್ತೆ ರಾಷ್ಟ್ರೀಯ ಹೆದ್ದಾರಿ 67ರಲ್ಲಿ ಸಾರಿಗೆ ಬಸ್‌ ಮತ್ತು ತರಕಾರಿ…

1 hour ago