News Karnataka Kannada
Sunday, April 28 2024
ಮೈಸೂರು

ಶ್ರವಣದೋಷ ಮುಕ್ತ ಕರ್ನಾಟಕ ನಮ್ಮ ಗುರಿ: ದಿನೇಶ್ ಗುಂಡೂರಾವ್

ಶ್ರವಣ ದೋಷ ಇರುವ ಮಕ್ಕಳನ್ನು ಪ್ರಾರಂಭಿಕ ಹಂತದಲ್ಲಿಯೆ ಗುರುತಿಸಿ ಶಸ್ತ್ರ ಚಿಕಿತ್ಸೆ ಹಾಗೂ ಶ್ರವಣ ಸಾಧನಗಳ ಅಳವಡಿಕೆ ಮೂಲಕ ಗುಣಪಡಿಸಿ ಶ್ರವಣ ದೋಷ ಮುಕ್ತ ಕರ್ನಾಟಕ ಮಾಡುವುದು ನಮ್ಮ ಗುರಿ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.
Photo Credit : By Author

ಮೈಸೂರು: ಶ್ರವಣ ದೋಷ ಇರುವ ಮಕ್ಕಳನ್ನು ಪ್ರಾರಂಭಿಕ ಹಂತದಲ್ಲಿಯೆ ಗುರುತಿಸಿ ಶಸ್ತ್ರ ಚಿಕಿತ್ಸೆ ಹಾಗೂ ಶ್ರವಣ  ಸಾಧನಗಳ ಅಳವಡಿಕೆ ಮೂಲಕ ಗುಣಪಡಿಸಿ ಶ್ರವಣ ದೋಷ ಮುಕ್ತ ಕರ್ನಾಟಕ ಮಾಡುವುದು ನಮ್ಮ ಗುರಿ ಎಂದು  ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.

ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆಯಲ್ಲಿ ಹಮ್ಮಿಕೊಂಡಿದ್ದ ಶ್ರವಣ ಸಂಜೀವಿನಿ, ಕಾಕ್ಲಿಯರ್ ಇಂಪ್ಲಾಕ್ಟ್  ಯೋಜನೆಯ ಮರು ನಾಮಕರಣ ಹಾಗೂ ಫಲಾನುಭವಿಗಳಿಗೆ ವಾಕ್ ಮತ್ತು ಶ್ರವಣ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಕಿವಿ ಕೇಳಿಸದ ಸಮಸ್ಯೆ ಹುಟ್ಟುವಾಗಲೇ ಕೆಲವರಿಗೆ ಬರುತ್ತದೆ. ಇಂತಹ ಮಕ್ಕಳಿಗೆ ಶ್ರವಣ ಸಾಧನಗಳನ್ನು ಅಳವಡಿಸುವ ಮೂಲಕ ಅಲ್ಪ ಸ್ವಲ್ಪ ಕೇಳಿಸುವಂತೆ ಮಾಡಬಹುದು. ಕಿವುಡುತನಕ್ಕೆ ಚಿಕಿತ್ಸೆ ಪಡೆಯಲು ಲಕ್ಷಾಂತರ ರೂಪಾಯಿ ಭರಿಸಬೇಕಾಗಿತ್ತು. ಇದು ಬಡವರಿಗೆ ಅಸಾದ್ಯ. ಇದರಿಂದ ಸರ್ಕಾರದ ವತಿಯಿಂದ ಉಚಿತವಾಗಿ ಶಸ್ತ್ರ ಚಿಕಿತ್ಸೆ ನೀಡಲಾಗುತ್ತಿದೆ ಎಂದರು.

ಶಸ್ತ್ರ ಚಿಕಿತ್ಸೆಗೆ ಮಗುವನ್ನು ಒಳಪಡಿಸಿ ಶ್ರವಣ ಸಾಧನ ಅಳವಡಿಸಿದ ನಂತರ ಅದನ್ನು ಒಂದೆರಡು ವರ್ಷ ವೀಕ್ಷಣೆ  ಮಾಡಬೇಕು. ಕಿವಿ ಕೇಳಿಸದ ಮಗುವಿನ ಬೆಳವಣಿಗೆ ಕುಂಠಿತವಾಗುತ್ತದೆ. ಇಂತಹ ಮಗುವನ್ನು ವಿಶೇಷ ಶಾಲೆಗೆ ಸೇರಿಸಿ ಶಿಕ್ಷಣ ನೀಡಬೇಕು. ಇಂತಹ ಮಗುವಿಗೆ ಶಸ್ತ್ರ ಚಿಕಿತ್ಸೆಯ ಮೂಲಕ ಕಿವಿ ಕೇಳಿಸುವಂತೆ ಮಾಡಿದರೆ ಆ ಮಗು ಸಾಮಾನ್ಯ ಮಕ್ಕಳ ಜತೆಗೆ ಬೆರೆತು ಉತ್ತಮ ಶಿಕ್ಷಣ ಪಡೆದು ಸಮಾಜದ ಮುಖ್ಯವಾಹಿನಿಗೆ ಬರಲು ಸಾಧ್ಯವಾಗುತ್ತದೆ. ಶ್ರವಣ ದೋಷ ನಿವಾರಣೆಗೆ ವಿಶೇಷ ತಜ್ಞರನ್ನು ನೇಮಕ ಮಾಡಿಕೊಳ್ಳಲಾಗಿದೆ. ಶ್ರವಣ ದೋಷ ಹೊಂದಿರುವ ಮಕ್ಕಳ ಪೋಷಕರು ಯಾರು ಆತಂಕ ಪಡಬಾರದು. ತಾಯಿ ಮತ್ತು ಮಕ್ಕಳ ಆರೋಗ್ಯ ರಕ್ಷಣೆ ನಮ್ಮ ಇಲಾಖೆಯ ಮೊದಲ ಆದ್ಯತೆ ಎಂದರು.

ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಮಾತನಾಡಿ, ಕೆಲವು ಮಕ್ಕಳಿಗೆ ಶ್ರವಣ ದೋಷ ಹುಟ್ಟಿನಿಂದ  ಬರುತ್ತದೆ. ಕೆಲವು ಮಕ್ಕಳಿಗೆ ಹಲವು ಕಾರಣಗಳಿಂದ ಬರುತ್ತದೆ. ಯಾವುದೇ ಮಕ್ಕಳು ಶ್ರವಣ ದೋಷ ಸಮಸ್ಯೆಗೆ ಒಳಗಾಗಬಾರದು. ಶ್ರವಣ ದೋಷ ಇರುವ ಮಕ್ಕಳಿಗೆ ಸೂಕ್ತ ಚಿಕಿತ್ಸೆ ನೀಡಿ ಕಿವಿ ಕೇಳುವ ಹಾಗೆ ಮಾಡಬೇಕು. ನಾನು ಹಿಂದೆ 5 ವರ್ಷ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವನಾಗಿದ್ದೆ. ಆಗ ಹಲವು ಯೋಜನೆಗಳನ್ನು ಜಾರಿಗೆ ತರಲಾಯಿತು ಎಂದು ಮಾಹಿತಿ ನೀಡಿದರು.

ಶಾಸಕ ತನ್ವೀರ್ ಸೇಠ್ ಮಾತನಾಡಿ, ಶ್ರವಣ ದೋಷಕ್ಕೆ ತುತ್ತಾದವರಲ್ಲಿ ಉತ್ತರ ಕರ್ನಾಟಕದ ಮಕ್ಕಳೇ ಹೆಚ್ಚು. ಈ ಬಗ್ಗೆ  ಸಂಶೋಧನೆ ಮಾಡಬೇಕು. ಬುದ್ಧಿ ಮಾಂಧ್ಯತೆ ಮಕ್ಕಳು ಹೆಚ್ಚುತ್ತಿರುವುದು ನಾವು ನೋಡುತ್ತಿದ್ದೇವೆ. ಈ ಬಗ್ಗೆ ಅಧ್ಯಯನ ಮಾಡಿ ಚಿಕಿತ್ಸೆ ನೀಡಬೇಕು. ನನಗೆ ಧನಿ ಇಲ್ಲದ ಸಂದರ್ಭದಲ್ಲಿ ನಾನು ಸಹ ವಾಕ್ ಮತ್ತು ಶ್ರವಣ ಸಂಸ್ಥೆಯಲ್ಲಿ ಚಿಕಿತ್ಸೆ ಪಡೆದು ಇಂದು ಧನಿ ಪಡೆದು ನಿಮ್ಮ ಮುಂದೆ ಮಾತನಾಡುತ್ತಿದ್ದೇನೆ. ಸರ್ಕಾರ ಆರೋಗ್ಯ ಸುಧಾರಣೆಗೆ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಆರೋಗ್ಯ ಸಮಸ್ಯೆ ಇರುವವರು ಸರ್ಕಾರದ ಆರೋಗ್ಯ ಸೌಲಭ್ಯಗಳ ಸದುಪಯೋಗ ಪಡೆದುಕೊಳ್ಳಿ ಎಂದರು.

ಇದೇ ವೇಳೆ ಫಲಾನುಭವಿ ಮಕ್ಕಳಿಗೆ ಶ್ರವಣ ಸಾಧನ ಹಾಗೂ ಕಾಕ್ಲಿಯರ್ ಇಂಪ್ಲಾಂಟ್ ಕಿಟ್‌ಗಳನ್ನು ವಿತರಣೆ  ಮಾಡಲಾಯಿತು.

ಕಾರ್ಯಕ್ರಮದಲ್ಲಿ ಶಾಸಕ ಕೆ.ಹರೀಶ್ ಗೌಡ, ರಾಷ್ಟ್ರೀಯ ಆರೋಗ್ಯ ಅಭಿಯಾನದ ನಿರ್ದೇಶಕ ಡಾ.ನವೀನ್ ಭಟ್,  ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ನಿರ್ದೇಶಕಿ ಡಾ.ಪುಷ್ಪಲತಾ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕುಮಾರಸ್ವಾಮಿ, ಶ್ರವಣ ಶಸ್ತ್ರ ಚಿಕಿತ್ಸಾ ತಜ್ಞ ಡಾ.ಶಂಕರ್ ಮಡಿಕೇರಿ, ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆಯ ನಿರ್ದೇಶಕಿ ಪುಷ್ಪವತಿ, ಮೈಸೂರು ವಿಭಾಗೀಯ ಸಹ ನಿರ್ದೇಶಕಿ ರಾಜೇಶ್ವರಿ ದೇವಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು